Slide
Slide
Slide
previous arrow
next arrow

ದಾಂಡೇಲಿಯಲ್ಲಿ ಜಗದ್ಗುರು ಶ್ರೀರೇಣುಕಾಚಾರ್ಯ ಜಯಂತಿ ಆಚರಣೆ

300x250 AD

ದಾಂಡೇಲಿ : ನಗರದ ಅಂಬೇವಾಡಿಯಲ್ಲಿರುವ ತಾಲೂಕು ಆಡಳಿತ ಸೌಧದಲ್ಲಿ ಜಗದ್ಗುರು ಶ್ರೀ ರೇಣುಕಾಚಾರ್ಯ ಅವರ ಜಯಂತಿ ಕಾರ್ಯಕ್ರಮವನ್ನು ಶನಿವಾರ ಆಚರಿಸಲಾಯಿತು.

ಕಾರ್ಯಕ್ರಮದ ಆರಂಭದಲ್ಲಿ ತಹಶೀಲ್ದಾರ್ ಎಂ.ಎನ್.ಮಠದ ಜಗದ್ಗುರು ರೇಣುಕಾಚಾರ್ಯರ ಭಾವಚಿತ್ರಕ್ಕೆ ಆರತಿಯನ್ನು ಬೆಳಗಿ ಪುಷ್ಪ ಗೌರವವನ್ನು ಸಲ್ಲಿಸಿದರು. ಆನಂತರ ಮಾತನಾಡಿದ ಅವರು, ಜಗದ್ಗುರು ಶ್ರೀ ರೇಣುಕಾಚಾರ್ಯ ಅವರು ಸಿದ್ಧಾಂತ ಶಿಖಾಮಣಿಯಂತಹ ಮಹಾನ್ ಗ್ರಂಥವನ್ನು ಕೊಡುಗೆಯಾಗಿ ನೀಡಿದ್ದಾರೆ. ಸಾಮರಸ್ಯ, ಸಹಬಾಳ್ವೆ, ಸೌಹಾರ್ದತೆಯ ಬದುಕನ್ನು ಅವರು ಬೋಧಿಸಿದ್ದಾರೆ. ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದಾದ್ಯಂತ ಅವರು ಲಕ್ಷಾಂತರ ಭಕ್ತ ಸಮೂಹವನ್ನು ಹೊಂದಿದ್ದಾರೆ ಎಂದರು. ಮಹಾತ್ಮರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಸದೃಢ ಸಮಾಜ ನಿರ್ಮಾಣದಲ್ಲಿ ನಮ್ಮನ್ನು ನಾವು ತೊಡಗಿಸಿಕೊಳ್ಳಬೇಕೆಂದು ಕರೆ ನೀಡಿದರು.

300x250 AD

ಈ ಸಂದರ್ಭದಲ್ಲಿ ಬೇಡ ಜಂಗಮ ಸಮಾಜದ ಗೌರವಾಧ್ಯಕ್ಷರಾದ ಶಶಿಧರ್ ಓಶೀಮಠ, ಅಧ್ಯಕ್ಷರಾದ ಮಧುಕೇಶ್ವರ ಹಿರೇಮಠ್, ಬೇಡ ಜಂಗಮ ಸಮಾಜದ ಪ್ರಮುಖರಾದ ಸಿ.ಎಸ್ ವಸ್ತ್ರದ್, ಡಾ.ಶೇಖರ್ ಹಂಚಿನಾಳಮಠ, ಗುರು ಮಠಪತಿ, ಶಂಕರಯ್ಯ ಹಿರೇಮಠ, ಪಿ.ಸಿ.ಕನಕೇರಿಮಠ, ವಿಶ್ವೇಶ್ವರಯ್ಯ ಹಿರೇಮಠ, ಮಹಂತೇಶ್ ಜುಕ್ತಿಮಠ, ಮಲ್ಲಿಕಾರ್ಜುನ ಹಿರೇಮಠ, ಚಿರಂಜೀವಿ ಹಿರೇಮಠ, ಕಂದಾಯ ನಿರೀಕ್ಷಕರಾದ ರಾಘವೇಂದ್ರ ಪಾಟೀಲ್ ಆಹಾರ ನಿರೀಕ್ಷಕರಾದ ಗೋಪಿ ಚೌಹ್ವಾಣ್ ತಹಶೀಲ್ದಾರ್ ಕಚೇರಿಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Share This
300x250 AD
300x250 AD
300x250 AD
Back to top