Slide
Slide
Slide
previous arrow
next arrow

ಮೇ.27ರಿಂದ ಎನ್‌ಎಸ್ಎಸ್ ನಾಯಕತ್ವ ಶಿಬಿರ

300x250 AD

ದಾಂಡೇಲಿ : ನಗರದ ಅಂಬೇವಾಡಿಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮೇ.27 ರಿಂದ ಜೂನ್.2 ರವರೆಗೆ ಕರ್ನಾಟಕ ವಿಶ್ವವಿದ್ಯಾಲಯ ಮಟ್ಟದ ಎನ್. ಎಸ್.‌ ಎಸ್‌ ನಾಯಕತ್ವ ಶಿಬಿರವನ್ನು ಕ.ವಿ.ವಿ ಯ ರಾಷ್ಟ್ರೀಯ ಸೇವಾ ಯೋಜನಾ ಕೋಶದ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದೆ. ಕರ್ನಾಟಕ ವಿಶ್ವವಿದ್ಯಾಲಯದ ವ್ಯಾಪ್ತಿಯ ಎಲ್ಲ ಮಹಾವಿದ್ಯಾಲಯಗಳಿಂದ 250 ಸ್ವಯಂ ಸೇವಕರು/ ಸೇವಕಿಯರು ಈ ಒಂದು ವಾರದ ಈ ಶಿಬಿರದಲ್ಲಿ ಭಾಗವಹಿಸಲಿದ್ದಾರೆ. ಧ್ವಜಾರೋಹಣದೊಂದಿಗೆ ಪ್ರಾರಂಭವಾಗುವ ಶಿಬಿರಾರ್ಥಿಗಳ ದಿನಚರಿ, ಶ್ರಮದಾನ, ಜಾಗೃತಿ ಜಾಥಾ, ಗುಂಪು ಚರ್ಚೆ, ವಿಶೇಷ ಉಪನ್ಯಾಸ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಒಳಗೊಂಡಿದೆ.

ಮೇ. 27 ರಂದು ಧಾರವಾಡದ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಅಕಾಡೆಮಿಯ ನಿರ್ದೇಶಕರಾದ ಡಾ. ಚ್ರಂದ ಪೂಜಾರಿ ಈ ಶಿಬಿರವನ್ನು ಉದ್ಘಾಟಿಸಲಿದ್ದಾರೆ. ಉದ್ಘಾಟನಾ ಕಾರ್ಯಕ್ರಮದಲ್ಲಿ ಗಣ್ಯಾತಿಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಈ ಶಿಬಿರದಲ್ಲಿ ಪ್ರತಿದಿನ ಸಾಮಾಜಿಕ, ಶೈಕ್ಷಣಿಕ, ಆರೋಗ್ಯ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಪ್ರತಿದಿನವೂ ಸ್ಥಳೀಯ ಕಲಾ ಸಂಸ್ಕೃತಿಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ. ