ಸಿದ್ದಾಪುರ: ಇಲ್ಲಿನ ಎಂಜಿಸಿ ಕಲಾ,ವಾಣಿಜ್ಯ ಹಾಗೂ ಜಿಎಚ್ಡಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಡಾ.ಬಿ..ಅರ್.ಅಂಬೇಡ್ಕರ್ ಅವರ 133ನೇ ಜನ್ಮ ದಿನಾಚರಣೆ ಅಂಗವಾಗಿ ಸಿದ್ದಾಪುರ ಹಾಗೂ ಶಿರಸಿ ಸರ್ಕಾರಿ ಆಸ್ಪತ್ರೆಗಳ ಸಹಯೋಗದಲ್ಲಿ ಸೋಮವಾರ ರಕ್ತದಾನ ಶಿಬಿರ ಜರುಗಿತು. 25ಜನ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳು ರಕ್ತದಾನ ಮಾಡಿದರು.
ಪ್ರಾಚಾರ್ಯ ಡಾ.ಸುರೇಶ ಗುತ್ತಿಕರ್,ಆಯುರ್ವೇದ ಮಹಾವಿದ್ಯಾಲಯದ ಪ್ರಾಚಾರ್ಯೆ ಡಾ.ರೂಪಾ ಭಟ್ಟ,ಎನ್ಎಸ್ಎಸ್ ಯೋಜನಾಧಿಕಾರಿ ದೇವನಾಂಪ್ರಿಯ ಎಂ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳಿದ್ದರು.