Slide
Slide
Slide
previous arrow
next arrow

ಕಾಮಗಾರಿಗಳನ್ನು ಅನುಷ್ಠಾನಗೊಳಿಸಿ, ಪ್ರಗತಿ ಸಾಧಿಸಿ; ಈಶ್ವರ ಕಾಂದೂ

300x250 AD

ಕಾರವಾರ: ಮುಂಡಗೋಡ ತಾಲ್ಲೂಕಿನ ಎಲ್ಲಾ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ವಿವಿಧ ಯೋಜನೆ ಹಾಗೂ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ ನಿಗಧಿತ ಪ್ರಗತಿ ಸಾಧಿಸುವಂತೆ ಅಧಿಕಾರಿಗಳಿಗೆ ಜಿ.ಪಂ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಈಶ್ವರ ಕುಮಾರ್ ಕಾಂದೂ ಸೂಚನೆ ನೀಡಿದರು.
ಅವರು ಮುಂಡಗೋಡ ತಾಲ್ಲೂಕು ಪಂಚಾಯತ್‌ನ ಸಭಾಂಗಣದಲ್ಲಿ ನಡೆದ ವಸತಿ, ಎಸ್‌ಬಿಎಂ, ನರೇಗಾ, ಮಹತ್ವಾಕಾಂಕ್ಷಿ ತಾಲ್ಲೂಕು ಕಾರ್ಯಕ್ರಮ, ಎನ್‌ಆರ್‌ಎಲ್‌ಎಂ, ಜೆಜೆಎಂ ಸೇರಿದಂತೆ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ತಾಲ್ಲೂಕಿನ ಎಲ್ಲ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ವಿವಿಧ ಯೋಜನೆ ಹಾಗೂ ಕಾರ್ಯಕ್ರಮಗಳ ಸಮರ್ಪಕ ಅನುಷ್ಠಾನದ ಕುರಿತು ಕ್ಷೇತ್ರ ಮಟ್ಟದಲ್ಲಿ ಸಂಗ್ರಹಿಸಲಾದ ಮಾಹಿತಿ ಹಾಗೂ ದಾಖಲೆಗಳನ್ನು ಎಲ್ಲ ಇಲಾಖೆಗಳಾ ಅಧಿಕಾರಿಗಳು, ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ಸಂಬಂಧಪಟ್ಟ ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಕಡ್ಡಾಯವಾಗಿ ತಲುಪಿಸಬೇಕು. ನರೇಗಾ, ಆರ್‌ಡಬ್ಲ್ಯೂಎಸ್, 15 ನೇ ಹಣಕಾಸು, ತಾಪಂ, ಗ್ರಾಪಂ ಅನುದಾನದಲ್ಲಿ ಜಲ ಸಂರಕ್ಷಣಾ ಕಾಮಗಾರಿಗಳಾದ ಕೊಳವೆ ಬಾವಿ ಮರುಪೂರಣ ಘಟಕ, ಮಳೆ ನೀರು ಕೋಯ್ಲು, ಕೆರೆ, ಬಾವಿ, ಕಾಲುವೆ ನಿರ್ಮಾಣದಂತಹ ಕಾಮಗಾರಿಯನ್ನು ಹೆಚ್ಚಿನ ಪ್ರಮಾಣದಲ್ಲಿ ಕೈಗೊಳ್ಳಬೇಕು. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳೆಲ್ಲರೂ ಸೂಕ್ತ ಕಾರ್ಯಸೂಚಿ ರಚಿಸಿಕೊಂಡು ಕಾರ್ಯನಿರ್ವಹಿಸಬೇಕು ಎಂದರು.
