Slide
Slide
Slide
previous arrow
next arrow

ಕಾಗೇರಿ ಗೆಲುವಿಗೆ ಒಕ್ಕೊರಲ ಪ್ರಯತ್ನ: ಕೆ.ಜಿ.ನಾಯ್ಕ್

300x250 AD

ಸಿದ್ದಾಪುರ: ನರೇಂದ್ರ ಮೋದಿ ಅವರು ಮೂರನೇ ಅವಧಿಗೆ ಪ್ರಧಾನ ಮಂತ್ರಿ ಆಗಬೇಕು ಎನ್ನುವುದು ಎಲ್ಲರ ಆಶಯವಾಗಿದೆ. ಅದರಂತೆ ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ದಾಖಲೆಯ ಗೆಲುವಿಗಾಗಿ ನಾವೆಲ್ಲರೂ ಒಂದಾಗಿ ಪ್ರಯತ್ನಿಸುತ್ತೇವೆ. ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದು ರಾಜ್ಯ ಬಿಜೆಪಿ ರಾಜ್ಯ ಕಾರ್ಯಕರಿಣಿ ಸದಸ್ಯ ಕೆ.ಜಿ.ನಾಯ್ಕ ಹಣಜೀಬೈಲ್ ಹೇಳಿದರು.

ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಈ ಹಿಂದಿನ ಲೋಕಸಭಾ ಚುನಾವಣೆಯಲ್ಲಿ ಸಂಸದ ಅನಂತಕುಮಾರ ಹೆಗಡೆ ಅವರು 4ಲಕ್ಷದ 79ಸಾವಿರ ಮತಗಳ ಅಂತರದಿಂದ ದಾಖಲೆಯ ಗೆಲುವನ್ನು ಸಾಧಿಸಿದ್ದರು. ಈಗ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು 5ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸುತ್ತಾರೆ ಎನ್ನುವ ವಿಶ್ವಾಸ ಇದೆ. ಕಿತ್ತೂರು-ಖಾನಾಪುರ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಜೆಪಿಯ ಸಂಘಟನೆ ಎಲ್ಲ ಹಂತದಲ್ಲಿಯೂ ಉತ್ತಮವಾಗಿದೆ. ಬಿಜೆಪಿಯ ಶಕ್ತಿಕೇಂದ್ರ, ಮಹಾಶಕ್ತಿಕೇಂದ್ರ ಸೇರಿದಂತೆ ಎಲ್ಲ ವಿಭಾಗದವರು ಬಿಜೆಪಿ ಗೆಲುವಿಗಾಗಿ ಶ್ರಮಿಸುತ್ತಿದ್ದಾರೆ.
ಕಳೆದ ವಿಧಾನ ಸಭಾ ಚುನಾವಣೆಯಲ್ಲಿನ ಸ್ಥಿತಿ ಬೇರೆ ಈಗ ಬೇರೆ. ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ನಡುವೆ ಯಾವುದೇ ಭಿನ್ನಾಭಿಪ್ರಾಯ ಹಾಗೂ ಬಿನ್ನಮತವೂ ಇಲ್ಲ. ಕೆಲವು ವಿಷಯಗಳಿಗೆ ಭಿನ್ನಾಭಿಪ್ರಾಯ ಇದ್ದರೂ ಈಗ ಅದನ್ನು ಪಕ್ಷದ ರಾಜ್ಯಾಧ್ಯಕ್ಷರು, ಮುಖಂಡರು ಬಗೆಹರಿಸಿದ್ದಾರೆ. ಈ ಹಿಂದಿನ ಎಲ್ಲವನ್ನು ಮರೆತು ನಾವೆಲ್ಲರೂ ಸೇರಿ ಜಿಲ್ಲೆಯಲ್ಲಿ ಕಾಗೇರಿ ಅವರ ಗೆಲುವಿಗಾಗಿ ಒಂದಾಗಿ ಪ್ರಚಾರ ಕಾರ್ಯದಲ್ಲಿ ತೊಡಗಿಕೊಳ್ಳುತ್ತೇವೆ ಹಾಗೂ ವಿಜಯವನ್ನು ಸಾಧಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ತಾಲೂಕು ಪ್ರಧಾನ ಕಾರ್ಯದರ್ಶಿ ಎಸ್.ಕೆ.ಮೇಸ್ತಾ, ಪ್ರಮುಖರಾದ ಮಾರುತಿ ನಾಯ್ಕ ಕಾನಗೋಡು, ರವಿಕುಮಾರ ನಾಯ್ಕ ಜಾತಿಕಟ್ಟೆ, ವಿಜಯೇಂದ್ರ ಗೌಡರ್, ರಾಘವೇಂದ್ರ, ಸುರೇಶ ನಾಯ್ಕ, ನಾಗರಾಜ, ಧನಂಜಯ, ರಾಘವೇಂದ್ರ ಹಲಗೇರಿ ಇತರರಿದ್ದರು.

300x250 AD
Share This
300x250 AD
300x250 AD
300x250 AD
Back to top