Slide
Slide
Slide
previous arrow
next arrow

ಶ್ರೀ ಮಾರಿಕಾಂಬಾ ದೇವಿ ಜಾತ್ರಾ ಪ್ರಯುಕ್ತ ವಿಶೇಷ ಹೆಚ್ಚುವರಿ ಬಸ್ ಸೌಲಭ್ಯ

300x250 AD

ಶಿರಸಿ: ಮಾರ್ಚ್ 19 ರಿಂದ ಮಾರ್ಚ್ 27ರವರೆಗೆ ಜರುಗುವ ಶ್ರೀ ಮಾರಿಕಾಂಬಾ ದೇವಿ ಜಾತ್ರಾ ನಿಮಿತ್ತ ಪ್ರಯಾಣಿಕರ ಅನುಕೂಲಕ್ಕಾಗಿ ವಾಕರಸಾಸಂಸ್ಥೆ ಶಿರಸಿ ವಿಭಾಗದ ವತಿಯಿಂದ ಹೆಚ್ಚುವರಿ ವಿಶೇಷ ಬಸ್‌ಗಳು ಕಾರ್ಯಚರಣೆ ನಡೆಸಲಿದೆ.

ಶಿರಸಿ ಹಳೆ ಬಸ್ ನಿಲ್ದಾಣದ ಸುತ್ತಮುತ್ತ ಜಾತ್ರಾ ಅಂಗಡಿ-ಮುಂಗಟ್ಟು ಹಾಕುವುದರಿಂದ ಬಸ್ ಸಂಚಾರಕ್ಕೆ ತೊಂದರೆಯಾಗುವುದರಿಂದ ಹಳೆ ಬಸ್ ನಿಲ್ದಾಣದ ಸಾರಿಗೆ ಕಾರ್ಯಾಚರಣೆಗಳನ್ನು ಹೊಸ ಬಸ್ ನಿಲ್ದಾಣದಿಂದ ಮಾಡಲಾಗುವುದು. ಶ್ರೀ ಮಾರಿಕಾಂಬಾ ಜಾತ್ರೆಗೆ ಬರುವ ಭಕ್ತಾಧಿಗಳಿಗೆ ವಿಶೇಷ ಸಾರಿಗೆ ಸೌಲಭ್ಯ ಕಲ್ಪಿಸಲು ಹೆಚ್ಚುವರಿಯಾಗಿ ಶಿರಸಿಯಿಂದ ಹಾನಗಲ್, ಹಾವೇರಿ, ಹುಬ್ಬಳ್ಳಿ, ಗದಗ, ಲಕ್ಷ್ಮೇಶ್ವರ, ಸಿದ್ದಾಪುರ, ಸಾಗರ, ಕುಮಟಾ, ಹೊನ್ನಾವರ, ಬೈಂದೂರು, ಕುಂದಾಪುರ, ಯಲ್ಲಾಪುರ, ದಾಂಡೇಲಿ, ಅಂಕೋಲಾ, ಕಾರವಾರ ಮತ್ತು ಪ್ರಮುಖ ಊರುಗಳಿಗೆ ವಿಶೇಷ ಸಾರಿಗೆಗಳನ್ನು ಕಾರ್ಯಾಚರಿಸಲಾಗುವುದು.

