Slide
Slide
Slide
previous arrow
next arrow

ಉಚಿತ ಕೌಶಲ್ಯ ಆಧಾರಿತ ತರಬೇತಿಗೆ ಅರ್ಜಿ ಆಹ್ವಾನ

300x250 AD

ಕಾರವಾರ: ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆ ವತಿಯಿಂದ 18 ರಿಂದ 45 ವಯಸ್ಸಿನ ಗ್ರಾಮೀಣ ಭಾಗದ ನಿರುದ್ಯೋಗ ಯುವಕ/ಯುವತಿಯರಿಗಾಗಿ ಮೇ ಮತ್ತು ಜೂನ್ ತಿಂಗಳಿನಲ್ಲಿ “ಜೆಸಿಬಿ ಅಪರೇಟರ್”, “ಪೋಟೋಗ್ರಾಫಿ ಮತ್ತು ವೀಡಿಯೋಗ್ರಾಫಿ” “ಲಘು ಮೋಟರ್ ವಾಹನ ಚಾಲನಾ” ಉಚಿತ ತರಬೇತಿಗಳಿಗೆ ಅರ್ಜಿ ಆಹ್ವಾನಿಸಿದೆ.
ಅಭ್ಯರ್ಥಿಗಳು ತಮ್ಮ ಹೆಸರು, ವಿಳಾಸಗಳನ್ನು ನೊಂದಾಯಿಸಲು ಏ 30 ಕೊನೆಯ ದಿನವಾಗಿದೆ. ಈ ತರಬೇತಿಗಳು ಸ್ವ-ಉದ್ಯೋಗ ಪ್ರಾರಂಭಿಸಿ, ಸ್ವಾವಲಂಬಿ ಜೀವನ ನಡೆಸಲು ಅನುಕೂಲವಾಗಲಿವೆ. ತರಬೇತಿ ಅವಧಿಯಲ್ಲಿ ಊಟ ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿರುತ್ತದೆ. ಮೊದಲು ಬಂದವರಿಗೆ ಹಾಗೂ ಗ್ರಾಮೀಣ ಭಾಗದವರಿಗೆ ಮೊದಲ ಆದ್ಯತೆ ನೀಡಲಾಗುವುದು. ತರಬೇತಿಯಲ್ಲಿ ಕೌಶಲ್ಯ, ಸಾಫ್ಟ್ ಸ್ಟೀಲ್ಸ್, ಯೋಗ ತರಬೇತಿ ಹಾಗೂ ಬ್ಯಾಂಕಿನಿಂದ ಸಾಲ ಪಡೆದು ಸ್ವ-ಉದ್ಯೋಗ ಪ್ರಾರಂಭಿಸಲು ಬೇಕಾಗುವ ಜ್ಞಾನ, ಸರಕಾರಿ ಯೋಜನೆಗಳು ಮತ್ತು ಯೋಜನಾ ವರದಿ ತಯಾರಿಕೆ ಇನ್ನೇತರ ಮಾಹಿತಿಗಳನ್ನು ಉಚಿತವಾಗಿ ನೀಡಲಾಗುವುದು.
ಆಸಕ್ತ ಅಭ್ಯರ್ಥಿಗಳು ನಿರ್ದೇಶಕರು, ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆ, ಹಳಿಯಾಳ, ದೂ. ಸಂ:Tel:+918217236973, Tel:+919482555316Tel:+919483485489, ನ್ನು ಸಂಪರ್ಕಿಸಬಹುದು ಎಂದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

300x250 AD
Share This
300x250 AD
300x250 AD
300x250 AD
Back to top