Slide
Slide
Slide
previous arrow
next arrow

ನ್ಯಾಯಾಲಯದ ಆದೇಶ ಉಲ್ಲಂಘಿಸಿ ಮುಂದುವರಿದ ಮನೆ ನಿರ್ಮಾಣ ಕಾರ್ಯ : ಸೂಕ್ತ ಕ್ರಮಕ್ಕೆ ಆಗ್ರಹ

300x250 AD

ದಾಂಡೇಲಿ : ನಗರದ ಬಂಗೂರುನಗರ ಪದವಿ ಮಹಾವಿದ್ಯಾಲಯದ ಹತ್ತಿರ ಬರ್ಚಿ ರಸ್ತೆಯಲ್ಲಿ‌ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ ಮನೆ ನಿರ್ಮಾಣ ಕಾರ್ಯ ಮುಂದುವರೆದಿದ್ದು, ಈ ಬಗ್ಗೆ ಸೂಕ್ತ ಕ್ರಮಕ್ಕೆ ಸ್ಥಳೀಯರು ಹಾಗೂ ಹಿರಿಯ ನಾಗರಿಕರಾದ ಬಿ.ಆರ್. ಪಾಟೀಲ್ ಆಗ್ರಹಿಸಿದ್ದಾರೆ.

ಅವರು ಶನಿವಾರ ನಗರದಲ್ಲಿ ಮಾಧ್ಯಮಕ್ಕೆ ನೀಡಿದ ಹೇಳಿಕೆಯಲ್ಲಿ, ಬರ್ಚಿ ರಸ್ತೆಯಲ್ಲಿರುವ ನಮ್ಮ ಮನೆಯ ಪಕ್ಕದ ಮನೆಯವರು ನಿಯಮವನ್ನು ಮೀರಿ ಮತ್ತು ಕಾನೂನನ್ನು ಉಲ್ಲಂಘಿಸಿ ಮನೆ ನಿರ್ಮಾಣ ಮಾಡುತ್ತಿದ್ದಾರೆ. ಅವರು ಮನೆ ನಿರ್ಮಾಣ ಮಾಡುವುದಕ್ಕೆ ಅಭ್ಯಂತರವಿಲ್ಲ. ಆದರೆ ನಿಯಮಾವಳಿಯ ಪ್ರಕಾರ ಮನೆ ನಿರ್ಮಾಣ ಮಾಡಬೇಕಿತ್ತು. ಈ ಬಗ್ಗೆ ಸಾಕಷ್ಟು ಬಾರಿ ಸಂಬಂಧಪಟ್ಟವರ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಕೊನೆಗೆ ನ್ಯಾಯಾಲಯದಿಂದ ತಡೆಯಾಜ್ಞೆಯನ್ನು ತಂದಿರುತ್ತೇವೆ. ನ್ಯಾಯಾಲಯದ ತಡೆಯಾಜ್ಞೆ ಇದ್ದರೂ ತಡೆಯಾಜ್ಞೆ ಆದೇಶವನ್ನು ಉಲ್ಲಂಘಿಸಿ ಪಕ್ಕದ ಮನೆಯವರು ಮನೆ ನಿರ್ಮಾಣ ಕಾರ್ಯ ಮಾಡುತ್ತಿದ್ದಾರೆ. ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ ಮನೆ ನಿರ್ಮಾಣ ಕಾರ್ಯ ಮಾಡುತ್ತಿರುವುದರ ಬಗ್ಗೆ ಕೂಡಲೇ ಕಾನೂನು ರೀತಿಯ ಕ್ರಮವನ್ನು ಕೈಗೊಳ್ಳಬೇಕೆಂದು ಬಿ.ಆರ್. ಪಾಟೀಲ್ ಹಾಗೂ ಅವರ ಪುತ್ರರಾದ ಭರತ್ ಪಾಟೀಲ್ ಅವರು ಆಗ್ರಹಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top