Slide
Slide
Slide
previous arrow
next arrow

ಸ್ವೀಪ್ ಕಾರ್ಯಕ್ರಮದ ಅಂಗವಾಗಿ ಕ್ರಿಕೆಟ್ ಪಂದ್ಯ

300x250 AD

ಕಾರವಾರ: ಲೋಕಸಭಾ ಚುನಾವಣಾ ಪ್ರಯುಕ್ತ ಮೇ 7 ರಂದು ನಡೆಯಲಿರುವ ಮತದಾನ ಪ್ರಕ್ರಿಯೆಯಲ್ಲಿ ಅರ್ಹ ಪ್ರಜೆಗಳಿಂದ ತಪ್ಪದೇ ಮತದಾನ ಮಾಡಿಸುವ ನಿಟ್ಟಿನಲ್ಲಿ ಜಾಗೃತಿ ಮೂಡಿಸಲು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಉತ್ತರ ಕನ್ನಡ, ತಾಲೂಕು ಪಂಚಾಯತ್ ಕಾರವಾರ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ್ ಕುಮಾರ್ ಕಾಂದೂ ತಿಳಿಸಿದ್ದಾರೆ.
ಕಾರವಾರದ ಮಾಲಾದೇವಿ ಕ್ರೀಡಾಂಗಣದಲ್ಲಿ ಏಪ್ರಿಲ್ 6 ರಂದು ಬೆಳಿಗ್ಗೆ 8:30 ಘಂಟೆಗೆ ನಡೆಯುವ ಈ ಕ್ರಿಕೆಟ್ ಪಂದ್ಯದಲ್ಲಿ , ಜಿಲ್ಲಾ ಪಂಚಾಯತ್ ವತಿಯಿಂದ ಸ್ವೀಪ್ ಸೂಪರ್ ಸ್ಟಾರ್ ತಂಡ, ಜಿಲ್ಲಾಧಿಕಾರಿಗಳ ಕಛೇರಿಯಿಂದ ಆರ್.ಒ. ಸೂಪರ್ ಸ್ಟಾರ್ ತಂಡ, ಎಸ್.ಪಿ. ಕಚೇರಿಯಿಂದ ಸಿವಿಜಿಲ್ ಕಾಪ್ಸ್ ಹಾಗೂ ಪತ್ರಿಕಾ ಮಾಧ್ಯಮದಿಂದ ಮಿಡಿಯಾ ವಾರಿಯರ್ಸ್ ತಂಡಗಳು ಭಾಗವಹಿಸಲಿವೆ.
ಈ ಪಂದ್ಯಾವಳಿಗೆ ಜಿಲ್ಲಾ ಮಟ್ಟದ ಎಲ್ಲಾ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಜಿ.ಪಂ. ಸಿಇಓ ಕೋರಿದ್ದಾರೆ.

300x250 AD
Share This
300x250 AD
300x250 AD
300x250 AD
Back to top