ಬೆಂಗಳೂರು: ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟಗೊಂಡಿದ್ದು, ಕಳೆದ ವರ್ಷಕ್ಕಿಂತ ಕಡಿಮೆ ಆಗಿದೆ. ಉಡುಪಿ ಮೊದಲ ಸ್ಥಾನ, ದಕ್ಷಿಣ ಕನ್ನಡ ಎರಡನೇ ಸ್ಥಾನ ಹಾಗೂ ಶಿವಮೊಗ್ಗ ಮೂರನೇ ಸ್ಥಾನ ಪಡೆದರೆ, ಯಾದಗಿರಿ ಕೊನೆ ಸ್ಥಾನವನ್ನು ಪಡೆದಿದೆ.
ಶಿರಸಿ ಶೈಕ್ಷಣಿಕ ಜಿಲ್ಲೆಗೆ ಸಂಬಂಧಿಸಿ 624 ಅಂಕಗಳನ್ನು ಪಡೆದ ಶ್ರೀ ಶಾರದಾಂಬಾ ಆಂಗ್ಲಮಾಧ್ಯಮ ಪ್ರೌಢಶಾಲೆಯ ಶ್ರೀರಾಮ್ ಕೆ.ಎಂ. ರಾಜ್ಯಕ್ಕೆ ದ್ವಿತೀಯ ಹಾಗು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾನೆ.
ಮಂಡಳಿ ಅಧ್ಯಕ್ಷೆ ಎನ್. ಮಂಜು ಶ್ರೀ, ಪರೀಕ್ಷಾ ವಿಭಾಗದ ನಿರ್ದೇಶಕ ಗೋಪಾಲ ಕೃಷ್ಣ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದರು. ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ವೆಬ್ಸೈಟ್ನಲ್ಲಿ https://karresults.nic.in ಮೇ 9ರ ಬೆಳಗ್ಗೆ 10.30ರ ನಂತರ ವೀಕ್ಷಿಸಬಹುದಾಗಿದೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಈ ಬಾರಿ ಫಲಿತಾಂಶವನ್ನು ತಡವಾಗಿ ಬಿಡುಗಡೆ ಮಾಡಲಾಗಿತ್ತು.
ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ರಾಜ್ಯಕ್ಕೆ ಉಡುಪಿ ಮೊದಲ ಸ್ಥಾನ, ದಕ್ಷಿಣ ಕನ್ನಡ ಎರಡನೇ ಸ್ಥಾನ ಹಾಗೂ ಶಿವಮೊಗ್ಗ ಮೂರನೇ ಸ್ಥಾನ ಪಡೆದರೆ, ಯಾದಗಿರಿ ಕೊನೆಯ ಸ್ಥಾನವನ್ನು ಪಡೆದಿದೆ. ಪಾಸಾಗಲಿ, ಫೇಲಾಗಲಿ 3 ಬಾರಿ ಪರೀಕ್ಷೆ ಬರೆಯುವ ಅವಕಾಶ ಕಲ್ಪಿಸಲಾಗಿದೆ. ಪಾಸಾದರು ಸಹ ಅಂಕ ಹೆಚ್ಚಿಸಿಕೊಳ್ಳಲು ಮತ್ತೆ ಪರೀಕ್ಷೆ-2, ಪರೀಕ್ಷೆ-3 ಬರೆಯಬಹುದು. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಫಲಿತಾಂಶ ಕುಸಿತ ಕಂಡಿದೆ. 2022-23ರಲ್ಲಿ 83.89% ಇದ್ದರೆ, ಈ ಬಾರಿ 73.40% ಮಂದಿ ಪಾಸ್, ಶೇಕಡಾ 10.49% ರಷ್ಟು ಫಲಿತಾಂಶ ಕುಸಿತವಾಗಿದೆ.