ಕಾರವಾರ: ಕುಮಟಾದ ಕೆನರಾ ಬ್ಯಾಂಕ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ಏಪ್ರಿಲ್ 4 ರಿಂದ 13 ರವರೆಗೆ 10 ದಿನಗಳ ಪಾಸ್ಟ್ ಪುಡ್ ಸ್ಟಾಲ್ ಉದ್ಯಮದ ಬಗ್ಗೆ ಉಚಿತ ತರಬೇತಿಯನ್ನು ಆಯೋಜಿಸಲಾಗಿದೆ.
ಈ ತರಬೇತಿಯಲ್ಲಿ ಪಾನಿಪುರಿ, ಸಮೋಸ್, ಪಪ್ಸ್, ಗೋಬಿ ಮಂಚೂರಿ, ನೂಡಲ್ಸ್, ಕೇಕ್, ಬಜ್ಜಿ, ಬೋಂಡ ಹೀಗೆ ಮುಂತಾದವುಗಳನ್ನು ಕಲಿಸಿಕೊಡಲಾಗುವುದು. ತರಬೇತಿಯು ಊಟ ಮತ್ತು ವಸತಿ ಸಹಿತ ಉಚಿತವಾಗಿರುತ್ತದೆ. ಅಭ್ಯರ್ಥಿಯು ನಿರುದ್ಯೋಗಿಯಾಗಿದ್ದು, ಸ್ವ ಉದ್ಯೋಗದಲ್ಲಿ ಆಸಕ್ತಿ ಹೊಂದಿರಬೇಕು. ವಯೋಮಿತಿ 18 ರಿಂದ 45 ವರ್ಷಗಳು. ಹಾಗೂ ಕನಿಷ್ಟ ವಿದ್ಯಾರ್ಹತೆ ಕನ್ನಡ ಓದಲು ಬರೆಯಲು ಬರಬೇಕು ಮತ್ತು ತರಬೇತಿಗೆ ಅನುಗುಣವಾಗಿ ಕನಿಷ್ಠ ಜ್ಞಾ.ನವಿರಬೇಕು.
ಗ್ರಾಮೀಣ ಪ್ರದೇಶದ ಬಿಪಿಎಲ್ ಅಭ್ಯರ್ಥಿಗೆ ಮೊದಲ ಆದ್ಯತೆ ನೀಡಲಾಗುವುದು. ಆಸಕ್ತರು ತರಬೇತಿಗೆ ಬರುವಾಗ 4 ಪಾಸ್ ಪೋರ್ಟ ಸೈಜ್ ಫೋಟೋ, ರೇಶನ ಕಾರ್ಡ, ಆಧಾರ ಕಾರ್ಡ, ಬ್ಯಾಂಕ್ ಪಾಸ್‌ಬುಕ್, ಇವುಗಳ ಝೆರಾಕ್ಸ್ ಪ್ರತಿಯನ್ನು ತರಬೇಕು. ಈ ತರಬೇತಿಯ ಸದುಪಯೋಗವನ್ನು ಪಡೆದುಕೊಂಡು ಸ್ವ ಉದ್ಯೋಗ ಕೈಗೊಳ್ಳಬೇಕು.
ಆಸಕ್ತರು ನೇರವಾಗಿ ನಿರ್ದೇಶಕರು, ಕೆನರಾ ಬ್ಯಾಂಕ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಕೈಗಾರಿಕಾ ವಸಾಹತು ಪ್ರದೇಶ, ಹೆಗಡೆ ರಸ್ತೆ, ಕುಮಟಾ -581343 ಉತ್ತರಕನ್ನಡ ಜಿಲ್ಲೆ ಇವರಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅಲ್ಲದೇ ದೂರವಾಣಿ ಸಂಖ್ಯೆ Tel:+9108386-220530,Tel:+919449860007,Tel:+919538281989,Tel:+919916783825,Tel:+918880444612,Tel:+919620962004, ಕ್ಕೆ ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆಯಬಹುದಾಗಿದೆ ಎಂದು ಸಂಸ್ಥೆಯ ನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಪಾಸ್ಟ್‌ಫುಡ್ ಸ್ಟಾಲ್ ಉದ್ಯಮ: ಉಚಿತ ತರಬೇತಿ
