Slide
Slide
Slide
previous arrow
next arrow

ರಾಷ್ಟ್ರೀಯ ಲೋಕ ಅದಾಲತ್: 33,547 ಪ್ರಕರಣಗಳು ಇತ್ಯರ್ಥ

300x250 AD

ಕಾರವಾರ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರವಾರ ಹಾಗೂ ಉತ್ತರ ಕನ್ನಡ ಜಿಲ್ಲೆಯ ಎಲ್ಲಾ ತಾಲೂಕು ಕಾನೂನು ಸೇವಾ ಸಮಿತಿಗಳ ಆಶ್ರಯದಲ್ಲಿ ಮಾರ್ಚ್ 16 ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಿತು.
ಜಿಲ್ಲೆಯಾದ್ಯಂತ ಒಟ್ಟ 30 ಪೀಠಗಳಲ್ಲಿ 28,765 ವ್ಯಾಜ್ಯ ಪೂರ್ವ ಪ್ರಕರಣಗಳು ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ 4782 ಪ್ರಕರಣಗಳಲ್ಲಿ ಸೇರಿದಂತೆ ಒಟ್ಟ 33,547 ಪ್ರಕರಣಗಳು ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಇತ್ಯರ್ಥ ಮಾಡಲಾಯಿತು. ಹಾಗೂ ಈ ಪ್ರಕರಣಗಳಿಗೆ ಸಂಬಂಧಪಟ್ಟಂತೆ ಸಾಲ ಮರುಪಾವತಿ, ಪರಿಹಾರ, ದಂಡ ಹಾಗೂ ಇತ್ಯಾದಿ ಹಣಕಾಸಿನ ಪ್ರಕರಣಗಳಿಗೆ ಸಂಬಂಧಪಟ್ಟಂತೆ ಒಟ್ಟು ರೂ 50,72,20,712 ಹಣ ಸಂಗ್ರಹ ಮತ್ತು ಪಾವತಿಯಾಗಿದೆ.
ವಿಶೇಷವಾಗಿ ಪತಿ ಪತ್ನಿ ಕಲಹಕ್ಕೆ ಸಂಬಂಧಪಟ್ಟಂತೆ ನ್ಯಾಯಾಲಯದ ಮೆಟ್ಟಿಲು ಏರಿದ 3 ದಂಪತಿಗಳು ಒಟ್ಟಿಗೆ ಜೀವನ ನಡೆಸಲ ಒಪ್ಪಿಕೊಂಡು ಕೂಡಿ ಹೋಗಿರುವ ಒಳ್ಳೆಯ ಬೆಳವಣಿಗೆಯು ಕೂಡ ನ್ಯಾಯಾಲಯದ ಲೋಕ ಅದಾಲತನಲ್ಲಿ ನಡೆಯಿತು. ಈ ಬಾರಿಯ ರಾಷ್ಟ್ರೀಯ ಲೋಕ ಅದಾಲತ್ ನಲ್ಲಿ ಸುಮಾರು 47 ವರ್ಷ ಹಳೆಯ ಕುಟುಂಬದ ಆಸ್ತಿ ವಿಭಜನೆಯ ಪ್ರಕರಣ ರಾಜಿ ಸಂಧಾನದ ಮೂಲಕ ಇತ್ಯರ್ಥಗೊಂಡಿರುವುದು ವಿಶೇಷವಾಗಿದೆ ಎಂದು ಗೌರವಾನ್ವಿತ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಡಿ ಎಸ್. ವಿಜಯಕುಮಾರ್ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರೇಣುಕಾ ಡಿ ರಾಯ್ಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top