Slide
Slide
Slide
previous arrow
next arrow

ಡೆಂಗಿ ಜ್ವರ: ಮುಂಜಾಗೃತಾ ಮಾಹಿತಿ ಇಲ್ಲಿದೆ..!

300x250 AD

1) ಡೆಂಗಿ ಜ್ವರ ಎಂದರೇನು?
ಡೆಂಗಿ ಜ್ವರ ವೈರಸ್ ನಿಂದ ಉಂಟಾಗುವ ಖಾಯಿಲೆ. ಇದು ಸೋಂಕು ಹೊಂದಿದ ಈಡಿಸ್ ಇಜಿಪ್ಟೈ ಸೊಳ್ಳೆಯ ಕಚ್ಚುವಿಕೆಯಿಂದ ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ಈ ಸೊಳ್ಳೆಗಳು ಸಾಮಾನ್ಯವಾಗಿ ಸ್ವಚ್ಛ ನೀರಿನಲ್ಲಿಸಂತಾನಾಭಿವೃದ್ಧಿ ಮಾಡುತ್ತವೆ ಹಾಗೂ ಹಗಲು ಹೊತ್ತಿನಲ್ಲಿ ಮನುಷ್ಯರನ್ನು ಕಚ್ಚುತ್ತವೆ.

2) ಈ ರೋಗದ ಮುಖ್ಯ ಲಕ್ಷಣಗಳಾವುವು?
ಇದ್ದಕ್ಕಿದ್ದಂತೆ ತೀವ್ರ ಜ್ವರ, ವಿಪರೀತ ತಲೆನೋವು, ಕಣ್ಣುಗಳ ಹಿಂಭಾಗ, ಮಾಂಸಖಂಡ ಮತ್ತು ಕೀಲುಗಳಲ್ಲಿ ವಿಪರೀತ ನೋವು ಕಾಣಿಸಿಕೊಳ್ಳುವುದು, ಈ ರೋಗದ ಪ್ರಮುಖ ಲಕ್ಷಣಗಳು. ತೀವ್ರ ಸ್ಥಿತಿಯಲ್ಲಿ ಬಾಯಿ, ಮೂಗು ಮತ್ತು ಒಸಡುಗಳಿಂದ ರಕ್ತಸ್ರಾವ ಹಾಗೂ ಚರ್ಮದ ಮೇಲೆ ಅಲ್ಲಲ್ಲಿ ರಕ್ತಸ್ರಾವದ ಗುರುತುಗಳು ಕಾಣಿಸಿಕೊಳ್ಳುತ್ತದೆ.

3) ಈ ರೋಗಕ್ಕೆ ಚಿಕಿತ್ಸೆ ಏನು?
ಡೆಂಗಿ ಜ್ವರಕ್ಕೆ ಯಾವುದೇ ನಿರ್ದಿಷ್ಟ ಔಷಧಿ ಅಥವಾ ಲಸಿಕೆ ಇರುವುದಿಲ್ಲ. ರೋಗದ ಲಕ್ಷಣಗಳಿಗನುಸಾರವಾಗಿ ವೈದ್ಯರಿಂದ ಸೂಕ್ತ ಚಿಕಿತ್ಸೆ ಪಡೆಯಬಹುದು. ಇಂತಹ ಲಕ್ಷಣಗಳು ಕಂಡುಬಂದರೆ ತಕ್ಷಣ ಹತ್ತಿರದ ಸರಕಾರಿ ಆಸ್ಪತ್ರೆ, ಪ್ರಾಥಮಿಕ ಆರೋಗ್ಯ ಕೆಂದ್ರದ ವೈದ್ಯರಲ್ಲಿ ಪರೀಕ್ಷಿಸಿಕೊಂಡು ಸೂಕ್ತ ಚಿಕಿತ್ಸೆಯನ್ನು ಪಡೆಯಬೇಕು.

300x250 AD

4) ಈ ರೋಗದ ನಿಯಂತ್ರಣ ಹೇಗೆ?
ಸೊಳ್ಳೆಗಳ ನಿಯಂತ್ರಣ ಒಂದೇ ಡೆಂಗಿ ರೋಗದ ಹತೋಟಿಗೆ ಮುಖ್ಯ ವಿಧಾನ. ಈ ಸೊಳ್ಳೆಗಳು ನೀರನ್ನು ಶೇಖರಿಸಿಡುವ ಸಿಮೆಂಟ್ ತೊಟ್ಟಿ, ಕಲ್ಲುಚಪ್ಪಡಿಯಿಂದ ನಿರ್ಮಿಸಿದ ತೊಟ್ಟಿ, ಡ್ರಮ್ಮು, ಬ್ಯಾರೆಲ್, ಮಣ್ಣಿನ ಮಡಿಕೆ, ಉಪಯೋಗಿಸದ ಒರಳುಕಲ್ಲು ಮುಂತಾದ ಕಡೆ ಶೇಖರವಾಗುವ ನೀರಿನಲ್ಲಿ ಉತ್ಪತ್ತಿಯಾಗುವುದರಿಂದ ಈ ರೀತಿ ನೀರು ನಿಲ್ಲದಂತೆ ಎಚ್ಚರಿಕೆ ವಹಿಸಬೇಕು.

ಮುಂಜಾಗೃತಾ ಕ್ರಮ
• ಎಲ್ಲಾ ನೀರಿನ ತೊಟ್ಟಿ, ಡ್ರಮ್ಮು, ಬ್ಯಾರೆಲ್, ಏರ್ ಕೂಲರ್ ಇತ್ಯಾದಿಗಳನ್ನು ವಾರಕ್ಕೊಮ್ಮೆ ಖಾಲಿ ಮಾಡಿ, ಒಣಗಿಸಿ ಮತ್ತೆ ಭರ್ತಿ ಮಾಡಿಕೊಳ್ಳುವುದು.
• ನೀರು ಖಾಲಿಮಾಡಲು ಸಾಧ್ಯವಿಲ್ಲದ ತೊಟ್ಟಿ ಮುಂತಾದವುಗಳನ್ನು ಸೊಳ್ಳೆಗಳು ಒಳಗೆ ನುಸುಳದಂತೆ ಸರಿಯಾದ ಮುಚ್ಚಳದಿಂದ ಮುಚ್ಚುವುದು.
• ಬಯಲಿನಲ್ಲಿರುವ ತ್ಯಾಜ್ಯ ವಸ್ತುಗಳಾದ ಟೈರು, ಎಳೆನೀರಿನ ಚಿಪ್ಪು, ಒಡೆದ ಬಾಟಲಿ ಮುಂತಾದವುಗಳಲ್ಲಿ ಮಳೆ ನೀರು ಸಂಗ್ರಹವಾಗದಂತೆ ಎಚ್ಚರವಹಿಸುವುದು ಅಥವಾ ಸೂಕ್ತ ವಿಲೇವಾರಿ ಮಾಡುವುದು.
• ಸ್ವಯಂ ರಕ್ಷಣಾ ವಿಧಾನಗಳಾದ ಸೊಳ್ಳೆ ನಿರೋಧಕಗಳನ್ನು ಹಾಗೂ ಸೊಳ್ಳೆ ಪರದೆಯನ್ನು ಬಳಸಿ, ಸೊಳ್ಳೆಗಳು ಕಚ್ಚದಂತೆ ಎಚ್ಚರಿಕೆ ವಹಿಸುವುದು.

Share This
300x250 AD
300x250 AD
300x250 AD
Back to top