Slide
Slide
Slide
previous arrow
next arrow

ಅರಣ್ಯ ಹಕ್ಕು ಹೋರಾಟಗಾರರಿಗೆ ಕಾಂಗ್ರೆಸ್ ಮೋಸ ಮಾಡಿದೆ; ಸದಾನಂದ ಭಟ್ಟ

300x250 AD

ಶಿರಸಿ: ಅತಿಕ್ರಮಣದಾರರ ಹೋರಾಟದ ಮುಖ್ಯಸ್ಥರಿಗೆ ನ್ಯಾಯ ಒದಗಿಸಲು ಕಾಂಗ್ರೆಸ್ ನಿಂದ ಆಗಿಲ್ಲ. ಚುನಾವಣೆ ಎದುರಿನಲ್ಲಿ ಅತಿಕ್ರಮಣದಾರರ ಪರವಾಗಿ ನಾವಿದ್ದೇವೆ ಎಂಬ ಘೋಷಣೆ ಮಾಡುವ ಕಾಂಗ್ರೆಸ್ ತಮ್ಮ ಅಧಿಕಾರದಲ್ಲಿ ಏನು ಮಾಡಿದೆ ಎಂಬುದನ್ನು ತಿಳಿಸಲಿ ಎಂದು ಜಿಲ್ಲಾ ಮಾಧ್ಯಮ ವಕ್ತಾರ ಸದಾನಂದ ಭಟ್ಟ ನಿಡಗೋಡ ಹೇಳಿದರು
   ಅವರು ಶುಕ್ರವಾರ ನಗರದ ನಗರದ ದೀನ ದಯಾಳ್ ಸಭಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಉತ್ತರಕನ್ನಡ ಜಿಲ್ಲೆಯಲ್ಲಿ ಅರಣ್ಯ ಅತಿಕ್ರಮಣದಾರರು ಗಂಭೀರ ಸಮಸ್ಯೆ ಎದುರಿಸುತ್ತಿದ್ದಾರೆ. ಅವರು ಜಿಲ್ಲೆ ಮತ್ತು ರಾಜ್ಯದಲ್ಲಿ ನಿರಂತರ ಹೋರಾಟ ಮಾಡುತ್ತ ಬಂದಿದ್ದಾರೆ. ಕಾಂಗ್ರೆಸ್ ಏನು ಮಾಡಿದೆ ಎಂಬ ತಮ್ಮ ಸ್ಪಷ್ಟ ನಿಲುವು ಮಂಡಿಸಲಿ. ಕಾಂಗ್ರೆಸ್ ಅರಣ್ಯ ಅತಿಕ್ರಮಣದಾರರ ಪರವಾಗಿ ನಿಂತಿಲ್ಲ. ಪೊಳ್ಳು ಆಶ್ವಾಸನೆ ನೀಡುತ್ತಿದೆ. ಅರಣ್ಯವಾಸಿಗಳಿಗೆ ಹಕ್ಕು ನೀಡಲು ಕಾಂಗ್ರೆಸ್ ಪ್ರಯತ್ನ ಏನಿದೆ ಎಂಬುದನ್ನು ಜನರಿಗೆ ಹೇಳಲಿ ಎಂದು ಸವಾಲು ಹಾಕಿದರು.
  ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಸಚಿವರಾಗಿದ್ದ ವೇಳೆ ಅರಣ್ಯ ಅತಿಕ್ರಮಣದಾರರ ಪರವಾಗಿ ಪ್ರಾಮಾಣಿಕ ಕೆಲಸ ಮಾಡಿದ್ದಾರೆ. ಅರಣ್ಯ ಭೂಮಿಯನ್ನು ಅತಿಕ್ರಮಿಸಿಕೊಂಡು ವಾಸವಾಗಿದ್ದ ಕುಟುಂಬವು ಮನೆ ನಿರ್ಮಿಸಲು ಅವಕಾಶ ಮಾಡೊಕೊಟ್ಟಿದ್ದರು. ಆ ನಂತರ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಅದನ್ನು ಗಾಳಿಗೆ ತೂರಿದೆ ಎಂಬುದನ್ನು ಮತದಾರಿಗೆ ತಿಳಿಸಿದೆ ಎಂದು ವಾಗ್ದಾಳಿ ನಡೆಸಿದರು.
