Slide
Slide
Slide
previous arrow
next arrow

ದೈನಂದಿನ ಸಾರ್ವಜನಿಕ ಸೇವೆಯಲ್ಲಿ ವ್ಯತ್ಯಯವಾಗಬಾರದು: ಜಿಲ್ಲಾಧಿಕಾರಿ

300x250 AD

ಕಾರವಾರ: ಕಾರವಾರ ನಗರಸಭಾ ಕಚೇರಿಯಲ್ಲಿ ಸಾರ್ವಜನಿಕರಿಗೆ ಒದಗಿಸುವ ಸೇವೆಗಳಲ್ಲಿ ಯಾವುದೇ ವ್ಯತ್ಯಯವಾಗದಂತೆ, ತ್ವರಿತಗತಿಯಲ್ಲಿ ಸಾರ್ವಜನಿಕರಿಂದ ಸಲ್ಲಿಕೆಯಾದ ಅರ್ಜಿಗಳನ್ನು ವಿಲೇವಾರಿ ಮಾಡಿ, ನಾಗರೀಕರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸುವಂತೆ ನಗರಸಭೆ ಅಧಿಕಾರಿಗಳಿಗೆ, ನಗರಸಭೆಯ ಆಡಳಿತಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಸೂಚನೆ ನೀಡಿದರು.
ಅವರು ಗುರುವಾರ ಕಾರವಾರದ ನಗರಸಭೆ ಕಚೇರಿಗೆ ಅನಿರೀಕ್ಷಿತ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ನಗರಸಭೆಯಲ್ಲಿನ ವಿವಿಧ ಶಾಖೆಗಳಿಗೆ ಭೇಟಿ ನಿಡಿದ ಜಿಲ್ಲಾಧಿಕಾರಿಗಳು, ಸಾರ್ವಜನಿಕರಿಂದ ಇದುವರೆಗೆ ಸಲ್ಲಿಕೆಯಾಗಿರುವ ಅರ್ಜಿಗಳು, ವಿಲೇವಾರಿಯಾಗಿರುವ ಅರ್ಜಿಗಳು ಮತ್ತು ಬಾಕಿ ಇರುವ ಅರ್ಜಿಗಳ ಕುರಿತಂತೆ ಪರಿಶೀಲನೆ ನಡೆಸಿ, ನಿಗಧಿತ ಅವಧಿಗಿಂತ ಹೆಚ್ಚುಕಾಲ ಬಾಕಿ ಇಟ್ಟುಕೊಂಡಿರುವ ಅರ್ಜಿಗಳ ಕುರಿತಂತೆ ಪರಿಶೀಲಿಸಿ, ಇವುಗಳನ್ನು ತಕ್ಷಣದಲ್ಲಿ ವಿಲೇವಾರಿ ಮಾಡುವಂತೆ ಸೂಚನೆ ನೀಡಿದರು.
ಲೋಕಸಭಾ ಚುನಾವಣಾ ಕಾರ್ಯಗಳು ಮತ್ತು ನೀತಿ ಸಂಹಿತೆಯ ಕಾರಣ ಹೇಳಿಕೊಂಡು ಸಾರ್ವಜನಿಕರಿಗೆ ಒದಗಿಸುವ ಸೇವೆಗಳಲ್ಲಿ ಅನಗತ್ಯ ವಿಳಂಬ ಮಾಡದಂತೆ ಸಿಬ್ಬಂದಿಗಳಿಗೆ ಸೂಚನೆ ನೀಡಿದ ಅವರು, ನಾಗರೀಕರಿಗೆ ಪ್ರತಿದಿನ ಒದಗಿಸಬೇಕಾದ ಅಗತ್ಯ ಮತ್ತು ತುರ್ತು ಸೇವೆಗಳಲ್ಲಿ ಯಾವುದೇ ವ್ಯತ್ಯಯವಾಗದಂತೆ ಪ್ರತಿಯೊಬ್ಬರೂ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಿ ಎಂದರು.
ನಗರಸಭಾ ವ್ಯಾಪ್ತಿಯಲ್ಲಿ ತೆರಿಗೆ ಸಂಗ್ರಹ ಕುರಿತಂತೆ ಪರಿಶೀಲನೆ ನೆಡಸಿದ ಅವರು, ತೆರಿಗೆ ಸಂಗ್ರಹಣೆಯಲ್ಲಿ ನಿಗಧಿತ ಗುರಿ ಸಾಧನೆಯಾಗದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿ, ಇದುವರೆಗಿನ ತೆರಿಗೆ ಮತ್ತು ಬಾಕಿ ತೆರಿಗೆ ಪಾವತಿ ಮಾಡಬೇಕಿರುವವರ ಪಟ್ಟಿ ಮಾಡಿ, ಅವರಿಗೆ ನೋಟೀಸ್ ನೀಡಿ, ಅವರಿಂದ ಸಂಪೂರ್ಣ ತೆರಿಗೆಯನ್ನು ವಸೂಲಿ ಮಾಡುವಂತೆ ನಿರ್ದೇಶನ ನೀಡಿದರು.
ನಗರಸಭೆಯ ವಿವಿಧ ಯೋಜನೆಗಳಲ್ಲಿನ ಪ್ರಗತಿ ಕುರಿತಂತೆ ಪರಿಶೀಲಿಸಿ, ಎಲ್ಲಾ ಯೋಜನೆಗಳಲ್ಲಿ ಸಂಪೂರ್ಣ ಗುರಿ ಸಾಧಿಸುವಂತೆ ಸೂಚನೆ ನೀಡಿದರು.
ನಗರಸಭೆ ಪೌರಾಯುಕ್ತ ರವಿಕುಮಾರ್ ಉಪಸ್ಥಿತರಿದ್ದರು.

300x250 AD
Share This
300x250 AD
300x250 AD
300x250 AD
Back to top