Slide
Slide
Slide
previous arrow
next arrow

ಮುಂಗಾರು ವಿಪತ್ತು ನಿರ್ವಹಣೆಗೆ ಸರ್ವಸನ್ನಧ್ದರಾಗಿ : ಡಿಸಿ ಮಾನಕರ್

300x250 AD

ಕಾರವಾರ: ಜಿಲ್ಲೆಯಲ್ಲಿ ಪ್ರಸ್ತುತ ಮುಂಗಾರು ಸಂದರ್ಭದಲ್ಲಿ ತಲೆದೋರುವ ಯಾವುದೇ ರೀತಿಯ ವಿಪತ್ತುಗಳನ್ನು ಸಮರ್ಥವಾಗಿ ಎದುರಿಸಲು ಎಲ್ಲಾ ಇಲಾಖೆಗಳು ಸರ್ವ ಸನ್ನದ್ದರಾಗುವಂತೆ ಮತ್ತು ಎಲ್ಲಾ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಸೂಚನೆ ನೀಡಿದರು,
ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯ ಜಿಲ್ಲೆಯಲ್ಲಿ ಮುಂಗಾರು ಸಂದರ್ಭದಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ನಡೆದ ಅಧ್ಯಕ್ಷೆ ವಹಿಸಿ ಮಾತನಾಡಿದರು.
ಜಿಲ್ಲೆಯ ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯತ್ ಗಳಲ್ಲಿ ಒಳ ಚರಂಡಿ ಹಾಗೂ ನೀರು ಹರಿದು ಹೋಗುವ ಕಾಲುವೆಗಳನ್ನು ಸ್ವಚ್ಚಗೊಳಿಸಬೇಕು. ಕುಡಿಯುವ ನೀರಿನ ಮೂಲಗಳನ್ನು ಸ್ವಚ್ಚಗೊಳಿಸಿ, ಯಾವುದೇ ರೀತಿಯಲ್ಲಿ ಕಲುಷಿತಗೊಳ್ಳದಂತೆ ಎಚ್ಚರವಹಿಸುವುದರ ಜೊತೆಗೆ ಸಾರ್ವಜನಿಕರ ಕುಂದುಕೊರತೆಗೆ ಗ್ರಾಮೀಣ ಮಟ್ಟದಲ್ಲಿ ಹಾಗೂ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಗಳಲ್ಲಿ ಸ್ಪಂದಿಸಲು 24 * 7 ಕಂಟ್ರೋಲ್ ರೂಮ್ ಸ್ಥಾಪಿಸುವಂತೆ ತಿಳಿಸಿದರು.
ತುರ್ತು ಸಂದರ್ಭದಲ್ಲಿ ಸಾರ್ವಜನಿಕರ ರಕ್ಷಣಾ ಕಾರ್ಯಾಚರಣೆಗೆ ಸಂಬಂಧಿಸಿದಂತೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಅವಘಡಗಳು ಸಂಭವಿಸಬಹುದಾದ ಸ್ಥಳಗಳ ಗುರುತಿಸಬೇಕು. ಸಾರ್ವಜನಿಕರ ಕುಂದುಕೊರತೆಗೆ ಸ್ಪಂಧಿಸಲು 24 * 7 ಕಂಟ್ರೋಲ್ ರೂಮ್ ಸ್ಥಾಪನೆ ಮಾಡುವಂತೆ ಪೋಲಿಸ್ ಜಿಲ್ಲಾ ಅಗ್ನಿ ಶಾಮಕ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಶರಾವತಿ ಮತ್ತು ಲಿಂಗನಮಕ್ಕಿ ಜಲಾಶಯಗಳ ನೀರಿನ ಮಟ್ಟದಲ್ಲಿ ಅಗತ್ಯ ಕುಷನ್ ಕಾಯ್ದುಕೊಳ್ಳಬೇಕು. ಜಲಾಶಯಗಳಿಂದ ನೀರನ್ನು ಬಿಡುವ ಮೊದಲು ಸಂಬAಧಿಸಿದ ತಹಶೀಲ್ದಾರರು ಹಾಗೂ ಸಹಾಯಕ ಆಯುಕ್ತರಿಗೆ ಹಾಗೂ ಸಾರ್ವಜನಿಕರಿಗೆ ಮಾಹಿತಿ ನೀಡಿ, ಜಲಾಶಯಗಳಿಂದ ಒಮ್ಮೇಲೆ ನೀರನ್ನು ಹೊರಬಿಡದೇ ಹಂತಹಂತವಾಗಿ ಬಿಡಬೇಕು. ಜಲಾಶಯಗಳ ಗೇಟುಗಳು, ವಾಲ್ ಗಳ ಕಾರ್ಯಕ್ಷಮತೆಯನ್ನು ಪರಿಶೀಲಿಸುತ್ತಿರಬೇಕು.ಜಲಾಶಯದ ಒಳಹರಿವು, ಹೊರಹರಿವು, ನೀರಿನ ಮಟ್ಟಗಳ ಕುರಿತು ಪ್ರತಿ ದಿನ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಕಂಟ್ರೋಲ್ ರೂಮ್ ಗೆ ಮಾಹಿತಿ ನೀಡಬೇಕು ಎಂದರು.
