Slide
Slide
Slide
previous arrow
next arrow

ಉತ್ತರ ಕನ್ನಡ ದೇಶಕ್ಕೆ ಮಾದರಿಯಾಗಲಿ; ಸೆಲ್ಕೋ ಹರೀಶ್ ಹಂದೆ

300x250 AD

ಮಾವಿನಕೊಪ್ಪದಲ್ಲಿ ಕೋಲ್ಡ್ ಸ್ಟೋರೇಜ್ ಘಟಕ ಉದ್ಘಾಟನೆ | ಸೆಲ್ಕೋದಿಂದ ಗ್ರಾಮೀಣ ಭಾಗದಲ್ಲಿ ಕ್ರಾಂತಿ

ಶಿರಸಿ: ರೈತರಿಗೆ ತಂತ್ರಜ್ಞಾನ ಕೊಡದೇ ಹೋದರೆ ಪ್ರಗತಿ ಸಾಧ್ಯವಿಲ್ಲ. ಉತ್ತರ ಕನ್ನಡದ‌ ಜಿಲ್ಲೆ ಉತ್ಪನ್ನ, ಮೌಲ್ಯ ವರ್ಧನೆ, ಮಾರುಕಟ್ಟೆ ಗಣನೀಯವಾಗಿ ತೊಡಗಿಕೊಂಡರೆ  ದೇಶಕ್ಕೆ ಮಾದರಿಯಾಗಲಿದೆ ಸಾಧ್ಯತೆ ಇದೆ ಎಂದು‌ ಸೆಲ್ಕೋ‌ ಸಂಸ್ಥಾಪಕ, ಮ್ಯಾಗ್ನಸ್ಸೆ ಪ್ರಶಸ್ತಿ‌ ಪುರಸ್ಕೃತ ಹರೀಶ ಹಂದೆ ಹೇಳಿದರು. ಅವರು ಬುಧವಾರ ತಾಲೂಕಿನ ಮಾವಿನಕೊಪ್ಪದಲ್ಲಿ ಸೆಲ್ಕೋ ಸೋಲಾರ್, ಸೆಲ್ಕೋ ಫೌಂಡೇಶನ್ ಸಹಕಾರದಲ್ಲಿ ಸೌರ ಶಕ್ತಿಯ ಆಧರಿತ 20ಮೆಟ್ರಿಕ್ ಟನ್ ಸಾಮರ್ಥ್ಯದ ಕೋಲ್ಡ ಸ್ಟೋರೇಜ್ ಘಟಕ ಉದ್ಘಾಟಿಸಿ‌ ಮಾತನಾಡಿದರು.

ದೇಶಕ್ಕೆ ಲಾಭವಾಗುವ ಕೆಲಸ ಎಲ್ಲಡೆ ಆಗಬೇಕು. ಒಂದು ಯೋಜನೆ ಇತರ ಯುವ ಶಕ್ತಿಯನ್ನೂ ಆಕರ್ಷಿಸುವಂತೆ ಆದಾಗ ಪ್ರಗತಿ ವೇಗ ಪಡೆಯಲಿದೆ ಎಂದರು. ನಮ್ಮ‌ ಸಮಾಜ, ಮನೆಯಲ್ಲಿ‌ ಕೂಡ ಸವಾಲು, ರಿಸ್ಕ ತೆಗೆದುಕೊಳ್ಳುವದಿಲ್ಲ.  ಸಂಶೋಧನೆಗೆ ಹಣ ಬೇಕು. ಅದಕ್ಕಾಗಿ ಬ್ಯಾಂಕಿಗೆ ಹೋಗಬೇಕಾದ ಸ್ಥಿತಿ ಇದೆ ಎಂದ ಅವರು, ಉತ್ತರ ಕನ್ನಡ ಮಾದರಿ ಜಿಲ್ಲೆ ಆದರೆ ದೇಶ ಮಟ್ಟದಲ್ಲಿ ಅನುಕೂಲ ಆಗಲಿದೆ. ಹಿಂದೆ ಸಹಕಾರಿ ಆಂದೋಲನ ನಡೆದಿದ್ದರಿಂದ ಇಂದು ಸುಲಭವಾಗಿದೆ. ಈ ಆಂದೋಲನ ಕೂಡ ಆಗಬೇಕು ಎಂದರು.  ಮಾರುಕಟ್ಟೆ ಸಂಪರ್ಕ ಸಾಧಿಸಿ ಕೆಲಸ ಮಾಡಿದಾಗ ಭವಿಷ್ಯ ಒಳ್ಳೆಯದಾಗಲಿದೆ. ಸಣ್ಣ ಸಣ್ಣ ರೈತರಿಗೆ ಅನುಕೂಲ ಆಗಬೇಕು. ಅದಕ್ಕೋಸ್ಕರ ಸೆಲ್ಕೋ ಕೆಲಸ ಮಾಡುತ್ತಿದೆ. ಋಣಾತ್ಮಕ ಅಂಶಗಳನ್ನು ಆಲೋಚಿಸದೇ ಕೆಲಸ ಮಾಡಬೇಕು ಎಂದರು.

