ಶಿರಸಿ: ನಗರದ ಮಿರ್ಜಾನಕರ್ ಪೆಟ್ರೋಲ್ ಬಂಕ್ ಬಳಿ ನಡೆದ ಅಪಘಾತದಲ್ಲಿ ಶಿಕ್ಷಕಿಯೋರ್ವಳು ಸ್ಥಳದಲ್ಲೇ ಮೃತಪಟ್ಟ ಘಟನೆ ಸೋಮವಾರ ಬೆಳಿಗ್ಗೆ ನಡೆದಿದೆ.
ತಾಲೂಕಿನ ಬಂಡಲ ಶಾಲೆಯ ಶಿಕ್ಷಕಿ ವಿಜಯಾ ಬೋವಿ ಮೃತಪಟ್ಟ ಮಹಿಳೆಯಾಗಿದ್ದು, ಇವರು ತಮ್ಮ ಗಂಡನೊಂದಿಗೆ ಬೈಕ್ನಲ್ಲಿ ಹೋಗುತ್ತಿದ್ದಾಗ ಆಯತಪ್ಪಿ ಬಿದ್ದಿದ್ದು ಅದೇ ಸಮಯದಲ್ಲಿ ಹಿಂದಿನಿಂದ ಬಂದ ಟ್ರಕ್ ಅಡಿಯಲ್ಲಿ ಸಿಲುಕಿ ದಾರುಣವಾಗಿ ಮೃತಪಟ್ಟಿದ್ದಾರೆ. ಪೋಲಿಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.