Slide
Slide
Slide
previous arrow
next arrow

ಸಿದ್ದಾಪುರದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

300x250 AD

ಸಿದ್ದಾಪುರ: ಸ್ಥಳೀಯ ತಾಪಂ ಸಭಾಂಗಣದಲ್ಲಿ ತಾಲೂಕು ಆಡಳಿತ,ತಾಪಂ, ಪಪಂ, ಸಮಾಜ ಕಲ್ಯಾಣ ಇಲಾಖೆ ಹಾಗೂ ಪ.ಜಾ, ಪ.ವರ್ಗಗಳ ವಿವಿಧ ಸಂಘಟನೆಗಳ ಆಶ್ರಯದಲ್ಲಿ ಮಹಾಮಾನವತಾವಾದಿ, ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 133ನೇ ಜಯಂತಿಯನ್ನು ಭಾನುವಾರ ಆಚರಿಸಲಾಯಿತು.

ತಹಸೀಲ್ದಾರ ವಿಶ್ವಜಿತ್ ಮೆಹತಾ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಅಂಬೇಡ್ಕರ ಅವರು ಹೇಳಿದಂತೆ ಪ್ರತಿಯೊಬ್ಬರೂ ಶಿಕ್ಷಣ ಪಡೆದು ಸಮೃದ್ಧ ರಾಷ್ಟ್ರ ನಿರ್ಮಾಣ ಮಾಡಲು ಸಂಘಟನಾತ್ಮಕವಾಗಿ ಶ್ರಮಿಸಬೇಕೆಂದರು. ಶಿಕ್ಷಕ ವೆಂಟಕೇಶ ಮಡಿವಾಳ ಡಾ. ಬಿ.ಆರ್.ಅಂಬೇಡ್ಕರ್ ಅವರ ಜೀವನ ಚರಿತ್ರೆ ಕುರಿತು ಉಪನ್ಯಾಸ ನೀಡಿದರು. ತಾಪಂ ಇಒ ವಿಜಯ, ಪಪಂ ಮುಖ್ಯಾಧಿಕಾರಿ ಯಲ್ಲಪ್ಪ ಬಿದರಿ, ಬಿಇಒ ಎಂ.ಎಚ್.ನಾಯ್ಕ,ಡಾ.ವಿವೇಕ ಹೆಗಡೆ, ಸಿಡಿಪಿಒ ಪೂರ್ಣಿಮಾ ಆರ್, ವಿವಿಧ ಸಂಘಟನೆಗಳ ಪ್ರಮುಖರಾದ ನಂದನ ಬೋರ್ಕರ್, ಎಚ್.ಎನ್.ಕಿರಣಕುಮಾರ,ರಮೇಶ ಬೇಡರ್, ಕಮಲಾಕರ,ಅಣ್ಣಪ್ಪ ಹಸ್ಲರ್, ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳಿದ್ದರು. ಇದೇ ಸಂದರ್ಭದಲ್ಲಿ ಕಳೆದ ವರ್ಷ ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚು ಅಂಕಪಡೆದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಬಸವರಾಜ ಬಂಡೇರ ಸ್ವಾಗತಿಸಿದರು.ಕವಿತಾ ನಾಯ್ಕ ನಿರ್ವಹಿಸಿದರು. ವಿನೋದಾ ಜಿ.ನಾಯ್ಕ ವಂದಿಸಿದರು.

300x250 AD
Share This
300x250 AD
300x250 AD
300x250 AD
Back to top