ಸೆಲ್ಕೋ ಸಂಸ್ಥೆಯ‌ ಮುಖ್ಯ ಕಾರ್ಯನಿರ್ವಾಹಕ ಮೋಹನ ಭಾಸ್ಕರ ಹೆಗಡೆ ಹೆರವಟ್ಟ, ಇಪ್ಪತ್ತು ಮೆಟ್ರಿಕ್ ‌ಟನ್ ಸೌರ ಶಕ್ತಿ ಆಧರಿತ ಕೋಲ್ಡ್ ಸ್ಟೋರೇಜ್ ರಾಜ್ಯದ ಮೊದಲಲ್ಲಿ ಒಂದು.  ೨೨ ಲಕ್ಷ ರೂಪಾಯಿ ಯೋಜನೆಯಲ್ಲಿ ಕುಟುಂಬದವರು ೭ ಲ.ರೂ. ಹಾಕಿದ್ದಾರೆ. ಉದ್ಯೋಗ ಸೃಷ್ಟಿ ಕೂಡ ನೋಡುತ್ತೇವೆ. ಆರ್ಥಿಕತೆ ಜೊತೆ ಸಾಮಾಜಿಕ ಜವಾಬ್ದಾರಿ ಕಾರ್ಯ. ೭೮ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸೋಲಾರ್ ಘಟಕ, ೩೦೦ ಶಾಲೆಗಳಲ್ಲಿ ಡಿಜಿಟಲೀಕರಣ ನೆರವಾಗಿದ್ದೇವೆ . ೧೭೦ಕ್ಕೂ ಅಧಿಕ ಜೀವನೋಪಾಯ ಉತ್ಪನ್ನಗಳಿಗೆ ನೆರವಾಗುತ್ತಿದ್ದೇವೆ ಎಂದರು. ಡಬ್ಲು ಎಚ್ ಓ ಪ್ರಮುಖ ನೆದರಲ್ಯಾಂಡನ ಜಪರಿ ಪ್ರಿನ್ಸ್, ಸೆಲ್ಕೋ‌ ಮೂಲಕ ಗ್ರಾಮೀಣ ಪ್ರಗತಿಗೆ ಅನುಕೂಲ ಆಗುವ ಕಾರ್ಯ ಮಾಡುತ್ತಿದ್ದೇವೆ. ಅನ್ವೇಷಣೆ, ಕ್ರಾಂತಿ, ಸುಸ್ಥಿರ ಇಂಧನದ ಬಳಕೆ ಹೆಚ್ಚಲಿ ಎಂದರು.

ಭಾರತೀಯ ವಿಜ್ಞಾನ ಮಂದಿ ಗೋಪಾಲಕೃಷ್ಣ ಹೆಗಡೆ, ಸೋಲಾರ್ ಟು ರೂರಲ್ ಆಗಿ ಸೆಲ್ಕೋ ಕೆಲಸ ಮಾಡುತ್ತಿದೆ ಎಂದರು. ಸಾವಯವ ಒಕ್ಕೂಟದ ಅಧ್ಯಕ್ಷ ವಿಶ್ವೇಶ್ವರ ಭಟ ಕೋಟೆಮನೆ, ಸೆಲ್ಕೋ ಸೋಲಾರ್ ಒಂದು ಕ್ರಾಂತಿ‌ ಮಾಡಿಕೊಡುತ್ತಿದೆ. ರಾಗಿ‌ ಮಾಲ್ಟನಿಂದ ಅನೇಕ ವಸ್ತುಗಳ ಮೌಲ್ಯವರ್ಧನೆ ಆಗಬೇಕು. ಇಂದು ಹತ್ತು ಕೋಟಿ ಮೌಲ್ಯದ ಹಲಸು ನಾಶವಾಗುತ್ತಿದೆ. ಉತ್ತರ ಕನ್ನಡದ ಋತುಮಾನ ಬೆಳೆಗಳ ಸಂರಕ್ಷಣೆ ಕಾರ್ಯ ಆಗಬೇಕು. ಕೋಲ್ಡ ಸ್ಟೋರೇಜ್ , ಸೋಲಾರ್ ಡ್ರಾಯರ್ ಬೇಕು. ಸಣ್ಣ ಸಣ್ಣ ಘಟಕಗಳ ಬಗ್ಗೆ ಆಲೋಚಿಸಬೇಕಾಗಿದೆ ಎಂದರು.