300x250 AD

ಜಾತ್ರೆಯ ದಿನಗಳಲ್ಲಿ ಹಾನಗಲ್, ಹಾವೇರಿ, ಹುಬ್ಬಳ್ಳಿ ಕಡೆಗೆ ಹೋಗುವ ಸಾರಿಗೆಗಳನ್ನು ಶಿರಸಿ ಹೊಸ ಬಸ್ ನಿಲ್ದಾಣದಿಂದ-ಅಶ್ವಿನಿ ಸರ್ಕಲ್- ಮಾಸ್ತಿಕಟ್ಟಾ ಸರ್ಕಲ್ -ಎಪಿಎಂಸಿ- ಶಿರಸಿ ಘಟಕ-ವಿವೇಕಾನಂದ ಕ್ರಾಸ್-ಚಿಪಗಿ ಸರ್ಕಲ್ ಮಾರ್ಗವಾಗಿ ಸಂಚರಿಸಲಿವೆ. ಶಿರಸಿ ಮಾರಿಕಾಂಬಾ ದೇವಸ್ಥಾನದ ಮುಂದೆ ರಸ್ತೆಯನ್ನು ಬಸ್ ಸಂಚಾರಕ್ಕೆ ನಿಷೇಧಿಸಿರುವುದರಿಂದ ಬನವಾಸಿ ಮಾರ್ಗದ ಸಾರಿಗೆಗಳನ್ನು ರಾಮನಬೈಲ್ ಕ್ರಾಸನಿಂದ ಕಾರ್ಯಾಚರಣೆ ಮಾಡಲಾಗುವುದು.
ಸಿದ್ದಾಪುರ, ಸಾಗರ, ಕುಮಟಾ, ಹೊನ್ನಾವರ, ಬೈಂದೂರು, ಕುಂದಾಪುರ ಸಾರಿಗೆಗಳನ್ನು ಶಿರಸಿ ಹೊಸ ಬಸ್ ನಿಲ್ದಾಣದಿಂದ ಪದ್ಮಶ್ರೀ ಸರ್ಕಲ್, ಹನುಮಾನ ವ್ಯಾಯಾಮ ಶಾಲೆ, ಐದು ರಸ್ತೆ ಸರ್ಕಲ್ ಮುಖಾಂತರ ಸಂಚರಿಸುತ್ತವೆ. ಪ್ರಯಾಣಿಕರು ಶಿರಸಿ ಹೊಸ ಬಸ್ ನಿಲ್ದಾಣ ಅಥವಾ ಹನುಮಾನ ವ್ಯಾಯಾಮ ಶಾಲೆ ಆವರಣ ಬಸ್ ತಂಗುದಾಣದಿಂದ ಪ್ರಯಾಣಿಸಬಹುದಾಗಿದೆ.
ಸಿದ್ದಾಪುರ, ಸಾಗರ, ಕುಮಟಾ, ಹೊನ್ನಾವರ, ಬೈಂದೂರು, ಕುಂದಾಪುರ ಭಾಗದಿಂದ ಶಿರಸಿಗೆ ಬರುವ ಪ್ರಯಾಣಿಕರು ರಾಯಪ್ಪಾ ಹುಲೇಕಲ್ ಶಾಲಾ ತಂಗುದಾಣಕ್ಕೆ ಅಥವಾ ಹೊಸ ಬಸ್ ನಿಲ್ದಾಣದಲ್ಲಿ ಇಳಿಯಬಹುದಾಗಿದೆ.
ಅಶ್ವಿನಿ ಸರ್ಕಲ್, ರಾಮನಬೈಲ್ ಕ್ರಾಸ, ಎಪಿಎಂಸಿ ಕ್ರಾಸ(ಹುಬ್ಬಳ್ಳಿ ರಸ್ತೆ) ಹನುಮಾನ ವ್ಯಾಯಾಮ ಶಾಲೆ ಆವರಣ ಮತ್ತು ರಾಯಪ್ಪಾ ಹುಲೇಕಲ್ ಶಾಲಾ ಆವರಣದಲ್ಲಿ ತಾತ್ಕಾಲಿಕ ಬಸ್ ತಂದುದಾಣಗಳನ್ನು ನಿರ್ಮಿಸಲಾಗಿದೆ.
ಈ ವ್ಯವಸ್ಥೆಯು ಹಳೆ ಬಸ್ ನಿಲ್ದಾಣದ ಜಾಗವನ್ನು ಖುಲ್ಲಾ ಪಡಿಸುವ ವರೆಗೆ ಜಾರಿಯಲ್ಲಿರುತ್ತದೆ. ಸಾರಿಗೆ ವ್ಯವಸ್ಥೆಗಳ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆTel:+917760991725,Tel:+917760991702,Tel:+917760991713,Tel:+919980430323,Tel:+917795984168 ಮತ್ತು Tel:+9108384-229952 ನ್ನು ಸಂಪರ್ಕಿಸಬಹುದಾಗಿದೆ.
ಸಾರ್ವಜನಿಕರು ಮತ್ತು ಭಕ್ತಾಧಿಗಳು ಸುರಕ್ಷಿತ ಮತ್ತು ಸುಖಕರ ಪ್ರಯಾಣಕ್ಕಾಗಿ ಸಂಸ್ಥೆಯ ಬಸ್ಸುಗಳಲ್ಲಿ ಪ್ರಯಾಣಿಸುವಂತೆ ಶಿರಸಿ ಉಪ ವಿಭಾಗದ ವಾಕರಸಾಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This
300x250 AD
300x250 AD
300x250 AD
Back to top