ಕಾರವಾರ: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ವತಿಯಿಂದ, ವಿಶ್ವ ಪರಿಸರ ದಿನಾಚರಣೆ -2024ರ ಅಂಗವಾಗಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ (ಕನ್ನಡ ಮತ್ತು ಇಂಗ್ಲೀಷ್ 1000 ಪದಗಳಿಗೆ ಮೀರದಂತೆ) ಮತ್ತು ಪದವಿ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಸ್ಪರ್ಧೆಯನ್ನು “ಭೂಮಿ ಮತ್ತು ಮಣ್ಣಿನ ಮೇಲೆ ಹವಾಮಾನ ಬದಲಾವಣೆಯ ಪರಿಣಾಮಗಳು”ಎಂಬ ಶೀರ್ಷಿಕೆಯಡಿ ನಡೆಸಲಾಗುತ್ತದೆ.
ಪ್ರಬಂಧಗಳನ್ನು ಕಳುಹಿಸಲು ಮೇ 27 ಕೊನೆಯ ದಿನ ಹಾಗೂ ರಸಪ್ರಶ್ನೆ ಸ್ಪರ್ಧೆಯಲ್ಲಿ ಭಾಗವಹಿಸಲು ಬಯಸುವ ವಿದ್ಯಾರ್ಥಿಗಳು (ಇಬ್ಬರು ವಿದ್ಯಾರ್ಥಿಗಳ ಟೀಂ) ಅಕಾಡೆಮಿಯ ಇ-ಮೇಲ್ : ksta.gok@gmail.com ಗೆ ಮೇ 27ರೊಳಗಾಗಿ ನೋಂದಾಯಿಸಿಕೊಳ್ಳಬಹುದಾಗಿದೆ. ರಸಪ್ರಶ್ನೆ ಸ್ಪರ್ಧೆಯು ಜೂನ್ 6 ರಂದು ಅಕಾಡೆಮಿಯ ಸಭಾಂಗಣದಲ್ಲಿ ನಡೆಯಲಿದೆ.
ಹೆಚ್ಚಿನ ಮಾಹಿತಿಗಾಗಿ ಅಕಾಡೆಮಿಯ ವೆಬ್‌ಸೈಟ್ https://kstacademy.in ನ್ನು ಪರಿಶೀಲಿಸಬಹುದಾಗಿದೆ ಅಥವಾ ಅಕಾಡೆಮಿಯ ಹಿರಿಯ ವೈಜ್ಞಾನಿಕಾಧಿಕಾರಿ ಡಾ.ಆನಂದ ಆರ್ ಮೊ: 9880405181 ನ್ನು ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.