ಹೊನ್ನಾವರ: ಲೋಕಸಭಾ ಸಾರ್ವತ್ರಿಕ ಚುನಾವಣೆ- 2024ರ ಸಂಬಂಧ ಮತದಾನದ ಬಗ್ಗೆ ಅರಿವು ಮೂಡಿಸಲು ತಾಲ್ಲೂಕು ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರು ಹಾಗೂ ವಿಕಲಚೇತನರಿಂದ ಏರ್ಪಡಿಸಿದ್ದ ವಿಕಲಚೇತನರ ಬೈಕ್ ರ‌್ಯಾಲಿ ಗಮನ ಸೆಳೆಯಿತು.
ಇಲ್ಲಿನ ತಾಲೂಕ ಪಂಚಾಯತ ಕಛೇರಿಯಿಂದ ಶನಿವಾರ ತಾಲ್ಲೂಕು ಆಡಳಿತ, ತಾಲ್ಲೂಕು ಸ್ವೀಪ್ ಸಮಿತಿ ಹಾಗೂ ತಾಲೂಕು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಇವರ ಸಹಯೋಗದಲ್ಲಿ ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಅಂಗವಾಗಿ ಮತದಾನ ಜಾಗೃತಿ ಸಂಬಂಧ ಹಮ್ಮಿಕೊಂಡಿದ್ದ ವಿಕಲಚೇತನರ ಬೈಕ್ ರ‌್ಯಾಲಿಗೆ ತಹಶೀಲ್ದಾರ ರವಿರಾಜ ದೀಕ್ಷಿತ್, ತಾಲೂಕ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಆನಂದ ಎನ್.ಜೆ. ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
ಕಡಿಮೆ ಮತದಾನವಾಗಿರುವ ಪ್ರದೇಶಗಳಲ್ಲಿ ಹಾಗೂ ಅರ್ಹ ಮತದಾರರು ಯಾರೂ ಕೂಡ ಮತದಾನ ಪ್ರಕ್ರಿಯೆಯಿಂದ ಹೊರಗುಳಿಯಬಾರದು ಎಂಬ ಹಿನ್ನಲೆಯಲ್ಲಿ ತಾಲೂಕ ಸ್ವೀಪ್ ಸಮಿತಿ ವತಿಯಿಂದ ಮತದಾನದ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ. ಅಂಗವಿಕಲ ಮತದಾರರು, ಯುವ ಮತದಾರರು, ಮಹಿಳಾ ಮತದಾರರು ಸೇರಿದಂತೆ ಪ್ರತಿಯೊಬ್ಬ ಅರ್ಹ ಮತದಾರರು ಮತದಾನ ಪ್ರಕ್ರಿಯೆಯಿಂದ ಹೊರಗುಳಿಯದಂತೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜಾಗೃತಿ ಮೂಡಿಸಲಾಗುತ್ತಿದ್ದು, ಕಡ್ಡಾಯವಾಗಿ ಮತದಾನ ಮಾಡುವಂತೆ ಪ್ರೇರೇಪಿಸಲಾಗುತ್ತಿದೆ ಎಂದು ಕಾರ್ಯನಿರ್ವಾಹ ಅಧಿಕಾರಿಗಳು ತಿಳಿಸಿದರು.
ಈ ಸಂದರ್ಭದಲ್ಲಿ ಕೃಷ್ಣಾನಂದ ಕೆ. ಸಹಾಯಕ ನಿರ್ದೇಶಕರು (ಗ್ರಾ.ಉ), ರಾಮ್ ಭಟ್ ಕಚೇರಿ ವ್ಯವಸ್ಥಾಪಕರು, ತಾಲೂಕ ಪಂಚಾಯತ ಸಿಬ್ಬಂದಿಗಳು ಹಾಜರಿದ್ದರು.