Slide
Slide
Slide
previous arrow
next arrow

ಭಾರತದ ಸಂವಿಧಾನವನ್ನು ಯಾರಿಂದಲೂ ಬದಲಾಯಿಸಲು ಸಾಧ್ಯವಿಲ್ಲ: ಹೊನ್ನಪ್ಪ ನಾಯಕ

300x250 AD

ಹೊನ್ನಾವರ: ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಭಾರತಕ್ಕೆ ನೀಡಿದ ಸಂವಿಧಾನ ಪ್ರಪಂಚಕ್ಕೆ ಮಾದರಿಯಾಗಿದ್ದು, ಅದನ್ನು ಯಾರಿಂದಲೂ ಬದಲಾಯಿಸಲು ಸಾಧ್ಯವಿಲ್ಲ ಎಂದು ಹಿರಿಯ ಕಾಂಗ್ರೆಸ್ ಮುಖಂಡ, ಉತ್ತರ ಕನ್ನಡ ಜಿಲ್ಲಾ ಪಂಚಾಯತ್‌ನ ಶಿಕ್ಷಣ ಮತ್ತು ಆರೋಗ್ಯ ಸಮಿತಿಯ ಮಾಜಿ ಅಧ್ಯಕ್ಷ ಹೊನ್ನಪ್ಪ ನಾಯಕ ನುಡಿದರು.

ಅವರು ರವಿವಾರ ಹೊನ್ನಾವರ ಬ್ಲಾಕ್ ಕಾಂಗ್ರೇಸ್ ಕಾರ್ಯಾಲಯದಲ್ಲಿ ಹೊನ್ನಾವರ ಬ್ಲಾಕ್ ಕಾಂಗ್ರೇಸ್ ಸಮಿತಿ ಏರ್ಪಡಿಸಿದ, ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರ ೧೩೩ನೇ ಜನ್ಮ ದಿನಾಚರಣೆಯ ಕಾರ್ಯಕ್ರಮವನ್ನು ಉದ್ಘಾಟಿಸಿದ ನಂತರ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಕೆಲವರು ತಮ್ಮ ರಾಜಕೀಯ ತೆವಲಿಗಾಗಿ ಸಂವಿಧಾನ ಬದಲಾಯಿಸುವುದಕ್ಕಾಗಿಯೇ ತಾವು ಅಧಿಕಾರಕ್ಕೆ ಬಂದಿದ್ದು ಎಂದು ಹೇಳುತ್ತಾ ಜನರಲ್ಲಿ ಗೊಂದಲ ಸೃಷ್ಠಿಸುತ್ತಿದ್ದಾರೆ. ಆದರೆ ಅಂತವರು ಇಂದು ಜನರ ನಡುವೆ ಕಾಣದಂತಾಗಿದ್ದಾರೆ ಎಂದರು. ನಿಜ ಹೇಳಬೇಕೆಂದರೇ ಭಾರತದಂತಹ ಉತ್ತಮ ಸಂವಿಧಾನ, ಪ್ರಪಂಚದ ಯಾವ ರಾಷ್ಟ್ರದಲ್ಲೂ ಇಲ್ಲ ಎಂದು ಅಭಿಪ್ರಾಯ ಪಟ್ಟರು.

ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ್ ಎನ್.ತೆಂಗೇರಿ ಪ್ರಾಸ್ತಾವಿಕವಾಗಿ ಮಾತನಾಡುತ್ತಾ ಭಾರತದಂತಹ ಬಹುದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಸಾವಿರಾರು ಜಾತಿ, ಹತ್ತಾರು ಧರ್ಮಗಳು, ಅನೇಕ ಭಾಷೆಗಳ ನಡುವೆಯೂ ನಾವು ಸಮಾಜದಲ್ಲಿ ಪ್ರೀತಿ, ವಿಶ್ವಾಸ, ಶಾಂತಿ ಮತ್ತು ಸ್ನೇಹದಿಂದ ಬದುಕುತ್ತಿದ್ದಾರೆ. ಅದು ಡಾ|| ಬಾಬಾ ಸಾಹೇಬ ಅಂಬೇಡ್ಕರ್‌ರವರು ಭಾರತಕ್ಕೆ ನೀಡಿದ ಸಂವಿಧಾನದ ಮೂಲಕ ಎನ್ನುವುದಕ್ಕೆ ತುಂಬಾ ಹೆಮ್ಮೆ ಎನಿಸುತ್ತದೆ ಎಂದರು. ಇಂತಹ ಮಹಾನ್ ಚಿಂತಕನ ತತ್ವ, ಆದರ್ಶಗಳು ಈ ಜಗತ್ತಿನಲ್ಲಿ ಶಾಶ್ವತವಾಗಿರಲಿ ಎಂದು ಹಾರೈಸಿ, ಅಂಬೇಡ್ಕರ್ ರಚಿಸಿದ ಸಂವಿಧಾನದ ಮೂಲ ಉದ್ದೇಶವನ್ನು ಇಂದಿನ ಯುವಕರು, ವಿದ್ಯಾರ್ಥಿಗಳು ತಮ್ಮ ಜೀವನದುದ್ದಕ್ಕೂ ಅಳವಡಿಸಿಕೊಳ್ಳುವಂತೆ ಜಗದೀಪ ಎನ್. ತೆಂಗೇರಿ ಕರೆ ನೀಡಿದರು.
ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಶಿಕ್ಷಕರ ವಿಭಾಗದ ಅಧ್ಯಕ್ಷ ಪ್ರೊ. ಎಸ್.ಡಿ.ಹೆಗಡೆ ಮಾತನಾಡಿ ಡಾ|| ಬಾಬಾ ಸಾಹೇಬ ಅಂಬೇಡ್ಕರ್‌ರವರು ಮಹಾನ್ ಮಾನವತಾವಾದಿಗಳಾಗಿದ್ದರು. ಅವರು ರಚಿಸಿದ ಭಾರತದ ಸಂವಿಧಾನ ಜಗತ್ತಿಗೆ ಮಾದರಿಯಾಗಿದ್ದು ಡಾ|| ಅಂಬೇಡ್ಕರ್‌ರವರ ತತ್ವ, ಆದರ್ಶ, ಚಿಂತನೆಗಳು ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಭದ್ರ ಬುನಾದಿಯಾಗಿ ನಿಂತಿದೆ ಎಂದರು.

