ಕಾರವಾರ: ಜಿಲ್ಲೆಯಲ್ಲಿ ಲೋಕಸಭಾ ಚುನಾವಣಾ ಸಮಯದಲ್ಲಿ ಯಾವುದೇ ರೀತಿಯ ಘಟನೆಗಳಿಗೆ ಅವಕಾಶವಾಗದಂತೆ ತಡೆಗಟ್ಟುವ ನಿಟ್ಟಿನಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳುವ ದೃಷ್ಟಿಯಿಂದ ಮೇ 5 ರಂದು ಸಂಜೆ 5 ಗಂಟೆಯಿಂದ ಮೇ 7 ರ ಮಧ್ಯರಾತ್ರಿ 12 ಗಂಟೆಯವರೆಗೆ ಹಾಗೂ ಜೂನ್ 3 ರ ಮಧ್ಯರಾತ್ರಿ 12 ಗಂಟೆಯಿಂದ ಜೂನ್ 4 ರ ಮಧ್ಯರಾತ್ರಿ 12 ಗಂಟೆಯವರೆಗೆ ಜಿಲ್ಲೆಯಾದ್ಯಂತ ಎಲ್ಲಾ ವೈನ್ ಶಾಪ್ ಮತ್ತು ಬಾರ್‌ಗಳನ್ನು ಮುಚ್ಚಲು ಆದೇಶಿದೆ ಹಾಗೂ ಮತದಾನದ ದಿನ ಮೇ 7 ಮತ್ತು ಮತ ಎಣಿಕೆ ದಿನ ಜೂನ್ 4 ಈ ಎರಡು ದಿನಗಳನ್ನು ಒಣ ದಿನಗಳೆಂದು ಘೋಷಿಸಿ, ಈ ಅವಧಿಯಲ್ಲಿ ಎಲ್ಲಾ ರೀತಿಯ ಮದ್ಯ ಮಾರಾಟ ಮತ್ತು ಸಾಗಾಟವನ್ನು ಹಾಗೂ ಅನಧಿಕೃತವಾಗಿ ನಿಗಧಿತ ಮಿತಿಗಿಂತ ಹೆಚ್ಚಿನ ಪ್ರಮಾಣದ ಮದ್ಯವನ್ನು ಶೇಖರಣೆ ಮಾಡುವುದನ್ನು ನಿಷೇಧಿಸಿ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಆದೇಶಿಸಿದ್ದಾರೆ.