ಸಭಾಧ್ಯಕ್ಷರಾಗಿದ್ದ ಸಂದರ್ಭದಲ್ಲಿ ೨೦೨೨ ರಲ್ಲಿ
ಅರಣ್ಯ ಅತಿಕ್ರಮಣದಾರರಿಗೆ ವಸತಿ ಯೋಜನೆಯ ಮೂಲಕ ಮನೆ ನಿರ್ಮಿಸಲು ಅವಕಾಶಕ್ಕೆ ಆದೇಶ ಹೊರಡಿಸಿದ್ದಾರೆ. ಅರಣ್ಯ ಪ್ರದೇಶ ಹೊಂದಿರುವ ಉತ್ತರಕನ್ನಡ, ದಕ್ಷಿನ ಕನ್ನಡ, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅರಣ್ಯ ಪ್ರದೇಶದಲ್ಲಿ ವಾಸವಾಗಿರುವ ಕುಟುಂಬಗಳಿಗೆ ವಸತಿ ಯೋಜನೆಯ ಮೂಲಕ ೨೫ ಸಾವಿರ ಮನೆ ಮಂಜೂರಿಗೆ ಅವಕಾಶ ದೊರೆಯಿತು. ಆರ್.ವಿ.ದೇಶಪಾಂಡೆ ತಮ್ಮ ಪುತ್ರ ಸ್ಪರ್ಧಿಸಿದಾಗ ಆಗ ಉಸ್ತುವಾರಿ ಸಚಿವರಾಗಿದ್ದ ಅವರು ಚುನಾವಣಾ ತರಾತುರಿಯಲ್ಲಿ ೩೦೦ ಕುಟುಂಬಗಳಿಗೆ ಹಕ್ಕುಪತ್ರ ವಿತರಿಸಿದ್ದರು. 87 ಸಾವಿರ ಕುಟುಂಬಕ್ಕೆ  ನೀಡಲು ಯಾವ ತೊಂದರೆ ಇತ್ತು ಎಂಬುದನ್ನು ಅವರು ಸ್ಪಷ್ಟಪಡಿಸಲಿ ಎಂದು ಸವಾಲು ಹಾಕಿದರು.
  ಮತ ಪಡೆಯುವ ದೃಷ್ಟಿಯಿಂದ  ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ನಿಂಬಾಳ್ಕರ ವೃಥಾ ಸುಳ್ಳು ಮಾತನ್ನು ಹೇಳುತ್ತಿದ್ದಾರೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಿಲ್ಲೆಯಲ್ಲಿ ಸ್ಪೂಪರ್ ಸ್ಪೇಶಾಲಿಟಿ ನಿರ್ಮಾಣಕ್ಕೆ ಕುಮಟಾದಲ್ಲಿ ಜಾಗ ಗುರುತಿಸಿ, ೨೦೨೩ ಸಾಲಿನ ಅಂತಿಮ ಬಜೆಟ್ ನಲ್ಲಿ ಘೋಷಣೆ ಮಾಡಿ, ಅನುದಾನ ಬಿಡುಗಡೆ ಮಾಡಲಾಗಿತ್ತು. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಯಾಕೆ ಕೈ ಬಿಡಲಾಯಿತು ಎಂಬುದಕ್ಕೆ ಉತ್ತರ ನೀಡಲಿ. ಕೇವಲ ಚುನಾವಣಾ ಸರಕನ್ನಾಗಿ ಮಾಡುವುದನ್ನು ಬಿಡಲಿ. ನಮ್ಮ ಸರ್ಕಾರದ ಅವಧಿಯಲ್ಲಿ ಇಂಜಿನಿಯರಿಂಗ್ ಕಾಲೇಜು ಆರಂಭ ಮಾಡಿದ್ದೇವೆ. ಕಾರವಾರದಲ್ಲಿ ಮೆಡಿಕಲ್ ಕಾಲೇಜನ್ನು ಆರಂಭಿಸಿದ್ದೇವೆ. ಶಿರಸಿಯಲ್ಲಿ ಕೋಟ್ಯಾಂತರ ರೂ. ವೆಚ್ಚದಲ್ಲಿ ಆಸ್ಪತ್ರೆ ನಿರ್ಮಾಣ ನಡೆಯುತ್ತಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆದಿದೆ. ನಾವು ಅಭಿವೃದ್ಧಿಯ ಆಧಾರದ ಮೇಲೆ ಮತ ಕೇಳುತ್ತೇವೆ. ಬಿಟ್ರೀಷ್ ಆಡಳಿತದ ಅವಧಿಯಲ್ಲಿ ಶಾಲೆ, ಆಸ್ಪತ್ರಗಳಿದ್ದವು. ೭೦ ವರ್ಷ ದೇಶ ಆಳಿದ ಕಾಂಗ್ರೆಸ್ ನ ಗರೀಬಿ ಹಠಾವೋ ಎಂಬ ಘೋಷಣೆ ಇನ್ನೂ ಹೋಗಿಲ್ಲ ಎಂದು ಹೇಳಿದರು.
