Slide
Slide
Slide
previous arrow
next arrow

ಗ್ಯಾಸ್ ಟ್ಯಾಂಕರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

300x250 AD

ಹೊನ್ನಾವರ : ಪಟ್ಟಣದ ರಾಷ್ಟ್ರೀಯ ಹೆದ್ದಾರಿ-66 ರಲ್ಲಿ ಜೋಗಮಠ ಹತ್ತಿರ ಕರ್ನಲ್  ಕಂಬ ಎದುರು ಶನಿವಾರ ರಾತ್ರಿ ಸಮಯದಲ್ಲಿ ಮಂಗಳೂರು ಕಡೆಯಿಂದ ಕುಮಟಾ ಮಾರ್ಗವಾಗಿ ಹೋಗುತ್ತಿದ್ದ ಗ್ಯಾಸ್ ಟ್ಯಾಂಕರ್ ವಾಹನ ಸಂಖ್ಯೆ ಟಿಎ-88 ಬಿ-2158 ರಸ್ತೆ ಅಂಚಿನ ಹೊಂಡಕ್ಕೆ ಪಲ್ಟಿಯಾಗಿದೆ. ಗ್ಯಾಸ್ ಟ್ಯಾಂಕರ್‌ನಲ್ಲಿ ಗ್ಯಾಸ್ ತುಂಬಿದ್ದು, ಯಾವುದೇ ಲೀಕೇಜ್ ಆಗದಿರುವ ಬಗ್ಗೆ ಮಾಹಿತಿ ದೊರಕಿದ್ದು, ಭಾರಿ ಅನಾಹುತ ತಪ್ಪಿದೆ.

ಸ್ಥಳದಲ್ಲಿ ಅಗ್ನಿಶಾಮಕ ಸಿಬ್ಬಂದಿ ಹಾಗೂ ಹೊನ್ನಾವರ ಠಾಣೆಯ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳು ಹಾಗೂ ಭಾರತ್ ಪೆಟ್ರೋಲಿಯಂನ ಕ್ವಿಕ್ ರೆಸ್ಪಾನ್ಸ್ ಟೀಮ್ ವೆಹಿಕಲ್ ಆಗಮಿಸಿ, ಪರಿಶೀಲನೆ ನಡೆಸುತ್ತಿದ್ದಾರೆ.

300x250 AD
Share This
300x250 AD
300x250 AD
300x250 AD
Back to top