Slide
Slide
Slide
previous arrow
next arrow

ನೇಣಿಗೆ ಶರಣಾದ ಮಹಿಳೆ: ಪ್ರಕರಣ ದಾಖಲು

300x250 AD

ದಾಂಡೇಲಿ : ನಗರದ ಹಳೆ ದಾಂಡೇಲಿಯ ಸ್ವಾಮಿಲ್ ಹತ್ತಿರದ‌ ಮನೆಯೊಂದರಲ್ಲಿ ಮಹಿಳೆಯೋರ್ವಳು ನೇಣಿಗೆ ಶರಣಾದ ಘಟನೆ ನಡೆದಿದ್ದು, ಮೃತ ಮಹಿಳೆಯ ಮರಣೋತ್ತರ ಪರೀಕ್ಷೆ ಗುರುವಾರ ಸಾರ್ವಜನಿಕ ಆಸ್ಪತ್ರೆಯ ಶವ ಪರೀಕ್ಷಾ ಕೊಠಡಿಯಲ್ಲಿ ನಡೆಯಿತು.

ಸ್ವಾಮಿಲ್ ಹತ್ತಿರದ ನಿವಾಸಿಯಾಗಿರುವ ಶಾರದಾ ಹನುಮಂತ ರಾಥೋಡ (ವ:32) ಎಂಬವಳೇ ಆತ್ಮಹತ್ಯೆ ಮಾಡಿಕೊಂಡ ಮಹಿಳೆಯಾಗಿದ್ದಾಳೆ. ಈಕೆಯ ಪತಿ ಹನುಮಂತ ರಾಥೋಡ್ ಈತನು ಕಾಗದ ಕಾರ್ಖಾನೆಯಲ್ಲಿ ಕಾರ್ಮಿಕನಾಗಿ ಕೆಲಸ ನಿರ್ವಹಿಸುತ್ತಿದ್ದಾನೆ. ಈಕೆಗೆ ಎರಡು ಹೆಣ್ಣು ಮಕ್ಕಳು ಇದ್ದಾರೆ. ಆತ್ಮಹತ್ಯೆಗೆ ಕಾರಣ ಏನೆಂದು ನಿಖರವಾಗಿ ಇನ್ನೂ ತಿಳಿದು ಬಂದಿಲ್ಲ. ಈ ಬಗ್ಗೆ ಪೊಲೀಸ್ ತನಿಖೆಯಿಂದ ಸ್ಪಷ್ಟ ಚಿತ್ರಣ ಹೊರ ಬರಬೇಕಾಗಿದೆ. ದಾಂಡೇಲಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.

300x250 AD
Share This
300x250 AD
300x250 AD
300x250 AD
Back to top