ಬೆಂಗಳೂರು: ರಾಜ್ಯದಲ್ಲಿ ಉದ್ಯೋಗ ಸೃಷ್ಟಿ ಮಾಡುವ ಉದ್ಯಮಗಳಿಗೆ ಹೆಚ್ಚು ಉತ್ತೇಜನ ನೀಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಪಿಎಲ್‍ಐ ಯೋಜನೆಯ ಅಡಿಯಲ್ಲಿ ಕೇಂದ್ರ ಸರ್ಕಾರ ಜವಳಿ ಹಾಗೂ ಅಟೋಮೊಬೈಲ್ ಕ್ಷೇತ್ರಕ್ಕೆ ಹೆಚ್ಚು ಪೆÇ್ರೀತ್ಸಾಹ ನೀಡಲು ಉದ್ದೇಶಿಸಲಾಗಿದೆ. ಉದ್ಯೋಗ ಸೃಷ್ಟಿಗೆ ಸಂಬಂಧಿಸಿದಂತೆ ಶ್ರೇಷ್ಠ ಯೋಜನೆ ಇದಾಗಿದೆ. ಈ ಹಿನ್ನೆಲೆಯಲ್ಲಿ ಮೆಗಾ ಟೆಕ್ಸ್‍ಟೈಲ್ಸ್ ಪಾರ್ಕ್, ಅಟೋಮೊಬೈಲ್ ಸೆಕ್ಟರ್‍ಗಳ ಕ್ಲಸ್ಟರ್‍ಗಳನ್ನು ಮಾಡಲಾಗುತ್ತದೆ. ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ಸಹ ಪ್ರಸ್ತಾಪ ಸಲ್ಲಿಸಲಾಗಿದೆ ಎಂದು ತಿಳಿಸಿದ್ದಾರೆ.
ಅಮೃತ ಯೋಜನೆಯಡಿ ಹಲವು ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿದೆ. ರಾಜ್ಯದ ಪ್ರತಿ ಗ್ರಾಮ ಪಂಚಾಯತ್‍ಗಳ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ 25 ಲಕ್ಷ ರೂ. ಗಳನ್ನು ಹೆಚ್ಚುವರಿಯಾಗಿ ನೀಡಲಿದೆ. ಮಧ್ಯ ಕರ್ನಾಟಕ ಮತ್ತು ಉತ್ತರ ಕರ್ನಾಟಕದಲ್ಲಿ ರೇಷ್ಮೆ ಕೃಷಿಯನ್ನು ಅಭಿವೃದ್ಧಿ ಮಾಡಲಾಗುತ್ತದೆ. ರೇಷ್ಮೆ ಬೆಳೆ ಪ್ರಮುಖವಾಗಿರುವ 8- 10 ಜಿಲ್ಲೆಗಳಲ್ಲಿ ರೇಷ್ಮೆ ಕೃಷಿಯನ್ನು ದೊಡ್ಡ ಪ್ರಮಾಣದಲ್ಲಿ ಅಭಿವೃದ್ಧಿ ಮಾಡಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಚಿಂತನೆ ನಡೆಸಿದೆ ಎಂದು ತಿಳಿಸಿದ್ದಾರೆ.