ಮುಂಡಗೋಡು: ಪ್ರಧಾನಿ ಮೋದಿ ಜನ್ಮದಿನದ ಅಂಗವಾಗಿ ಪಟ್ಟಣದಲ್ಲಿ ಓಮ್‌ಗ್ಯಾಸ್ ಏಜೆನ್ಸಿಯ ಮಾಲೀಕರಾದ ಬಸವರಾಜ್ ಓಶೀಮಠ್ ಅವರ ನೇತೃತ್ವದಲ್ಲಿ ಬಿಪಿಎಲ್ ಕಾರ್ಡುದಾರರಿಗೆ ಉಜ್ವ ಯೋಜನೆಯಡಿ ಗ್ಯಾಸ್ ಸಿಲಿಂಡರ್ ವಿತರಿಸಲಾಯಿತು.
ಈ ವೇಳೆ ಮಾತನಾಡಿದ ಅವರು, ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರಕಾರದ ಯೋಜನೆಗಳು ಭಾರತದ ಪ್ರತಿ ಮನೆಗಳಿಗೆ ತಲುಪಬೇಕು. ಬಡವರ್ಗದ ಅಭಿವೃದ್ಧಿ ಸರಕಾರದ ಆದ್ಯತೆಯಾಗಿದೆ. ಆ ನಿಟ್ಟಿನಲ್ಲಿ ನಾವೆಲ್ಲರೂ ಕಾರ್ಯೋನ್ಮುಖರಾಗೋಣ ಎಂದರು.