Slide
Slide
Slide
previous arrow
next arrow

ಪ್ರಾಥಮಿಕ‌ ಶಾಲಾ ಶಿಕ್ಷಕರ ಸಂಘದಿಂದ ಮತದಾನ ಜಾಗೃತಿ: ಬೈಕ್ ಜಾಥಾ

300x250 AD

ಅಂಕೋಲಾ : ಜಿಲ್ಲಾ ಪಂಚಾಯತ, ಜಿಲ್ಲಾ ಸ್ವೀಪ್ ಸಮಿತಿ ಉತ್ತರ ಕನ್ನಡ, ತಾಲೂಕು ಪಂಚಾಯತ ಅಂಕೋಲಾ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ತಾಲೂಕಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ಲೋಕಸಭಾ ಚುನಾವಣೆ 2024 ಪ್ರಯುಕ್ತ ಪ್ರತಿಶತ 100ರಷ್ಟು ಮತದಾನ ನೌಕರರ ಸಂಘದ ವಾಗ್ದಾನ ಎನ್ನುವ ಧ್ಯೇಯವಾಕ್ಯದೊಂದಿಗೆ ಮತದಾನ ಜಾಗೃತಿಗಾಗಿ ಬೈಕ್ ರ‌್ಯಾಲಿ ಹಮ್ಮಿಕೊಳ್ಳಲಾಯಿತು.

ಪಟ್ಟಣದ ಸ್ವಾತಂತ್ರ್ಯ ಸಂಗ್ರಾಮ ಭವನದ ಬಳಿ ತಹಶೀಲ್ದಾರ ಅನಂತ ಶಂಕರ ಹಸಿರು ನಿಶಾನೆ ತೋರಿಸಿ ಮತದಾನ‌ ಜಾಗೃತಿ ಜಾಥಕ್ಕೆ ಚಾಲನೆ ನೀಡಿದರು. ಈ ವೇಳೆ ಅವರು ಮಾತನಾಡಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಿ ಪ್ರಜಾಪ್ರಭುತ್ವವನ್ನು ಯಶಸ್ವಿಗೊಳಿಸಬೇಕಾಗಿ ಕರೆ ನೀಡಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಮಂಗಳಲಕ್ಷ್ಮೀ ಪಾಟೀಲ ಮಾತನಾಡಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ನಡೆಯುತ್ತಿರುವ ಮತದಾನ ಜಾಗೃತಿ ಯಶಸ್ವಿಯಾಗಲಿ, ತಾಲೂಕಿನಲ್ಲಿ ಅತೀ ಹೆಚ್ಚು ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವದ ವ್ಯವಸ್ಥೆಯನ್ನು ಗಟ್ಟಿಗೊಳಿಸುವಲ್ಲಿ ನಾವೆಲ್ಲ ಕಟಿಬದ್ದರಾಗೋಣ ಎಂದರು. ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಸುನೀಲ ಎಂ ಮಾತನಾಡಿ ಮತದಾನದ ಮಹತ್ವವನ್ನು ಸಾರುವ ನಿಟ್ಟಿನಲ್ಲಿ ಕಳೆದೆರಡು ತಿಂಗಳಿನಿಂದ ಅನೇಕ ಕಾರ್ಯಕ್ರಮಗಳನ್ನು ಕೈಗೊಂಡಿದ್ದು ಕಾಲೇಜು ವಿದ್ಯಾರ್ಥಿಗಳಿಗಾಗಿ ಚೆಸ್ ಸ್ಪರ್ಧೆ, ಪ್ರಬಂಧ ಸ್ಪರ್ಧೆ, ಚರ್ಚಾ ಸ್ಪರ್ಧೆ ಹಾಗೂ ಗ್ರಾ.ಪಂಚಾಯತ ಮಟ್ಟದಲ್ಲೂ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಈ‌ ಕಾರ್ಯದಲ್ಲಿ ವಿವಿಧ ಇಲಾಖೆಗಳು, ಸಂಘ ಸಂಸ್ಥೆಗಳೂ ಕೈಜೋಡಿಸಿವೆ ಎಂದರು. ಗೃಹರಕ್ಷಕ ದಳದ ಜಿಲ್ಲಾ ಸಮಾಧೇಷ್ಠರಾದ ಡಾ. ಸಂಜು ನಾಯಕ ಮಾತನಾಡಿ ವಿಶ್ವದ ಅತೀ ದೊಡ್ಡ ಪ್ರಜಾಪ್ರಭುತ್ವ ವ್ಯವಸ್ಥೆಯ ಭಾರತದಲ್ಲಿ ಮುಂದಿನ ಲೋಕಸಭಾ ಚುನಾವಣೆಯ ಮತದಾನದಲ್ಲಿ ಪ್ರತಿಯೊಬ್ಬರೂ ಮತದಾನ ಮಾಡಬೇಕು. ಪ್ರತಿಯೊಂದು ಮತವೂ ಈ ದೇಶವನ್ನು ಕಟ್ಟಿ ಬೆಳೆಸಲು ಸಹಕಾರಿಯಾಗುತ್ತದೆ ಎಂದರು. ಪಿಡಿಓ ನಾಗೇಂದ್ರ ನಾಯ್ಕ ನಿರ್ವಹಿಸಿದರು. ತಾಲೂಕಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಜಗದೀಶ ನಾಯಕ ಹೊಸ್ಕೇರಿ ಜಾಥದ ನೇತೃತ್ವ ವಹಿಸಿದ್ದರು. ಕಾರ್ಯಕ್ರಮದಲ್ಲಿ ನೂರಾರು ಶಿಕ್ಷಕರು, ತಾ.ಪಂ. ಸಿಬ್ಬಂದಿಗಳು, ಗೃಹರಕ್ಷಕ ದಳದ ಸಿಬ್ಬಂದಿಗಳು ಪಾಲ್ಗೊಂಡಿದ್ದರು. ನಂತರ ಶಿಕ್ಷಕರು ಬೈಕುಗಳ ಮೂಲಕ ಅಂಕೋಲಾ ಪಟ್ಟಣದ ಮೂಲಕ ಸುತ್ತಮುತ್ತಲಿನ ಗ್ರಾಮ ಪಂಚಾಯತ ವ್ಯಾಪ್ತಿಗಳಿಗೂ ತೆರಳಿ ಮತದಾನದ ಜಾಗೃತಿ ಮೂಡಿಸಿದರು.

300x250 AD
Share This
300x250 AD
300x250 AD
300x250 AD
Back to top