ಜಿಲ್ಲೆಯ ಎಲ್ಲಾ ಸಹಾಯಕ ಆಯುಕ್ತರು ಹಾಗೂ ತಹಶೀಲ್ದಾರ್ ಗಳು, ತಾಲೂಕಾ ಮಟ್ಟದ ಹಾಗೂ ಉಪವಿಭಾಗ ಮಟ್ಟದ ವಿಪತ್ತು ನಿರ್ವಹಣಾ ಯೋಜನೆಯನ್ನು ತಯಾರಿಸಿ, ಪ್ರವಾಹ ಸಂಭವಿಸಬಹುದಾದಂತಹ ಪ್ರದೇಶಗಳನ್ನು ಗುರುತಿಸಬೇಕು. ಆ ಪ್ರದೇಶಗಳಿಗೆ ನೋಡಲ್ ಅಧಿಕಾರಿಗಳನ್ನು ನೇಮಿಸಿ, ರಕ್ಷಣಾ ಕಾರ್ಯಾಚರಣೆಯ ಕುರಿತಂತೆ, ಮುಳುಗುತಜ್ಞರ ವಿವರ, ವೃತ್ತಿಪರ ಈಜುಗಾರರ ವಿವರ, ದೋಣಿಗಳ ಮಾಲೀಕರ ವಿವರ, ಕಾಳಜಿ ಕೇಂದ್ರಗಳು ವಿವರಗಳನ್ನೊಳಗೊಂಡ ಸವಿವರವಾದ ತಾಲೂಕಾ ಮಟ್ಟದ ಹಾಗೂ ಉಪವಿಭಾಗ ಮಟ್ಟದ ವಿಪತ್ತುನಿರ್ವಹಣಾ ಯೋಜನೆ ಕ್ರೀಯಾಯೋಜನೆಯನ್ನು ತಯಾರಿಸಬೇಕು.
ಸರ್ಕಾರದ ಮಾರ್ಗಸೂಚಿಯನ್ವಯ ತಕ್ಷಣ ಪರಿಹಾರ ವಿತರಣೆ, ಮುಂಗಾರು ಪೂರ್ವಸಿದ್ಧತೆಗೆ ಸಂಬಂಧಿಸಿದಂತೆ ತಾಲೂಕಾ ಮಟ್ಟದಲ್ಲಿ ಹಾಗೂ ಉಪವಿಭಾಗ ಮಟ್ಟದಲ್ಲಿ ಸಂಬಂಧಿಸಿದ ಅಧಿಕಾರಿಗಳ ಸಭೆ ನಡೆಸಬೇಕು.ಹಾನಿಯ ವರದಿಯನ್ನು ನಿಗಧಿತ ನಮೂನೆಯಲ್ಲಿ ಅಪಡೇಟ್ ಮಾಡುವುದರ ಜೊತೆಗೆ ಸಾರ್ವಜನಿಕರ ಕುಂದುಕೊರತೆಗೆ ಸ್ಪಂಧಿಸಲು 24 *7 ಕಂಟ್ರೋಲ್ ರೂಮ್ ಸ್ಥಾಪನೆ ಮಾಡಬೇಕು ಎಂದರು.
ಮಳೆಗಾಲದಲ್ಲಿ ಹರಡಬಹುದಾದ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಲು ಅಗತ್ಯ ಕ್ರಮ ವಿಪತ್ತುಗಳ ಸಂದರ್ಭದಲ್ಲಿ ರಕ್ಷಣಾ ಕಾರ್ಯಾಚರಣೆಯಲ್ಲಿ ತುರ್ತು ಚಿಕಿತ್ಸೆ ಮುಂಜಾಗ್ರತ ಕ್ರಮ ಅಳವಡಿಸಿಕೊಂಡು ಸಂಬAಧಿಸಿದ ಅಧಿಕಾರಿ/ಸಿಬ್ಬಂಧಿಗಳಿಗೆ ತರಬೇತಿ ನೀಡುವುದು. ಅಗತ್ಯ ಔಷಧ ಹಾಗೂ ವೈಧ್ಯಕೀಯ ಸಲಕರಣೆಗಳ ಸಾಕಷ್ಟು ಇರುವಂತೆ ಖಚಿಪಡಿಸಿಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಿಗೆ ಸೂಚಿಸಿದರು.
