Slide
Slide
Slide
previous arrow
next arrow

ಅಕ್ರಮ ಮರಳು ದಾಸ್ತಾನು, ಸಾಗಾಟ: ಪೊಲೀಸರಿಂದ ದಾಳಿ

300x250 AD

ಜೋಯಿಡಾ: ತಾಲೂಕಿನ ಸಿಂಗರಗಾವ್ ಪ್ರದೇಶದಲ್ಲಿ ಅಕ್ರಮವಾಗಿ ಮರಳು ದಾಸ್ತಾನು ಮತ್ತು ಸಾಗಾಟ‌ ನಡೆಯುತ್ತಿರುವ ಸಂದರ್ಭದಲ್ಲಿ ರಾಮನಗರ ಪೊಲೀಸರು ದಾಳಿ ನಡೆಸಿದ ಘಟನೆ ಬುಧವಾರ ನಸುಕಿನ ವೇಳೆಯಲ್ಲಿ ನಡೆದಿದೆ.

ಸಿಂಗರಗಾವ್ ಪ್ರದೇಶದಲ್ಲಿ ಅಕ್ರಮವಾಗಿ ಮರಳನ್ನು ದಾಸ್ತಾನಿಡಲಾಗಿದ್ದು, ಇಲ್ಲಿಂದ ತಾಲೂಕಿನ ವಿವಿಧೆಡೆಗಳಿಗೆ ಟ್ರ್ಯಾಕ್ಟರ್ ಮೂಲಕ ಮರಳು ಸಾಗಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿಯನ್ನಾಧರಿಸಿ ರಾಮನಗರದ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿಯ ಸಂದರ್ಭದಲ್ಲಿ ಅಕ್ರಮವಾಗಿ ದಾಸ್ತಾನಿಟ್ಟಿರುವ ಮರಳು ಮತ್ತು ಮರಳನ್ನು ಹೇರಿಕೊಂಡಿರುವ ಟ್ರ್ಯಾಕ್ಟರ್ ಪತ್ತೆಯಾಗಿದೆ. ಈ ಬಗ್ಗೆ ರಾಮನಗರದ ಪೊಲೀಸರು ಪರಿಶೀಲನೆಯನ್ನು ನಡೆಸಿ ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.

300x250 AD
Share This
300x250 AD
300x250 AD
300x250 AD
Back to top