Slide
Slide
Slide
previous arrow
next arrow

ಕುಣಬಿ ಜನಾಂಗವನ್ನು ಪ.ಪಂಗಡಕ್ಕೆ ಸೇರಿಸುವಂತೆ ಕೇಂದ್ರ ಸರಕಾರಕ್ಕೆ ಮನವಿ

300x250 AD

ದಾಂಡೇಲಿ : ನಾಡಿನ ಬುಡಕಟ್ಟು ಸಾಂಸ್ಕೃತಿಕ ಲೋಕಕ್ಕೆ ತನ್ನದೇ ಆದ ಕೊಡುಗೆಯನ್ನು ನೀಡುತ್ತಾ ಬಂದಿರುವ ಕುಣಬಿ ಬುಡಕಟ್ಟು ಸಮುದಾಯವನ್ನು ಅವರ ಆರ್ಥಿಕ ಸ್ಥಿತಿಗತಿಗೆ ಅನುಗುಣವಾಗಿ ಅವರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ದಾಂಡೇಲಿ ಸಮಗ್ರ ಅಭಿವೃದ್ಧಿ ಹೋರಾಟ ಸಮಿತಿಯ ಅಧ್ಯಕ್ಷರಾದ ಅಕ್ರಂ ಖಾನ್ ಕೇಂದ್ರ ಸರಕಾರಕ್ಕೆ  ಶುಕ್ರವಾರ ದಾಂಡೇಲಿ ನಗರದಲ್ಲಿ ಮಾಧ್ಯಮದ ಮೂಲಕ ಮನವಿಯನ್ನು ಮಾಡಿದ್ದಾರೆ.

ಕುಣಬಿ ಬುಡಕಟ್ಟು ಸಮುದಾಯದವರು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಆಗ್ರಹಿಸಿ ಉಪವಾಸ ಸತ್ಯಾಗ್ರಹದ ಹೋರಾಟವನ್ನು ಹಮ್ಮಿಕೊಂಡಿದ್ದರು. ಅವರ ಹೋರಾಟ ನ್ಯಾಯೋಚಿತವಾಗಿದೆ. ಕುಣಬಿಗಳ ಈ ನ್ಯಾಯೋಚಿತವಾದ ಹೋರಾಟಕ್ಕೆ ದಾಂಡೇಲಿ ಸಮಗ್ರ ಅಭಿವೃದ್ಧಿ ಹೋರಾಟ ಸಮಿತಿಯಿಂದ ಸಂಪೂರ್ಣ ಬೆಂಬಲವಿದೆ ಎಂದರು.

300x250 AD

ಈ ಸಂದರ್ಭದಲ್ಲಿ ದಾಂಡೇಲಿ ತಾಲೂಕು ಸಮಗ್ರ ಅಭಿವೃದ್ಧಿ ಹೋರಾಟ ಸಮಿತಿಯ ಪದಾಧಿಕಾರಿಗಳಾದ ಅಶೋಕ್ ಪಾಟೀಲ್, ರಾಘವೇಂದ್ರ ಗಡೆಪ್ಪನವರ್, ಮಹಮ್ಮದ್ ಗೌಸ್ ಬೆಟಗೇರಿ, ಶಿವಾನಂದ‌ ಮೊದಲಾದವರು ಉಪಸ್ಥಿತರಿದ್ದರು.

Share This
300x250 AD
300x250 AD
300x250 AD
Back to top