ಕುಮಟಾ: ತಾಲೂಕಿನ ದೀವಗಿಯ ಚತುಷ್ಪಥ ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಚಾಲಕ ಹಾಗೂ ಕ್ಲೀನರ್ ಗಂಭೀರ ಗಾಯಗೊಂಡ ಘಟನೆ ಇಂದು ನಡೆದಿದೆ.
ಹುನಗುಂದ ತಾಲೂಕಿನ ಕೂಡಲಸಂಗಮದ ಕ್ಲೀನರ್ ಶಿವಕುಮಾರ ಮಠ (19), ಇಳಕಲ್ ತಾಲೂಕಿನ ಚಾಮಲಾಪುರದ ಚಾಲಕ ಮಂಜುನಾಥ ಮಡಿವಾಳ(29) ಗಾಯಗೊಂಡವರು. ತಮಿಳುನಾಡಿನ ತಿರುಚಿಯ ಆರೋಪಿತ ಲಾರಿ ಚಾಲಕ ಗೋಪಿ ಮುರುಗೇಶನ್ (26) ತನ್ನ ಲಾರಿಯನ್ನು ಅಂಕೋಲಾ ಕಡೆಯಿಂದ ಕುಮಟಾ ಕಡೆಗೆ ಅತಿ ವೇಗದಿಂದ ಚಲಾಯಿಸುತ್ತಿದ್ದ ಈತ ಕುಮಟಾ ಕಡೆಯಿಂದ ಅಂಕೋಲಾ ಕಡೆಗೆ ತೆರಳುತ್ತಿದ್ದ ಲಾರಿಗೆ ದೀವಗಿ ಬಳಿಯ ಚತುಷ್ಪಥ ರಾಷ್ಟ್ರೀಯ ಹೆದ್ದಾರಿಯಲ್ಲಿ ಡಿಕ್ಕಿ ಹೊಡೆದಿದ್ದಾನೆ.
ಘಟನೆಯಲ್ಲಿ ಎರಡೂ ವಾಹನಗಳು ಹೆದ್ದಾರಿ ಪಕ್ಕದ ಗಟಾರದಲ್ಲಿ ಬಿದ್ದ ಪರಿಣಾಮ ಚಾಲಕ ಹಾಗೂ ನಿರ್ವಾಹಕ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಕುಮಟಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು ಪ್ರಕರಣ ದಾಖಲಾಗಿದೆ.