ಶಿರಸಿ: ತೀವ್ರ ಕುತೂಹಲ ಮೂಡಿಸಿರುವ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಭಾಜಪಾದ ಟಿಕೆಟ್ ಹಂಚಿಕೆ ಕಗ್ಗಂಟಾಗಿ ಉಳಿದಿದ್ದು, ಹೈ ಕಮಾಂಡ್ ಸಂಸದ, ಹಿಂದೂ ಹುಲಿ ಅನಂತಕುಮಾರ ಹೆಗಡೆಯನ್ನು ಕರೆಸಿಕೊಳ್ಳುತ್ತಿದೆ ಎಂಬ ಮಾಹಿತಿ ದೊರೆತಿದೆ.
ಕಳೆದ ಕೆಲ ದಿನದ ಹಿಂದೆ ಭಾಜಪಾ ಘೋಷಿಸಿದ್ದ ಅಭ್ಯರ್ಥಿಗಳ ಪೈಕಿ ಉತ್ತರ ಕನ್ನಡ ಸೇರಿದಂತೆ ಎಂಟು ಕ್ಷೇತ್ರಗಳ ಟಿಕೆಟ್ ಘೋಷಣೆ ಬಾಕಿ ಇರಿಸಿತ್ತು. ಈ ನಿಟ್ಟಿನಲ್ಲಿ ಅಂತಿಮವಾಗಿ ಅಭ್ಯರ್ಥಿ ಘೋಷಿಸುವ ಮುನ್ನ ಜಿಲ್ಲೆಯ ಸಂಸದ ಅನಂತಕುಮಾರ ಜೊತೆ ಮಾತನಾಡಿ ನಿರ್ಣಯ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.
ಮಾಜಿ ವಿಧಾನಸಭಾಧ್ಯಕ್ಷ ಕಾಗೇರಿಗೆ ಬಿಜೆಪಿ ಮಣೆ:
ಸಜ್ಜನ ರಾಜಕಾರಣಿ, ಬಿಜೆಪಿಯ ಕಟ್ಟಾಳು ಎಂದೇ ಗುರುತಿಸಿಕೊಂಡಿರುವ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಪರ ಬಿಜೆಪಿ ಹೈಕಮಾಂಡ್ ಹೆಚ್ಚಿನ ಒಲವು ತೋರಿಸಿದೆ ಎನ್ನಲಾಗಿದ್ದು, ಉನ್ನತ ಮೂಲಗಳ ಪ್ರಕಾರ ಮಾಜಿ ಸ್ಪೀಕರ್ ಕಾಗೇರಿಯನ್ನು ಉತ್ತರ ಕನ್ನಡ ಜಿಲ್ಲಾ ಲೋಕಸಭಾ ಅಭ್ಯರ್ಥಿಯನ್ನಾಗಿ ಘೋಷಿಸುವ ಸಾಧ್ಯತೆ ದಟ್ಟವಾಗಿದೆ.