ಶಿರಸಿ: ನಗರದ ಕನ್ನಿಕಾ ಪ್ರಿಂಟಿಂಗ್ ಪ್ರೆಸ್‌ನಲ್ಲಿ ಸೋಮವಾರ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಲಕ್ಷಾಂತರ ರೂ.ಹಾನಿಯಾಗಿದೆ.
ಬೆಂಕಿಯ ಕೆನ್ನಾಲಿಗೆಗೆ ಅಂದಾಜು ೧೫ ಲಕ್ಷಕ್ಕೂ ಹೆಚ್ಚಿನ ಹಾನಿಯಾಗಿದೆ ಎಂದು ತಿಳಿದುಬಂದಿದೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ದಳದವರು ಕಾರ್ಯಪ್ರವೃತ್ತರಾಗಿ ಬೆಂಕಿ ನಂದಿಸಲು ಯಶಸ್ವಿಯಾಗಿದ್ದಾರೆ.