ಶಿರಸಿ: ಇಲ್ಲಿನ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ಜಗದೀಶ ಗೌಡ ಶುಕ್ರವಾರ ಅಧಿಕಾರ ವಹಿಸಿಕೊಂಡರು. ನಗರದ ಯೋಜನಾ ಪ್ರಾಧಿಕಾರದ ಕಛೇರಿಯಲ್ಲಿ ಪಕ್ಷದ ಮುಖಂಡರು, ಅಭಿಮಾನಿಗಳ ಸಮ್ಮುಖದಲ್ಲಿ ಅಧಿಕಾರ ಸ್ವೀಕರಿಸಿದರು. ಶಾಸಕ ಭೀಮಣ್ಣ ನಾಯ್ಕ ಆಗಮಿಸಿ ನೂತನ ಅಧ್ಯಕ್ಷರಿಗೆ ಹಾಗೂ ಸದಸ್ಯರಿಗೆ ಶುಭಕೋರಿದರು.
ನಂತರ ಮಾತನಾಡಿದ ನೂತನ ಅಧ್ಯಕ್ಷ ಜಗದೀಶ ಗೌಡ, ಇದು ಸಂತಸ ತಂದಿದೆ. ಜೊತೆಗೆ ನಗರ ಯೋಜನಾ ಪ್ರಾಧಿಕಾರದ ಬಗ್ಗೆ ಹಲವು ಮಾಹಿತಿಗಳನ್ನು ಪಡೆದುಕೊಂಡಿದ್ದೇನೆ. ಹಲವು ಲೋಪದೋಷಗಳು ಇರುವುದಾಗಿ ತಿಳಿದು ಬಂದಿದೆ. ಶಾಸಕರ ಮಾರ್ಗದರ್ಶನದಲ್ಲಿ ಕಾರ್ಯ ನಿರ್ವಹಿಸುತ್ತೇನೆ. ಶಾಸಕ ಭೀಮಣ್ಣ ನಾಯ್ಕ ಹಾಗು ಸಹಕರಿಸಿದ ಎಲ್ಲರಿಗೂ ಧನ್ಯವಾದ ತಿಳಿಸಿದ್ದಾರೆ. ಈ ವೇಳೆ ಕಾಂಗ್ರೆಸ್‌ನ ಹಲವು ಮುಖಂಡರು, ಅಭಿಮಾನಿಗಳು ನೂತನ ಅಧ್ಯಕ್ಷರಿಗೆ ಹಾಗೂ ಸದಸ್ಯರಿಗೆ ಸನ್ಮಾನಿಸಿ ಶುಭಕೋರಿದರು.