Slide
Slide
Slide
previous arrow
next arrow

ಅಳ್ವೇಕೋಡಿ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಧಂತಿ ಉತ್ಸವ ಸಂಪನ್ನ

300x250 AD

ಭಟ್ಕಳ: ತಾಲ್ಲೂಕಿನ ಪ್ರಸಿದ್ದ ಅಳ್ವೆಕೋಡಿಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ೫೦ನೇ ವರ್ಷದ ಪುನರ್ ಪ್ರತಿಷ್ಠಾ ವರ್ಧಂತಿ ಉತ್ಸವ ಶುಕ್ರವಾರ ಸಂಪನ್ನಗೊಂಡಿತು.

ವರ್ಧಂತಿ ಉತ್ಸವದ ಅಂಗವಾಗಿ ದೇವಸ್ಥಾನದಲ್ಲಿ ಶುಕ್ರವಾರ ಬೆಳಿಗ್ಗೆ ಪುಣ್ಯಾಹ ವಾಚನ,ಶತ ಕುಂಭಾಭಿಷೇಕ, ಪಂಚದುರ್ಗಾ ಹವನ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿತು, ಮಧ್ಯಾಹ್ನ ಮಹಾಮಂಗಳಾರತಿ, ಮಹಾ ಅನ್ನಸಂತರ್ಪಣೆ ನಡೆಯಿತು. ಸಂಜೆ ೪.೩೦ರಿಂದ ಮಹಿಳೆಯಿಂದ ಲಲಿತಾ ಸಹಸ್ರನಾಮ ಪಠಣ, ಸಂಜೆ ೬ ಗಂಟೆಗೆ ಭಜನಾ ಕಾರ್ಯಕ್ರಮ, ರಾತ್ರಿ ಮಹಾಪೂಜೆ, ಪ್ರಸಾದ ವಿತರಣೆ ನಡೆಯಿತು. ವರ್ಧಂತಿ ಉತ್ಸವದ ಅಂಗವಾಗಿ ಶ್ರೀ ದುರ್ಗಾಪರಮೇಶ್ವರಿ ದೇವಿಗೆ ಚಿನ್ನಾಭರಣ ಮತ್ತು ಮಲ್ಲಿಗೆ ಹೂವಿನಿಂದ ವಿಶೇಷ ಅಲಂಕಾರ ಮಾಡಲಾಗಿತ್ತು. ರಾತ್ರಿ ಪ್ರಸಿದ್ಧ ಕಲಾವಿದರ ಕೂಡುವಿಕೆಯಿಂದ ಶ್ರೀ ಕೃಷ್ಣ ಜನ್ಮ ಕಂಸವಧೆ ಯಕ್ಷಗಾನ ಪ್ರದರ್ಶನ ಮನರಂಜಿಸಿತು. ವರ್ಧಂತಿ ಉತ್ಸವದಲ್ಲಿ ದೇವಸ್ಥಾನದ ಅಧ್ಯಕ್ಷ ತಿಮ್ಮಪ್ಪ ಹೊನ್ನಿಮನೆ, ಧರ್ಮದರ್ಶಿಗಳಾದ ನಾರಾಯಣ ದೈಮನೆ, ಹನುಮಂತ ನಾಯ್ಕ, ಅರವಿಂದ ಪೈ, ಮಾರಿ ಜಾತ್ರಾ ಮಹೋತ್ಸವದ ಅಧ್ಯಕ್ಷ ರಾಮಾ ಮೊಗೇರ ಸೇರಿದಂತೆ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದು, ಕಾರ್ಯಕ್ರಮ ಯಶಸ್ವಿಯಾಗಲು ಸಹಕರಿಸಿದರು. ಸಾವಿರಾರು ಭಕ್ತರು ವರ್ಧಂತಿ ಉತ್ಸವದ ಅಂಗವಾಗಿ ಶ್ರೀ ದುರ್ಗಾಪರಮೇಶ್ವರಿ ದೇವಿಗೆ ವಿಶೇಷ ಪೂಜೆ, ಹರಕೆ ಸಲ್ಲಿಸಿದರು. ಮಹಮಂಗಳಾರತಿ ನಂತರ ಪ್ರಸಾದ ಭೋಜನ ನಡೆಯಿತು.

300x250 AD
Share This
300x250 AD
300x250 AD
300x250 AD
Back to top