ಮೇ.೭ ರಂದು ನಡೆಯಲಿರುವ ಚುನಾವಣಾ ಸಿದ್ಧತೆ ನಡೆಯುತ್ತಿದೆ. ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಒಂದು ಸುತ್ತಿನ ಪ್ರವಾಸ ಕೈಗೊಂಡು ಬೂತ್ ಮಟ್ಟದ ಕಾರ್ಯಕರ್ತರಿಂದ ಹಿಡಿದು ವಿವಿಧ ಜವಾಬ್ದಾರಿ ಹೊಂದಿರುವ ನಾಯಕರನ್ನು ಭೇಟಿಯಾಗಿ ಸಂಘಟನಾತ್ಮಕ ಕಾರ್ಯ ಮಾಡಿದ್ದಾರೆ. ಪ್ರತಿ ಕಡೆಗಳಲ್ಲಿಯೂ ವ್ಯಾಪಕ ಸ್ಪಂದನೆ ದೊರೆಯುತ್ತಿದೆ. ಖಂಡಿತವಾಗಿಯೂ ವಿಶ್ವೇಶ್ವರ ಹೆಗಡೆ ಕಾಗೇರಿ ಗೆದ್ದು ಬಿಜೆಪಿ ಭದ್ರಕೋಟೆಯನ್ನು ಇಷನ್ನಷ್ಟು ಬಲಿಷ್ಠವಾಗಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
  ಜೆ.ಡಿ.ಎಸ್ ಮತ್ತು ಬಿಜೆಪಿ ಮೈತ್ರಿಯಾಗಿ ಚುನಾವಣಾ ಎದುರಿಸಲು ಎಲ್ಲ ಸಿದ್ಧತೆ ಕೈಗೊಳ್ಳಲಾಗಿದೆ. ವಿಶ್ವೇಶ್ವರ ಹೆಗಡೆ ಅಭ್ಯರ್ಥಿಯಾಗಿ ಘೋಷಣೆಯಾದ ನಂತರ ಅತ್ಯುತ್ತಮ ಸಂಬಂಧ ಮಾಡಿಕೊಳ್ಳಲಾಗಿದೆ. ಹಳಿಯಾಳದಲ್ಲಿ ಮಾಜಿ ಶಾಸಕ ಸುನೀಲ ಹೆಗ್ಡೆ, ವಿಧಾನಪರಿಷತ್ ಮಾಜಿ ಸದಸ್ಯವಶ್ರೀಕಾಂತ ಘೋಟ್ನೇಕರ, ಕುಮಟಾ ಶಾಸಕ ದಿನಕರ ಶೆಟ್ಟಿ ಹಾಗೂ ಜೆಡಿಎಸ್ ಮುಖಂಡ ಸೂರಜ್ ನಾಯ್ಕ ಸೋನಿ ಒಂದೇ ವೇದಿಕೆ ಮೇಲೆ ಒಳ್ಳೆಯ ವಾತಾವರಣ ನಿರ್ಮಿಸಿದ್ದಾರೆ. ಶಿರಸಿಯ ಉಪೇಂದ್ರ ಪೈ ಕಾಗೇರಿ ಅವರ ಜತೆ ಒಂದು ಸುತ್ತಿನ ಪ್ರವಾಸ ಕೈಗೊಂಡಿದ್ದಾರೆ. ಕಾರವಾರದ ಮಾಜಿ ಸಚಿವ ಆನಂದ ಅಸ್ನೋಟಿಕರ್ ನರೇಂದ್ರ ಮೋದಿ ಅವರನ್ನು ಮೂರನೆಯ ಬಾರಿಗೆ ಪ್ರಧಾನಿ ಮಾಡಲು ಉತ್ತರಕನ್ನಡದಲ್ಲಿ ಬಿಜೆಪಿ ಗೆಲ್ಲಿಸಲು ಕಾಗೇರಿ ಅವರ ಪರವಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿದ್ದಾರೆ. ಎಲ್ಲರೂ ಜೋಡೆತ್ತಿನ ರೀತಿಯಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದರು.