ಪ್ರಾಸ್ತಾವಿಕ ಮಾತನಾಡಿದ‌ ಮಾವಿನಕೊಪ್ಪದ ವಿಕಾಸ ಹೆಗಡೆ, ನೈಸರ್ಗಿಕ ಸಂಪತ್ತು ಹಾಳಾಗದಂತೆ‌ ನೋಡಿಕೊಳ್ಳಲು ಶೀತಲೀಕರಣ ಘಟಕ ನೆರವಾಗುತ್ತದೆ. ಲಕ್ಷಾಂತರ ರೂಪಾಯಿ ನಷ್ಟ ಆಗುವುದನ್ನು ತಡೆಗಟ್ಟಬಹುದು ಎಂದರು‌. ಮಹತೀ ಎಂಟರ್ ಪ್ರೈಸಸ್ ನಾಗರಾಜ್ ಜೋಶಿ, ಚಂದ್ರಶೇಖರ ಹೆಗಡೆ, ಭುವನೇಶ್ವರಿ ಜೋಶಿ, ಮಂಜುನಾಥ ಭಾಗ್ವತ್, ಸುಬ್ರಾಯ ಹೆಗಡೆ, ನಾರಾಯಣ ಹೆಗಡೆ ಇದ್ದರು.

300x250 AD

ಕೋಲ್ಡ ಸ್ಟೋರೇಜ್ ಕೊರತೆಯಿಂದ ಶೇ.೩೦ ಉತ್ಪನ್ನ ನಷ್ಟವಾಗುತ್ತಿದೆ. ಸಣ್ಣ ಸಣ್ಣ ಘಟಕ ಇನ್ನಷ್ಟು ನೆರವಾಗಲಿದೆ. ಜಿಲ್ಲೆಯ ಅಗತ್ಯತೆಯ ಪ್ರಸ್ತಾಪವನೆಯನ್ನು ಸಲ್ಲಿಸುತ್ತೇವೆ. ಒಟ್ಟಾಗಿ ಕೆಲಸ ಮಾಡಲು ಸಾಧ್ಯವಿದೆ.

– ವಿಶ್ವೇಶ್ವರ ಭಟ್ಟ ಕೋಟೆಮನೆ, ಅಧ್ಯಕ್ಷರು, ಸಾವಯವ ಒಕ್ಕೂಟ

ಸೆಲ್ಕೋ ಗ್ರಾಹಕರಿಗೆ ನಷ್ಟ ಆಗದಂತೆ ಕಾಳಜಿ ವಹಿಸುತ್ತೇವೆ. ಇಲ್ಲಿ ಆಗುವ ಒಂದು ಪ್ರಯೋಗ ದೇಶದ ಇನ್ನಾವುದೋ ಒಂದು ಭಾಗಕ್ಕೆ ಅನುಕೂಲ ಆಗಬಹುದು. ರಾಜ್ಯದ ಸೌರ ಚಾಲಿತ ೨೦ ಮೆಟ್ರಿಕ್ ಟನ್ ಕೋಲ್ಡ ಸ್ಟೋರೇಜ್ ಮೊದಲನೆಯ ಸಾಲಿನಲ್ಲಿ ಇದೆ.

ಮೋಹನ ಭಾಸ್ಕರ ಹೆಗಡೆ, ಸಿಇಓ ಸೆಲ್ಕೋ

Share This
300x250 AD
300x250 AD
300x250 AD
Back to top