ಸಿದ್ದಾಪುರ: ತಾಲೂಕಿನ ಬೇಡ್ಕಣಿ ಗ್ರಾಮದ ಜೇಡಗೆರೆ ಕೆರೆಯನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ನಮ್ಮೂರ ನಮ್ಮ ಕೆರೆ ಕಾರ್ಯಕ್ರಮದಡಿಯಲ್ಲಿ ಹೂಳೆತ್ತಲು ಶುಕ್ರವಾರ ಚಾಲನೆ ನೀಡಲಾಯಿತು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಬಾಬು ನಾಯ್ಕ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿ ಡಾ.ವೀರೇಂದ್ರ ಹೆಗ್ಗಡೆಯವರು ರಾಜ್ಯದಲ್ಲಿ 648 ಕೆರೆಗಳನ್ನು ಹೊಳೆತ್ತಲು ಸಹಕರಿಸಿ ರೈತರಿಗೆ ಕೃಷಿಗೆ ಅನುಕೂಲವಾಗುವಂತ ಉತ್ತಮ ಕೆಲಸವನ್ನು ಮಾಡಿದ್ದಾರೆ. ತಾವೆಲ್ಲರೂ ಈ ಕೆರೆಯನ್ನು ಉತ್ತಮ ರೀತಿಯಲ್ಲಿ ಹೂಳೆತ್ತಿ ಕೃಷಿಗೆ ಅನುಕೂಲವಾಗುವಂತೆ ಮಾಡಿಕೊಳ್ಳಬೇಕು ಎಂದು ಹೇಳಿದರು.
ಬೇಡ್ಕಣಿ ಕೋಟೆ ಹನುಮಂತ ದೇವಸ್ಥಾನ ಕಮಿಟಿ ಅಧ್ಯಕ್ಷ ವಿ.ಎನ್. ನಾಯ್ಕ ಮಾತನಾಡಿ ಡಾ. ಡಿ.ವೀರೇಂದ್ರ ಹೆಗ್ಗಡೆ ಅವರು ನಮ್ಮೂರ ಕೆರೆ ಹೂಳೆತ್ತಲು ಅವಕಾಶ ನೀಡಿರುವುದು ನಮ್ಮೆಲ್ಲರ ಸೌಭಾಗ್ಯ . ಸರ್ಕಾರ ಮಾಡದೇ ಇರುವ ಅನೇಕ ಜನಪರ ಕೆಲಸಗಳನ್ನು ಪೂಜ್ಯ ಹೆಗ್ಗಡೆಯವರು ಮಾಡುತ್ತಿರುವುದು ಶ್ಲಾಘನೀಯ. ನಾವೆಲ್ಲ ಊರಿನ ಗ್ರಾಮಸ್ಥರು ಕೆರೆಯನ್ನು ಅತ್ಯುತ್ತಮ ರೀತಿಯಲ್ಲಿ ಹೂಳೆತ್ತಿ ಕೃಷಿಗೆ, ಜಾನುವಾರುಗಳಿಗೆ,ಬಾವಿಗಳಿಗೆ, ಬೋರ್‌ವೇಲ್‌ಗಳಿಗೆ ಅನುಕೂಲ ಆಗುವಂತೆ ಮಾಡಿಕೊಳ್ಳಬೇಕಾಗಿದೆ ಎಂದು ಹೇಳಿದರು.
ಕೆರೆ ಸಮಿತಿ ಅಧ್ಯಕ್ಷ ಬಿ. ಎನ್. ಜಯಪ್ರಕಾಶ್,ತಾಲೂಕು ಯೋಜನಾಧಿಕಾರಿ ಗಿರೀಶ್ ಜಿ. ಪಿ , ಗ್ರಾಮ ಕಮಿಟಿ ಅಧ್ಯಕ್ಷ ನಾಗರಾಜ ಎಂ ನಾಯ್ಕ, ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪ್ರಶಾಂತ್ ಕೆ. ನಾಯ್ಕ, ಗ್ರಾಪಂ ಸದಸ್ಯ ಈರಪ್ಪ. ಡಿ. ನಾಯ್ಕ, ಹಾಲು ಉತ್ಪಾದಕ ಸಹಕಾರಿ ಸಂಘದ ಅಧ್ಯಕ್ಷ ಎಂ.ಆರ್. ನಾಯ್ಕ, ಕೆರೆ ಸಮಿತಿ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು, ಸಂಘದ ಸದಸ್ಯರು, ಸೇವಾಪ್ರತಿನಿಧಿಗಳು ಉಪಸ್ಥಿತರಿದ್ದರು. ಮೇಲ್ವಿಚಾರಕಿ ಪೂರ್ಣಿಮಾ ಎಸ್. ಸ್ವಾಗತಿಸಿದರು.ಕೃಷಿ ಮೇಲ್ವಿಚಾರಕ ಮಹಾದೇವ ಬಿ. ಕಾರ್ಯಕ್ರಮ ನಿರ್ವಹಿಸಿದರು.