ಶಿರಸಿ: ಕಳೆದ ಅಗಸ್ಟ್ನಲ್ಲಿ ನಡೆದ ಟಿಎಸ್ಎಸ್ ಚುನಾವಣೆಯಲ್ಲಿ ಅಧಿಕಾರಕ್ಕೇರಿದ್ದ ಗೋಪಾಲಕೃಷ್ಣ ವೈದ್ಯ ನೇತೃತ್ವದ ಹಾಲಿ ಆಡಳಿತ ಮಂಡಳಿ ಚುನಾವಣಾಧಿಕಾರಿಗೆ ಆಮೀಷ ಒಡ್ಡಿ, ಅಧಿಕಾರ ದುರುಪಯೋಗಪಡಿಸಿಕೊಂಡು ಚುನಾವಣೆ ಪ್ರಕ್ರಿಯೆಯಲ್ಲಿ ಅಕ್ರಮ ಎಸಗಿದ್ದರು ಎಂದು ಕೆಲ ಸದಸ್ಯರು ಕೋರ್ಟಿನಲ್ಲಿ ಪ್ರಕರಣ ದಾಖಲಿಸಿದ್ದರು ಎನ್ನಲಾಗಿದ್ದು, ಪ್ರಕರಣದ ತೀರ್ಪು ಶುಕ್ರವಾರ ಹೊರಬಿದ್ದಿದೆ.
ಹಲವು ತಿಂಗಳುಗಳ ಕಾಲ ವಿಚಾರಣೆ ನಡೆಸಿದ ಡಿಆರ್ ಕೋರ್ಟ್ ಹಾಲಿ ಆಡಳಿತ ಮಂಡಳಿಯ ಅಧಿಕಾರವನ್ನು ಮೊಟಕುಗೊಳಿಸಿ ಮುಂದಿನ ಆದೇಶದವರೆಗೆ ವಿಶೇಷ ಆಡಳಿತಾಧಿಕಾರಿಯನ್ನು ನೇಮಿಸಿ ಆದೇಶ ಹೊರಡಿಸಿದೆ ಎಂದು ತಿಳಿದುಬಂದಿದೆ. ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.