Slide
Slide
Slide
previous arrow
next arrow

ಬೈಕ್ ಚಾಲನೆ ವೇಳೆ ಮೊಬೈಲ್ ಬಳಕೆ: ಲೈಸೆನ್ಸ್ ರದ್ದು

300x250 AD

ಶಿರಸಿ: ಇಲ್ಲಿನ ಗಣೇಶ ನಗರದ ನಿವಾಸಿಯಾದ ದರ್ಶನ ರಮಾನಂದ ಶೆಟ್ಟಿ ಬೈಕ್ ಚಾಲನೆ ಮಾಡುವ ವೇಳೆ ಮೊಬೈಲ್‌ನಲ್ಲಿ ಮಾತನಾಡುತ್ತಾ ಅತಿವೇಗ ಮತ್ತು ನಿರ್ಲಕ್ಷತೆಯಿಂದ ವಾಹನ ಚಲಾಯಿಸುತ್ತಿದ್ದನ್ನು ಗಮನಿಸಿದ ನಗರ ಠಾಣೆಯ ಪಿಎಸ್ಐ ನಾಗಪ್ಪ ಬಿ. ಪ್ರಕರಣ ದಾಖಲಿಸಿ, ರೂ 2000/- ದಂಡ ವಿಧಿಸಿದ್ದಲ್ಲದೆ ಡ್ರೈವಿಂಗ್ ಲೈಸೆನ್ಸ್ ರದ್ದು ಮಾಡುವಂತೆ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಶಿರಸಿರವರಿಗೆ ಪತ್ರ ಬರೆದಿದ್ದಾರೆ.

ಶಿರಸಿ ವೃತ್ತ ನಿರೀಕ್ಷಕರಾದ ಶಶಿಕಾಂತ ವರ್ಮಾ ಸಾರ್ವಜನಿಕರು ವಾಹನ ಚಲಾಯಿಸುವ ವೇಳೆ ಮೊಬೈಲ್ ಬಳಕೆ ಮಾಡಿದಲ್ಲಿ ಕಠಿಣ ಕ್ರಮ ಕೈಗೊಳ್ಳುವುದಾಗಿ ಮತ್ತು ಅಂತ ವಾಹನ ಸವಾರರ ಲೈಸೆನ್ಸ್ ಗಳನ್ನು ಅಮಾನತುಪಡಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

300x250 AD
Share This
300x250 AD
300x250 AD
300x250 AD
Back to top