Slide
Slide
Slide
previous arrow
next arrow

ದ್ವಿತೀಯ ಪಿಯುಸಿ ಪರೀಕ್ಷೆ-2ಗೆ ಸಿದ್ದತೆ ಕೈಗೊಳ್ಳಿ : ಜಿಲ್ಲಾಧಿಕಾರಿ

300x250 AD

ಕಾರವಾರ: ಜಿಲ್ಲೆಯಲ್ಲಿ ಏ. 29 ರಿಂದ ಮೇ 16ರ ವರೆಗೆ ನಡೆಯುವ ದ್ವಿತೀಯ ಪಿಯುಸಿ ಪರೀಕ್ಷೆ-2 ಯನ್ನು ಪಾರದರ್ಶಕವಾಗಿ ಮತ್ತು ಸುವ್ಯವಸ್ಥಿತವಾಗಿ ಪರೀಕ್ಷೆಗಳು ನಡೆಯುವಂತೆ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ನಿರ್ದೇಶನ ನೀಡಿದರು.
ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಆಯೋಜಿಸಿದ ದ್ವಿತೀಯ ಪಿಯುಸಿ ಪರೀಕ್ಷೆ-2 ರ ಪೂರ್ವ ಸಿದ್ದತಾ ವಿಡಿಯೋ ಸಂವಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯ 11 ಪರೀಕ್ಷಾ ಕೇಂದ್ರಗಳಲ್ಲಿ 2406 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು, ಅನುತ್ತಿರ್ಣವಾದ ವಿದ್ಯಾರ್ಥಿಗಳ ಜೊತೆಗೆ ಈಗಾಗಲೇ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಮತಷ್ಟು ಸುಧಾರಿಸಿಕೊಳ್ಳಲು ಪರೀಕ್ಷೆ ಬರೆಯುತ್ತಿದ್ದಾರೆ. ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಸಲಾಗಿದ್ದು, ಎಲ್ಲಾ ಕೇಂದ್ರಗಳ ಸಿಸಿಟಿವಿ ವೆಬ್‌ಕಾಸ್ಟಿಂಗ್ ಡ್ರೈರನ್ ಯಶಸ್ವಿಯಾಗಿದೆ ಹಾಗೂ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ರೀತಿಯ ಅಕ್ರಮಗಳು ನಡೆಯದಂತೆ ಎಚ್ಚರವಹಿಸಲಾಗಿದೆ ಎಂದರು.
ಜಿಲ್ಲೆಯಲ್ಲಿ ಪ್ರಶ್ನೆ ಪತ್ರಿಕೆಗಳನ್ನು ತಲುಪಿಸಲು ತಹಶೀಲ್ದಾರರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪದವಿ ಪೂರ್ವ ಕಾಲೇಜಿನ ಹಿರಿಯ ಪ್ರಾಂಶುಪಾಲರನ್ನು ಒಳಗೊಂಡ 11 ಮಾರ್ಗಾಧಿಕಾರಿಗಳ ತಂಡ ರಚನೆ ಮಾಡಲಾಗಿದೆ. ಹಾಗೂ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ರೀತಿಯ ಸಮಸ್ಯೆಗಳಾಗದಂತೆ ಕುಡಿಯುವ ನೀರು, ಶೌಚಾಲಯ, ಹಾಗೂ ಇನ್ನಿತರ ಸೌಕರ್ಯಗಳನ್ನು ಸುಸ್ಥಿತಿಯಲ್ಲಿಟ್ಟುಕೊಳ್ಳಬೇಕು ಯಾವುದೇ ರೀತಿಯ ಗೊಂದಲಗಳಿಗೆ ಆಸ್ಪದ ನೀಡಬಾರದು ಮತ್ತು ಪರೀಕ್ಷಾ ಕೇಂದ್ರದ ಅಧೀಕ್ಷಕರನ್ನು ಒಳಗೊಂಡಂತೆ ಎಲ್ಲಾ ಸಿಬ್ಬಂದಿಗಳು ಕಡ್ಡಾಯವಾಗಿ ಗುರುತಿನ ಚೀಟಿ ಧರಿಸಬೇಕು ಎಂದರು.
ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಪೊಲೀಸ್ ಸಿಬ್ಬಂದಿಗಳನ್ನು, ಆರೋಗ್ಯ ಸಹಾಯಕರನ್ನು ನಿಯೋಜಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ ಅವರು ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರದಿಂದ ಪಾರದರ್ಶಕವಾಗಿ ಪರೀಕ್ಷೆ ನಡೆಸುವಂತೆ ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪ್ರಕಾಶ ರಜಪೂತ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಸತೀಶ ಬಿ ನಾಯ್ಕ, ತಹಶೀಲ್ದಾರರು, ಜಿಲ್ಲಾಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.

300x250 AD
Share This
300x250 AD
300x250 AD
300x250 AD
Back to top