ಬೆಂಗಳೂರು: ರಾಜ್ಯದಲ್ಲಿ 1 ಸಾವಿರ ಎಲೆಕ್ಟ್ರಿಕ್ ವಾಹನಗಳ ರಿಚಾರ್ಜಿಂಗ್ ಸೆಂಟರ್ ತೆರೆಯಲಾಗುವುದುಎಂದು ಇಂಧನ ಸಚಿವ ಸುನೀಲ್ ಕುಮಾರ್ ತಿಳಿಸಿದ್ದಾರೆ.
ಬೆಂಗಳೂರು ನಗರಕ್ಕೆ ಸಂಬಂಧಿಸಿದಂತೆ 500 ರಿಚಾರ್ಜಿಂಗ್ ಸೆಂಟರ್‍ಗಳನ್ನು ತೆರೆಯಲು ಚಿಂತನೆ ನಡೆಸಲಾಗಿದೆ ಎಂದು ಅವರು ಹೇಳಿದ್ದಾರೆ. ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸುವ ಸಲುವಾಗಿ ಈ ಕ್ರಮಕ್ಕೆ ಮುಂದಾಗಿರುವುದಾಗಿ ಅವರು ಹೇಳಿದ್ದಾರೆ.
ಈಗಾಗಲೇ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರಗಳು ಎಲೆಕ್ಟ್ರಿಕ್ ವಾಹನಗಳ ಬಳಕೆಯ ಉತ್ತೇಜನಕ್ಕೆ ಹಲವಾರು ಉಪಕ್ರಮಗಳನ್ನು ಹಮ್ಮಿಕೊಂಡಿದೆ. ಈ ನಿಟ್ಟಿನಲ್ಲಿ ಅಪಾಟ್ರ್ಮೆಂಟ್, ಮಾಲ್, ಸರ್ಕಾರಿ ಕಚೇರಿಗಳು, ರಾಷ್ಟ್ರೀಯ ಹೆದ್ದಾರಿ, ಪ್ರವಾಸೋದ್ಯಮ ಕ್ಷೇತ್ರಗಳಲ್ಲಿ ಎಲೆಕ್ಟ್ರಿಕ್ ರಿಚಾರ್ಜಿಂಗ್ ಪಾಯಿಂಟ್ ಸ್ಥಾಪಿಸಲಾಗುವುದು. ಈ ಸಂಬಂಧ ವಾಹನಗಳ ಮಾಲೀಕರ ಜೊತೆ ಚರ್ಚೆ ನಡೆಸುವುದಾಗಿ ತಿಳಿಸಿದ್ದಾರೆ.
ಭವಿಷ್ಯದಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆ ಹೆಚ್ಚಾಗಿದ್ದು, ಅದನ್ನು ತಡೆಯುವುದು ಅಸಾಧ್ಯ. ಈ ಸಂಬಂಧ ಎಲೆಕ್ಟ್ರಿಕ್ ವಾಹನಗಳ ರಿಚಾರ್ಜಿಂಗ್ ಸೆಂಟರ್ ಸ್ಥಾಪನೆಗೆ ಉದ್ದೇಶಿಸಲಾಗಿದೆ ಎಂದು ಹೇಳಿದ್ದಾರೆ.
ನ್ಯೂಸ್ 13