ಸಿದ್ದಾಪುರ: ತಾಲೂಕಿನಲ್ಲಿ ಗುರುವಾರ ಇಬ್ಬರು ಮಹಿಳೆಯರಿಗೆ ಮಂಗನ ಕಾಯಿಲೆ ಕಾಣಿಸಿಕೊಂಡಿದ್ದು ಇಲ್ಲಿಯವರೆಗೆ ಒಟ್ಟು 61ಜನರಲ್ಲಿ ಮಂಗನ ಕಾಯಿಲೆ ಕಾಣಿಸಿಕೊಂಡಂತಾಗಿದೆ.
ಹೆಗ್ಗೆಕೊಪ್ಪದ 48 ವರ್ಷದ ಹಾಗೂ ಮಂಡಗಳಲೆಯ 55 ವರ್ಷದ ಮಹಿಳೆಯಲ್ಲಿ ಮಂಗನ ಕಾಯಿಲೆ ಕಂಡುಬಂದಿದೆ. ಐದು ಜನ ಸಿದ್ದಾಪುರ ಸರ್ಕಾರಿ ಹಾಗೂ ನಾಲ್ವರು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. 48ಜನ ಗುಣಮುಖರಾಗಿ ಮನೆಯಲ್ಲಿದ್ದು, ನಾಲ್ವರು ಮೃತಪಟ್ಟಿದ್ದಾರೆ. ದಿನದಿಂದ ದಿನಕ್ಕೆ ಮಂಗನ ಕಾಯಿಲೆ ಹೆಚ್ಚಾಗುತ್ತಿದ್ದು ಜನತೆಯಲ್ಲಿ ಆತಂಕ ಹೆಚ್ಚಾಗುತ್ತಿರುವುದಲ್ಲದೆ ಆರೋಗ್ಯ ಇಲಾಖೆಗೆ ಇದೊಂದು ಸವಾಲಾಗಿ ಪರಿಣಮಿಸಿದೆ ಎಂದು ಹೇಳಲಾಗುತ್ತಿದೆ.