300x250 AD

ಹೊನ್ನಾವರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಪುಷ್ಪಾ ಮಹೇಶ್ ಅವರು ಸೇರಿದ ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರಿಗೆ ಸಂವಿಧಾನ ಪೀಠಿಕೆ ಭೋದಿಸಿದರು. ಹೊನ್ನಾವರ ಪಟ್ಟಣ ಪಂಚಾಯತನಲ್ಲಿ ಪೌರ ಕಾರ್ಮಿಕನಾಗಿ ನಿವೃತ್ತಿ ಹೊಂದಿ, ಹಾಲಿ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಪರಿಶಿಷ್ಠ ಜಾತಿ ವಿಭಾಗದ ಅಧ್ಯಕ್ಷನಾಗಿ ಪ್ರಾಮಾಣಿಕವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇವೆ ಸಲ್ಲಿಸುತ್ತಿರುವ ಕೃಷ್ಣ ರಂಗಾ ಹರಿಜನ ಇವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಸೇರಿದ ಪಕ್ಷದ ಎಲ್ಲಾ ಕಾರ್ಯಕರ್ತರು ಡಾ|| ಬಾಬಾ ಸಾಹೇಬ ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಸಭೆಯಲ್ಲಿ ರಾಜೀವ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ವಿನೋದ ನಾಯ್ಕ, ಜಿಲ್ಲಾ ಕಾಂಗ್ರೇಸ್ ಕಾರ್ಯದರ್ಶಿ ಪ್ರಕಾಶ ನಾಯಕ, ಜಿಲ್ಲಾ ಸೇವಾದಳದ ಪ್ರಧಾನ ಕಾರ್ಯದರ್ಶಿ ಕೃಷ್ಣ ಮಾರಿಮನೆ, ಜಿಲ್ಲಾ ಇಂಟೆಕ್ ವಿಭಾಗದ ಕಾರ್ಯದರ್ಶಿ ಕೇಶವ ಮೇಸ್ತ, ಹಿಂದುಳಿದ ವರ್ಗ ವಿಭಾಗದ ಅಧ್ಯಕ್ಷ ಕುಪ್ಪು ಗೌಡ, ಯುವ ಕಾಂಗ್ರೆಸ್ ಅಧ್ಯಕ್ಷ ನವೀನ್ ಪಟಗಾರ, ಸೇವಾದಳದ ಅಧ್ಯಕ್ಷ ಮೋಹನ್ ಆಚಾರಿ, ಜೋಸೆಪ್ ಡಿಸೋe, ಬ್ರಾಜಿಲ್ ಪಿಂಟೊ, ವಸಿಮ್ ಸಾಬ್, ಲಂಬೋದರ ನಾಯ್ಕ ಇನ್ನೂ ನೂರಾರು ಕಾರ್ಯಕರ್ತರು, ಮುಖಂಡರು ಉಪಸ್ಥಿತರಿದ್ದರು. ಹೊನ್ನಾವರ ನಗರ ಘಟಕದ ಅಧ್ಯಕ್ಷ ಚಂದ್ರಶೇಖರ ಚಾರೋಡಿ ಎಲ್ಲರನ್ನು ಸ್ವಾಗತಿಸಿದರು. ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಸುರೇಶ ಮೇಸ್ತ ವಂದಿಸಿದರು.

Share This
300x250 AD
300x250 AD
300x250 AD
Back to top