ಆರೋಗ್ಯ, ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕುಡಿಯುವ ನೀರು ಸರಬರಾಜು, ಕೃಷಿ ಇಲಾಖೆಗಳ ಪ್ರಗತಿ ಪರಿಶೀಲಿಸಿದ ಅವರು, ಮಹತ್ವಾಕಾಂಕ್ಷಿ ತಾಲ್ಲೂಕು ಕಾರ್ಯಕ್ರಮದಡಿ ಮುಂಡಗೋಡ ತಾಲ್ಲೂಕಿನಾದ್ಯಂತ ವಿವಿಧ ಜಾಗೃತಿ ಕಾರ್ಯಕ್ರಮಗಳನ್ನು ಕೈಗೊಂಡು ಅರಿವು ಮೂಡಿಸಲು ಪ್ರಾಮುಖ್ಯತೆ ನೀಡಬೇಕು ಎಂದರು.
ಗ್ರಾಮೀಣ ಪ್ರದೇಶದಲ್ಲಿ ಜರುಗುವ ವಿವಿಧ ಕಾರ್ಯಕ್ರಮಗಳಿಂದ ಸಂಗ್ರಹಿಸುವ ಸಾರ್ವಜನಿಕರ ಅನಿಸಿಕೆಗಳ ಆಧಾರದ ಮೇಲೆ ತಾಲ್ಲೂಕಿನಲ್ಲಿ ಆರ್ಥಿಕ ಹಾಗೂ ಆರೋಗ್ಯ ವಿಷಯಗಳಲ್ಲಿ ಉತ್ತಮ ಅಭಿವೃದ್ಧಿ ಸಾಧಿಸಬೇಕು. ಅತ್ಯಂತ ನಿಖರವಾದ ಮಾಹಿತಿ ದಾಖಲೀಕರಣಕ್ಕೆ ವ್ಯವಸ್ಥೆ ಮಾಡಿಕೊಳ್ಳಬೇಕು. ಅಲ್ಲದೇ ತಾಲ್ಲೂಕಿನ ಪ್ರತಿ ಪ್ರಾಥಮಿಕ ಆರೋಗ್ಯ ಕೇಂದ್ರ, ಅಂಗನವಾಡಿ, ಶಾಲೆ, ವಸತಿ ನಿಲಯಗಳಿಗೆ ಮೇಲಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದರು.
ಸಾಂಕ್ರಾಮಿಕ ಕಾಯಿಲೆ ನಿಯಂತ್ರಣ, ಜನನ-ಮರಣ ಪ್ರಮಾಣ ದಾಖಲೀಕರಣ, ಗ್ರಾಮೀಣ ಜನರಿಗೆ ಉತ್ತಮ ಆರೊಗ್ಯ ಸೇವೆ ಪೂರೈಕೆ, ಮಕ್ಕಳಿಗೆ ಪೋಷಣ ಅಭಿಯಾನದಡಿ ಗುಣಮಟ್ಟದ ಆಹಾರ ವಿತರಣೆ, ಕ್ರಿಯಾತ್ಮಕ ಶೈಕ್ಷಣಿಕ ಚಟುವಟಿಕೆಗಳ ಮೂಲಕ ಉತ್ತಮ ಶೀಕ್ಷಣ ಒದಗಿಸಲು ಪೂರಕ ಕ್ರಮ ಕೈಗೊಳ್ಳಬೇಕು. ಶಾಲಾ-ಕಾಲೇಜುಗಳಲ್ಲಿನ ಶೌಚಾಲಯ, ಆಟದ ಮೈದಾನ ಸಮರ್ಪಕವಾಗಿ ಇರುವ ಬಗ್ಗೆ ಪರಿಶೀಲಿಕೊಂಡು ಅಗತ್ಯವಿರುವ ಕಡೆಗಳಲ್ಲಿ ನರೇಗಾ ಸೇರಿದಂತೆ ವಿವಿಧ ಅನುಧಾನದಡಿ ಕಾಮಗಾರಿ ತೆಗೆದುಕೊಳ್ಳಲು ಸೂಕ್ತ ಕ್ರಮ ಕೈಗೊಳ್ಳಬೇಕು. ಎಂದರು.
ತಾಲ್ಲೂಕಿನ ಸಮಗ್ರ ಅಭಿವೃದ್ಧಿಗಾಗಿ ಜವಬ್ದಾರಿಯುತ ಹುದ್ದೆಗಳಲ್ಲಿರುವ ಎಲ್ಲ ತಾಲ್ಲೂಕು ಮಟ್ಟದ ಅಧಿಕಾರಿಗಳು ಕಾರ್ಯ ಕ್ಷೇತ್ರದಲ್ಲಿಯೇ ವಾಸವಿದ್ದು, ತಮ್ಮ ತಮ್ಮ ಇಲಾಖೆ ವ್ಯಾಪ್ತಿಯಲ್ಲಿನ ಅನುಷ್ಠಾವನದ ಕಾರ್ಯಕ್ರಮಗಳ ಮೇಲ್ವಿಚಾರಣೆ, ಪ್ರಗತಿ ಸಾಧನೆ ಕುರಿತು ಹೆಚ್ಚು ಗಮನಹರಿಸಬೇಕು. ಈ ಕುರಿತು ಪ್ರತಿ ಹಂತದ ಡೆಟಾ ಸಂಗ್ರಹಣೆ ಮಾಡಬೇಕು ಎಂದು ತಿಳಿಸಿದರು.