ಸಮುದ್ರ ಕೊರೆತವನ್ನು ತಡೆಗಟ್ಟುವ ಬಗ್ಗೆ ಇಲಾಖಾ ವತಿಯಿಂದ ಅಗತ್ಯ ಕ್ರಮ ಕೈಕೊಳ್ಳುವುದರ ಜೊತೆಗೆ ರಕ್ಷಣಾ ಕಾರ್ಯಾಚರಣೆಯಲ್ಲಿ ಸಹಕರಿಸಬೇಕು ಎಂದು ಬಂದರು ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.
ಸಣ್ಣ ನೀರಾವರಿ ಇಲಾಖೆ, ಹಳಿಯಾಳಚೆಕ್ ಡ್ಯಾಮ್ಸ್, ಕೆರೆಗಳು, ಕಾಲುವೆಗಳು ಮುಂತಾದವುಗಳಲ್ಲಿ ಹೂಳು ತುಂಬಿದಲ್ಲಿ ಅದನ್ನು ತೆಗೆಯುವುದು. ಚೆಕ್ ಡ್ಯಾಮ್ಸ್ ಗಳ ಗೇಟ್ ಗಳ ಹಾಗೂ ಕೆರೆಗಳ ವಡ್ಡುಗಳ ಕಾರ್ಯಕ್ಷಮತೆಯನ್ನು ಪರಿಶೀಲಿಸಿ ಸದೃಡಪಡಿಸುವಂತೆ ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಮಳೆಗಾಲದಲ್ಲಿ ಉಂಟಾಗಬಹುದಾದ ವಿದ್ಯುತ್ ಅವಘಡಗಳನ್ನು ತಪ್ಪಿಸಲು ಅಗತ್ಯ ಮುಂಜಾಗೃತಾ ಕ್ರಮ ಕೈಗೊಳ್ಳಬೇಕು. ಅಗತ್ಯ ವಿದ್ಯುತ್ ಪರಿಕರಗಳ ಸಂಗ್ರಹಣೆ , ಸಹಾಯವಾಣಿ ಸ್ಥಾಪನೆ, ಹಾನಿಯ ವರದಿಯನ್ನು ಸಲ್ಲಿಸಬೇಕು. ವಿದ್ಯುತ್ ತಂತಿಗಳಿಗೆ ತಗಲುವ ಮರ ಗಿಡಗಳ ಟೊಂಗೆಗಳನ್ನು ಕತ್ತರಿಸಿ ಹಾನಿ ಉಂಟಾಗದAತ ಮುಂಚಿತವಾಗಿ ಕ್ರಮ ಕೈಕೊಳ್ಳುವಂತೆ ಹೆಸ್ಕಾಂ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಕೃಷಿ ಇಲಾಖೆ ಮತ್ತು ತೋಟಗಾರಿಕೆ ಇಲಾಖೆವತಿಯಿಂದ ರೈತರಿಗೆ ಬಿತ್ತನೆ ಮಾಡಲು ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳನ್ನು ಯಾವುದೇ ಕೊರತೆಯಾಗದಂತೆ ಪೂರೈಸಬೇಕು. ಬೆಳೆ ಹಾನಿಗೆ ಪರಿಹಾರ ವಿತರಣೆಯಲ್ಲಿ ಜಂಟಿ ತಪಾಸಣೆ ಮಾಡಿ ತಕ್ಷಣದಲ್ಲಿ ವರದಿ ನೀಡಬೆಕು ಎಂದರು.
ರಾಷ್ಟ್ರೀಯ ಹೆದ್ದಾರಿಗಳ/ ಇತರೆ ರಸ್ತೆಗಳ ಬದಿಯಲ್ಲಿರುವ ಕಚ್ಚಾ ಸಾಮಗ್ರಿಗಳನ್ನು ಹಾಗೂ ರಸ್ತೆಯ ಪಕ್ಕದ ನೀರು ಹರಿದು ಹೋಗುವ ಮಾರ್ಗವನ್ನು ಸ್ವಚ್ಚಗೊಳಿಸಿ ನೀರು ಹರಿದು ಹೋಗಲು ಸೂಕ್ತ ವ್ಯವಸ್ಥೆ ಮಾಡಬೇಕು. ಗುಡ್ಡ ಕುಸಿತ ಸಂಭವಿಸಬಹುದಾದ ಸ್ಥಳಗಳನ್ನು ಗುರುತಿಸಿ, ತುರ್ತು ಸಂದರ್ಭದಲ್ಲಿ ಸ್ಪಂದಿಸಲು ಅಗತ್ಯ ರಕ್ಷಣಾ ಸಾಮಗ್ರಿಗಳನ್ನೊಳಗೊಂಡ ತಂಡಗಳನ್ನು ರಚನೆ ಮಾಡಿ ನಿಯೋಜಿಸಬೇಕು. ರಸ್ತೆಗಳ ಮೇಲೆ ಗುಡ್ಡ ಕುಸಿತವಾದಲ್ಲಿ ರಸ್ತೆಯ ಮೇಲೆ ಬಿದ್ದಿರುವ ಮಣ್ಣನ್ನು ತೆರವುಗೊಳಿಸಲು ಹಾಗೂ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಲು ತುರ್ತು ಸಹಾಯವಾಣಿಗಳನ್ನು ತೆರೆಯುವಂತೆ ರಾಷ್ಟಿçÃಯ ಹೆದ್ದಾರಿ , ಲೋಕೋಪಯೋಗಿ ಹಾಗೂ ಪಂಚಾಯತ್ ರಾಜ್ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಾನುವಾರುಗಳ ಅಗತ್ಯ ಮೇವಿನ ದಾಸ್ತಾನು, ಪ್ರವಾಹ ಸಂದರ್ಭದಲ್ಲಿ ಅವಶ್ಯಕತೆ ಕಂಡುಬAದಲ್ಲಿ ಗೋಶಾಲೆಗಳನ್ನು ತೆರೆದು, ದನಕರುಗಳನ್ನು ಸೂಕ್ತ ಜಾಗಕ್ಕೆ ಸಾಗಿಸಲು ಕಂದಾಯ ಇಲಾಖೆಯ ಅಧಿಕಾರಿಗಳೊಂದಿಗೆ ಸಹಕರಿಸುವಂತೆ ಪಶುಪಾಲನಾ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಚಂಡಮಾರುತ ಹಾಗೂ ಹವಾಮಾನ ವೈಪರಿತ್ಯಗಳ ಕುರಿತು ಮೀನುಗಾರರಿಗೆ ಪೂರ್ವಭಾವಿಯಾಗಿ ಸೂಚನೆ ನೀಡಬೇಕು. ರಕ್ಷಣಾ ಕಾರ್ಯಾಚರಣೆಗೆ ದೋಣಿಗಳನ್ನು ತಾಲ್ಲೂಕು ಆಡಳಿತಕ್ಕೆ ಒದಗಿಸುವುದು ದೋಣಿ ಮತ್ತು ಬಲೆಗಳಿಗೆ ಹಾನಿಯಾಗದಲ್ಲಿ ಅವುಗಳಿಗೆ ಪರಿಹಾರ ವಿತರಣೆ ಕುರಿತಂತೆ ಹಾನಿಯ ವರದಿ ನೀಡಬೇಕು. ತುರ್ತು ಸಂದರ್ಭದಲ್ಲಿ ನೆರವು ಪಡೆಯಲು ವೃತ್ತಿಪರ ಈಜುಗಾರರ ವಿವರಗಳನ್ನು ತಾಲ್ಲೂಕು ಆಡಳಿತಕ್ಕೆ ಸಲ್ಲಿಸುವಂತೆ ಮೀನುಗಾರಿಕೆ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅರಣ್ಯ ವ್ಯಾಪ್ತಿಯಲ್ಲಿ ಮರಗಿಡಗಳು ಬಿದ್ದಲ್ಲಿ ಅವನ್ನು ತೆರವುಗೊಳಿಸಿ, ರಕ್ಷಣಾ ಕಾರ್ಯಾಚರಣೆಗೆ ಸಹಕರಿಸುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ವಿಪತ್ತು ಸಂದರ್ಭದಲ್ಲಿ ಜಿಲ್ಲೆಯಲ್ಲಿ ಮಾನವ ಜೀವ ಹಾನಿಯಾಗದಂತೆ ಹೆಚ್ಚಿನ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದ ಜಿಲ್ಲಾಧಿಕಾರಿಗಳು, ಎಲ್ಲಾ ಅಧಿಕಾರಿಗಳು ಕೇಂದ್ರಸ್ಥಾನದಲ್ಲಿದ್ದು, ಅಗತ್ಯ ಸಂದರ್ಭದಲ್ಲಿ ತಕ್ಷಣದಲ್ಲಿ ಸಂಪರ್ಕಕ್ಕೆ ದೊರೆಯಬೇಕು. ಜಿಲ್ಲೆಯ ಎಲ್ಲಾ ಇಲಾಖೆಗಳು ಮತ್ತು ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕರ್ತವ್ಯ ನಿರ್ವಹಿಸುವ ಮೂಲಕ ಸಾರ್ವಜನಿಕರ ಸಮಸ್ಯೆಗಳಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸಬೇಕು ಎಂದರು.
ಸಭೆಯಲ್ಲಿ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ ಕುಮಾರ್ ಕಾಂದೂ, ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಜಪೂತ್, ಡಿಸಿಎಫ್ ರವಿಶಂಕರ್ , ಉಪ ವಿಭಾಗಾಧಿಕಾರಿ ಕನಿಷ್ಕ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

300x250 AD
Share This
300x250 AD
300x250 AD
300x250 AD
Back to top