Slide
Slide
Slide
previous arrow
next arrow

ಕಾಲುವೆಗೆ ಉರುಳಿದ ಬೈಕ್; ಓರ್ವ ಮೃತ; ಇನ್ನೋರ್ವ ಗಂಭೀರ

300x250 AD

ಶಿರಸಿ: ನಿಯಂತ್ರಣ ತಪ್ಪಿ ಕಾಲುವೆಗೆ ಬೈಕ್ ಬಿದ್ದ ಪರಿಣಾಮ ಒಬ್ಬ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೋರ್ವ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ. ಶಿರಸಿ- ಯಲ್ಲಾಪುರ ರಸ್ತೆಯ ಪಂಚವಟಿ ಕ್ರಾಸ್‌ ಬಳಿ ಘಟನೆ ನಡೆದಿದೆ.

ಸಂದೀಪ ಛಲವಾದಿ (24) ಮೃತ ಬೈಕ್ ಸವಾರ. ಸುಭಾಷ್ ದೇವಾಡಿಗ (26) ಗಂಭೀರ ಗಾಯಗೊಂಡವನು. ಯಲ್ಲಾಪುರದ ಭರತ್ನಳ್ಳಿ ಗ್ರಾಮದ ಈ ಯುವಕರು ಸ್ನೇಹಿತನನ್ನು ಶಿರಸಿ ಬಸ್‌ ನಿಲ್ದಾಣಕ್ಕೆ ಬಿಟ್ಟು ವಾಪಸ್ಸಾಗುವಾಗ ಅಪಘಾತ ನಡೆದಿದೆ. ಇಳಿಜಾರಿನ ರಸ್ತೆ ತಿರುವಿನಲ್ಲಿ ನಿಯಂತ್ರಣ ತಪ್ಪಿದ ಬೈಕ್ ಸುಮಾರು 20 ಅಡಿ ಆಳದ ರಾಜಕಾಲುವೆಗೆ ಬಿದ್ದಿದೆ.

300x250 AD

ಅಗ್ನಿಶಾಮಕ ದಳ, ಪೊಲೀಸ್ ಸಿಬ್ಬಂದಿಯಿಂದ ಕಾಲುವೆಗೆ ಬಿದ್ದವರ ಮೇಲಕ್ಕೆತ್ತುವ ಕಾರ್ಯಾಚರಣೆ ನಡೆಯಿತು. ಗಂಭೀರ ಗಾಯಗೊಂಡಿದ್ದ ಸವಾರನನ್ನು ಮಣಿಪಾಲ ಆಸ್ಪತ್ರೆಗೆ ರವಾನಿಸಲಾಗಿದೆ. ಶಿರಸಿ ಮಾರುಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Share This
300x250 AD
300x250 AD
300x250 AD
Back to top