Slide
Slide
Slide
previous arrow
next arrow

ಮುಂಡಗೋಡಿನಲ್ಲಿ ತಂಡೋಪತಂಡವಾಗಿ ಕಾಂಗ್ರೆಸ್‌ಗೆ ಸೇರ್ಪಡೆ 

300x250 AD

ಮುಂಡಗೋಡ: ಪಟ್ಟಣದ ಟೌನ್ ಹಾಲ್ ನಲ್ಲಿ ಮುಂಡಗೋಡ ಪಟ್ಟಣ ಹಾಗೂ ತಾಲೂಕಿನ ವಿವಿಧ ಭಾಗಗಳಿಂದ ಸಾವಿರಕ್ಕೂ ಅಧಿಕ ಕಾರ್ಯಕರ್ತರು ಬಿಜೆಪಿ ತೊರೆದು ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ಶಾಸಕ ಶಿವರಾಮ ಹೆಬ್ಬಾರ್ ಪುತ್ರ, ಯುವ ಮುಖಂಡ ವಿವೇಕ್ ಹೆಬ್ಬಾರ್ ಕಾಂಗ್ರೆಸ್ ಸೇರ್ಪಡೆ ಹಿನ್ನಲೆಯಲ್ಲಿ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಗೆ ಇಚ್ಛಿಸಿದ ಕಾರ್ಯಕರ್ತರಿಗೆ ಕೆಪಿಸಿಸಿ ಉಪಾಧ್ಯಕ್ಷ ಐವಾನ್ ಡಿಸೋಜಾ ಸಮ್ಮುಖದಲ್ಲಿ ಕಾಂಗ್ರೆಸ್ ಶಾಲು ಹಾಕಿ ಪಕ್ಷಕ್ಕೆ ಬರಮಾಡಿಕೊಳ್ಳಲಾಯಿತು.

ಮುಂಡಗೋಡ ಪಟ್ಟಣ ಪಂಚಾಯತ ಮಾಜಿ ಅಧ್ಯಕ್ಷ ಪಣಿರಾಜ್, ಶೇಖರ್ ಲಮಾಣಿ, ಸಲ್ಮಾ‌ ಶೇರಖಾನಿ, ಸಿದ್ದಪ್ಪ ಹಣಬರ್, ಮಾಜಿ ಜಿಲ್ಲಾ ‌ಪಂಚಾಯತ ಸದಸ್ಯ ರವಿ ಗೌಡ, ಅರುಣ್ ಗೊಂದಲೆ, ಶಿವರಾಜ್, ವಿಶ್ವನಾಥ, ಕುಸುಮಾ ನಾಗಭೂಷಣ್ ಹಾವಗಿ, ರಾಘವೇಂದ್ರ, ಪಕೀರಪ್ಪ, ವಿನಾಯಕ ಚಲವಾದಿ,‌ ಸಾಗರ್ ಹುಳುಗೂರು, ಸಂತೋಷ ನಾಯ್ಕ ಸೇರಿದಂತೆ ಮುಂಡಗೋಡ ತಾಲೂಕಿನ ವಿವಿಧ ಗ್ರಾಮ ಪಂಚಾಯತ್ ಹಾಗೂ ಪಟ್ಟಣ ವ್ಯಾಪ್ತಿಯ ಹಲವರು‌ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದವರು.

300x250 AD

ಈ ಸಂದರ್ಭದಲ್ಲಿ ಮಾಜಿ ಶಾಸಕ ವಿ.ಎಸ್ ಪಾಟೀಲ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಾಯಿ ಗಾಂವಕರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜ್ಞಾನದೇವ ಗುಡಿಯಾಳ, ಗ್ಯಾರಂಟಿ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಸತೀಶ್ ನಾಯ್ಕ, ಕೃಷ್ಣ ಹಿರೇಹಳ್ಳಿ, ಪ್ರಕಾಶ್ ಹೆಗಡೆ, ಬಸವರಾಜ ನಡುವಿನಮನಿ, ಶಾರದಾ ರಾಠೋಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Share This
300x250 AD
300x250 AD
300x250 AD
Back to top