ಎಸ್‌ಬಿಎಂ ನಡಿ ಒಡಿಎಫ್ ಫ್ಲಸ್, ಜೆಜೆಎಂ ನಡಿ ಹರ್‌ಗರ್ ಜಲ್ ಘೋಷಣೆ, ಬಿಎಸ್‌ಎನ್‌ಎಲ್ ನೆಟ್ವರ್ಕ್ ಸಂಪರ್ಕ, ಎನ್‌ಆರ್‌ಎಲ್‌ಎಂ ನಡಿ ಮಹಿಳಾ ಸ್ವಸಹಾಯ ಸಂಘಗಳ ನೊಂದಣಿ, ಬ್ಯಾಂಕಿಂಗ್ ಸೆಂಟರ್ ಅವಶ್ಯಕತೆ ಇರುವ ಕಡೆಗಳಲ್ಲಿ ಬಿಸಿ ಸಖಿ ನೇಮಕದ ಬಗ್ಗೆ ಗಮನಹರಿಸಲು ಸೂಚಿಸಿದರು.
ಇದೇ ಸಂದರ್ಭದಲ್ಲಿ ಪ್ರಸಕ್ತ ಸಾಲಿನ ಪಿಯುಸಿ ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ತೆರ್ಗಡೆಯಾದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು. ಎನ್‌ಆರ್‌ಎಲ್‌ಎಂ ಯೋಜನೆಯಡಿಯ ವಿವಿಧ ಗ್ರಾಮ ಪಂಚಾಯತಿ ಮಟ್ಟದ ಸ್ವಸಹಾಯ ಸಂಘಗಳ ಮಹಿಳೆಯರಿಂದ ತಯಾರಿಸಿದ ಉಡುಗೊರೆಯಾಗಿ ನೀಡಲು ಯೋಗ್ಯವಾದ ಐದು ಆದಾಯೋತ್ಪನ್ನ ಚಟುವಟಿಕೆಗಳನ್ನು ಒಳಗೊಂಡ ಉಡುಗೊರೆ ಬುಟ್ಟಿಯನ್ನು ಲಾಂಚ್ ಮಾಡಿದರು.
ಸಭೆಯ ನಂತರದಲ್ಲಿ ಚೌಡಳ್ಳಿ, ನಂದಿಕಟ್ಟಾ ಹಾಗೂ ಹುನಗುಂದ ಗ್ರಾಮ ಪಂಚಾಯತಿ, ಪ್ರಾಥಮಿಕ ಆರೋಗ್ಯ ಕೇಂದ್ರ, ನರೇಗಾ ಹಾಗೂ ಜೆಜೆಎಂ ಕಾಮಗಾರಿ ಸ್ಥಳಗಳಿಗೆ ಭೇಟಿನೀಡಿ ಪರಿಶೀಲಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್‌ನ ಮುಖ್ಯ ಯೋಜನಾಧಿಕಾರಿವಿನೋದ ಅಣ್ವೇಕರ, ನರೇಗಾ ಸಹಾಯಕ ನಿರ್ದೇಶಕಸೋಮಲಿಂಗಪ್ಪ ಛಬ್ಬಿ, ವ್ಯವಸ್ಥಾಪಕಪ್ರಕಾಶ ಎಂ.ಕೆ. ಸೇರಿದಂತೆ ವಿವಿಧ ಇಲಾಖೆಗಳ ತಾಲ್ಲೂಕು ಮಟ್ಟದ ಅಧಿಕಾರಿಗಳು, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ನರೇಗಾ, ಎಸ್‌ಬಿಎಂ ಎನ್‌ಆರ್‌ಎಲ್‌ಎಂ ಅಧಿಕಾರಿಗಳು, ತಾಪಂ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

300x250 AD
Share This
300x250 AD
300x250 AD
300x250 AD
Back to top