   ನರೇಂದ್ರ ಮೋದಿ ೩ ನೆಯ ಬಾರಿ ಪ್ರಧಾನಿಯಾಗಬೇಕು. ವಿಶ್ವೇಶ್ವರ ಹೆಗಡೆ ನಮ್ಮ ಜಿಲ್ಲೆಯ ಸಂಸದರಾಗಿ ಆಯ್ಕೆಯಾಗಬೇಕು. ಕೇಂದ್ರದಲ್ಲಿ ೪೦೦ ಕ್ಕೂ ಮೀರಿ ನಮ್ಮ ಅಭ್ಯರ್ಥಿಗಳು ಜಯ ಸಾಧಿಸಬೇಕು. ನಾವೆಲ್ಲರೂ ಒಗ್ಗಟ್ಟಿನಿಂದ ಚುನಾವಣೆ ಎದುರಿಸಲು ಸಿದ್ಧರಾಗಿದ್ದೇವೆ ಎಂದರು.
ಸುದ್ದಿಗೋಷ್ಠಿಯಲ್ಲಿ ನಗರ ಮಂಡಳ ಅಧ್ಯಕ್ಷ ಆನಂದ ಸಾಲೇರ, ಗ್ರಾಮೀಣ ಮಂಡಳ ಅಧ್ಯಕ್ಷೆ ಉಷಾ ಹೆಗಡೆ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಪ್ರೇಮಕುಮಾರ ನಾಯ್ಕ, ಮಹಂತೇಶ ಹಾದಿಮನಿ, ನಾಗರಾಜ ನಾಯ್ಕ, ಶರ್ಮಿಳಾ ಮಾದನಗೇರಿ, ನಾಗರಾಜ ಶೆಟ್ಟಿ ಇದ್ದರು.

ಕೋಟ್:
ಕಪ್ಪು ಚುಕ್ಕೆ ಇಲ್ಲದ, ಭ್ರಷ್ಟಾಚಾರ ರಹಿತ ಸಾತ್ವಿಕ ರಾಜಕಾರಣಿಯಾಗಿರುವ ವಿಶ್ವೇಶ್ವರ ಹೆಗಡೆ ಕಾಗೇರಿ ನಮ್ಮ ಸಂಸದರಾಗಬೇಕು ಎಂಬುದು ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಮತದಾರರ ಆಶಯವಾಗಿದೆ. ಪ್ರಚಂಡ ಬಹುಮತದಲ್ಲಿ ಆಯ್ಕೆ ಮಾಡಿ ಕೇಂದ್ರಕ್ಕೆ ಕಳುಹಿಸುವ ಪ್ರಯತ್ನ ಕಾರ್ಯಕರ್ತರು ಮಾಡುತ್ತಿದ್ದಾರೆ.
       -ಸದಾನಂದ ಭಟ್ಟ ನಿಡಗೋಡ, ಜಿಲ್ಲಾ ಮಾಧ್ಯಮ ವಕ್ತಾರ

300x250 AD
Share This
300x250 AD
300x250 AD
300x250 AD
Back to top