Slide
Slide
Slide
previous arrow
next arrow

ಮತದಾನ ಪ್ರಜಾಪ್ರಭುತ್ವಕ್ಕೆ ಭದ್ರಬುನಾದಿ: ಆನಂದ ಎನ್‌.ಜೆ.

300x250 AD

ಹೊನ್ನಾವರ: 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬ ಭಾರತೀಯ ನಾಗರಿಕನು ಸಂವಿಧಾನ ಬದ್ಧವಾಗಿರುವ ತಮ್ಮ ಮತದಾನದ ಹಕ್ಕನ್ನು ಚುನಾವಣೆಯಲ್ಲಿ ಯೋಗ್ಯ ಅಭ್ಯರ್ಥಿಗೆ ಕಡ್ಡಾಯವಾಗಿ ಚಲಾಯಿಸುವುದರ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಸದೃಢಗೊಳಿಸಬೇಕೆಂದು ಹೊನ್ನಾವರ ತಾಲೂಕ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಆನಂದ್ ಎನ್. ಜೆ. ಕರೆ ನೀಡಿದರು.

ಅವರು ಏ.17ರಂದು ಹೊನ್ನಾವರ ತಾಲೂಕ ಪಂಚಾಯತ್ ಆವರಣದಲ್ಲಿ ಹಮ್ಮಿಕೊಳ್ಳಲಾದ ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ಮತದಾರರ ಜಾಗೃತಿ ಕಾರ್ಯಕ್ರಮ (ಸ್ವೀಪ್) ದಲ್ಲಿ ಮಾತನಾಡಿದರು. ತಾಲೂಕಿನ ಎಲ್ಲಾ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟಗಳ ಸ್ವಸಹಾಯ ಸಂಘಗಳ ಪ್ರತಿನಿಧಿಗಳಿಗೆ ಕಡ್ಡಾಯ ಮತದಾನ ಚಲಾವಣೆಯ ಮಹತ್ವ ಕುರಿತು ಮಾಹಿತಿ ನೀಡಿದರು. ಸ್ವಸಹಾಯ ಸಂಘಗಳ ಸದಸ್ಯರಿಗೆ ಮತದಾನದ ಮಹತ್ವ ಸಾರುವ ರಂಗೋಲಿ ಸ್ಪರ್ಧೆ ಹಾಗೂ ಕ್ಯಾಂಡಲ್ ಮಾರ್ಚ್ ಆಯೋಜಿಸಲಾಗಿತ್ತು. ತಾಲೂಕಿನ 26 ಗ್ರಾಮ್ ಪಂಚಾಯತ ಒಕ್ಕೂಟಗಳ ಪ್ರತಿನಿಧಿಗಳು ಭಾಗವಹಿಸಿದ್ದು ಚಂದಾವರ ಪ್ರಥಮ, ಜಲವಳ್ಳಿ ತಾಲೂಕ ಪಂಚಾಯತ ದ್ವಿತೀಯ, ಹಾಗು ಹೊಸಾಕುಳಿ ತಂಡವು ತೃತೀಯ ಸ್ಥಾನವನ್ನು ಪಡೆದು ಕಾರ್ಯನಿರ್ವಾಹಕ ಅಧಿಕಾರಿಗಳಿಂದ ಸ್ವೀಪ್ ಪ್ರಶಸ್ತಿ ಮತ್ತು ಫಲಕಗಳನ್ನು ಪಡೆದುಕೊಂಡವು. ಈ ಸಂದರ್ಭದಲ್ಲಿ ಕೃಷ್ಣಾನಂದ ಕೆ. ಸಹಾಯಕ ನಿರ್ದೇಶಕರು (ಗ್ರಾ.ಉ) , ಪುನೀತ ಬಿ ಎಸ್ ಸಹಾಯಕ ಕೃಷಿ ನಿರ್ದೇಶಕರು, ರಾಮ್ ಭಟ್ ಕಚೇರಿ ವ್ಯವಸ್ಥಾಪಕರು, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು, ಶಿಶು ಅಭಿವೃದ್ಧಿ ಅಧಿಕಾರಿಗಳು, ತಾಲೂಕ ಪಂಚಾಯತ ಸಿಬ್ಬಂದಿಗಳು ಹಾಜರಿದ್ದರು.

300x250 AD
Share This
300x250 AD
300x250 AD
300x250 AD
Back to top