ಕಾರವಾರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಹಾರ ನಾಗರಿಕರ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಕಾನೂನು ಮಾಪನ ಶಾಸ್ತ್ರ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಆಹಾರ ಸುರಕ್ಷತೆ ಇಲಾಖೆ, ಕರ್ನಾಟಕ ಆಹಾರ ನಿಗಮ ಹಾಗೂ ಪ್ರೀಮಿಯರ್ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜು ನಂದನಗದ್ದಾ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಗ್ರಾಹಕರ ದಿನಾಚರಣೆ ಹಾಗೂ ಗ್ರಾಹಕರ ಚಟುವಟಿಕೆ ಕಾರ್ಯಕ್ರಮವು ಮಾ.18 ರಂದು ಬೆಳಗ್ಗೆ 10.15 ಗಂಟೆಗೆ ನಂದನಗದ್ದಾದ ಪ್ರೀಮಿಯರ್ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮವನ್ನು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಾಯಣ್ಣ ಬಿ.ಎಲ್. ಉದ್ಘಾಟಿಸಲಿದ್ದು, ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಈಶ್ವರ ಕುಮಾರ ಕಾಂದೂ, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರೇಣುಕಾ ಡಿ ರಾಯ್ಕರ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ಡಾ. ಮಂಜುನಾಥ ಎಮ್ ಬೊಮ್ಮನಕಟ್ಟಿ, ಸದಸ್ಯೆ ನೈನಾ ಅಶೋಕ ಕಾಮಟೆ, ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಜಿ.ಎನ್. ಜಾಂಬಾವಳಿಕರ್, ಪ್ರೀಮಿಯರ್ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜಿನ ಗೋವಿಂದಪ್ಪ ಆರ್ ಮತ್ತಿತರರು ಪಾಲ್ಗೊಳ್ಳಲಿದ್ದಾರೆ.