Slide
Slide
Slide
previous arrow
next arrow

6ನೇ ತರಗತಿ ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

300x250 AD

ಕಾರವಾರ: ಪ್ರಸಕ್ತ ಸಾಲಿನ ಉತ್ತರ ಕನ್ನಡ ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ದಾಂಡೇಲಿಯ ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ ಮತ್ತು ಮುಂಡಗೋಡ, ಹಳಿಯಾಳ ಹಾಗೂ ಬೆಟ್ಕುಳಿ (ಕುಮಟಾ)ಯ ಮೌಲಾನಾ ಆಜಾದ ಮಾದರಿ ಶಾಲೆ (ಆಂಗ್ಲ ಮಾಧ್ಯಮ)ಗೆ 6ನೇ ತರಗತಿ ಪ್ರವೇಶಾತಿಗಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವ ಅವಧಿಯನ್ನು ಎ.ಪಿ.ಜೆ.ಅಬ್ದುಲ್ ಕಲಾಂ ವಸತಿ ಶಾಲೆಗೆ ಏ. 30 ಮತ್ತು ಮೌಲಾನಾ ಆಜಾದ ಮಾದರಿ ಶಾಲೆಗೆ ಮೇ 15 ರವರೆಗೆ ವಿಸ್ತರಿಸಲಾಗಿದೆ. ಅರ್ಜಿಯನ್ನು https://sevasindhu.karnataka.gov.in/ ಹಾಗೂ https://dom.karnataka.gov.in ವೆಬ್‌ಸೈಟ್ ಮೂಲಕ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆಯ ಪ್ರಾಂಶುಪಾಲರ ದೂ.ಸಂ:Tel:+918310998779, ಮೌಲಾನಾ ಆಜಾದ ಮಾದರಿ ವಸತಿ ಶಾಲೆಯ ಮುಖ್ಯೋಪಾಧ್ಯಾಯರು ಮುಂಡಗೋಡ-Tel:+919008841149, ಹಳಿಯಾಳ-Tel:+919611038069, ಬೆಟ್ಕುಳಿ (ಕುಮಟಾ)-Tel:+919741481591ಅಥವಾ ಜಿಲ್ಲಾ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ದೂ.ಸಂ:Tel:+9108382-220336 ಅಥವಾ ಹತ್ತಿರದ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರದಲ್ಲಿ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top