Slide
Slide
Slide
previous arrow
next arrow

ಬಿಜೆಪಿ ಮುಖಂಡ ಶ್ರೀನಿವಾಸ ಪ್ರಸಾದ ನಿಧನಕ್ಕೆ ರೂಪಾಲಿ ನಾಯ್ಕ್ ಸಂತಾಪ

300x250 AD

ಕಾರವಾರ: ಮೈಸೂರು ಚಾಮರಾಜನಗರ ಭಾಗದ  ಪ್ರಭಾವಿ ದಲಿತ ಮುಖಂಡರು, ಲೋಕಸಭಾ ಕ್ಷೇತ್ರದಿಂದ 6 ಬಾರಿ  ಸಂಸದರಾಗಿ  ಆಯ್ಕೆಯಾಗಿದ್ದ ಕೇಂದ್ರದ ಮಾಜಿ ಸಚಿವರು, ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸದರು, ಹಿರಿಯ ಮುತ್ಸದ್ದಿಗಳಾದ ವಿ. ಶ್ರೀನಿವಾಸ ಪ್ರಸಾದ ಅನಾರೋಗ್ಯದಿಂದ ನಿಧನರಾಗಿದ್ದು, ಅವರ ನಿಧನಕ್ಕೆ ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಮಾಜಿ ಶಾಸಕಿ ರೂಪಾಲಿ ನಾಯ್ಕ್ ಸಂತಾಪ ಸೂಚಿಸಿದ್ದಾರೆ.

ಅವರ ರಾಜಕೀಯ ಜೀವನದ  ದಿನಗಳಲ್ಲಿ ಬಿಜೆಪಿಯನ್ನು ಆಯ್ದುಕೊಂಡು ಸಂಸದರಾಗಿ ಪಕ್ಷದ ತತ್ವ, ಸಿದ್ದಾಂತ ಹಾಗೂ ರಾಷ್ಟ್ರೀಯವಾದದ ಸತ್ವವನ್ನು ಜನರಿಗೆ ತಿಳಿಸುವಲ್ಲಿ ನಾಯಕತ್ವ ವಹಿಸಿದ್ದು ಬಿಜೆಪಿಯ ಸಾಮಾಜಿಕ ನ್ಯಾಯ ಹಾಗೂ ಸಂವಿಧಾನ ಮೌಲ್ಯವನ್ನು ಎತ್ತಿ ಹಿಡಿಯುವ ಬದ್ಧತೆಯನ್ನು ಸಾಕ್ಷೀಕರಿಸಿತ್ತು ಎಂದು ಹೇಳಿದ್ದಾರೆ.

300x250 AD

ಅವರ ಅಗಲಿಕೆಯ ನೋವನ್ನು ಅವರ ಕುಟುಂಬ ವರ್ಗದವರಿಗೆ ಹಾಗೂ ಅವರ ಅಪಾರ  ಬಂಧು- ಮಿತ್ರರಿಗೆ,ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

Share This
300x250 AD
300x250 AD
300x250 AD
Back to top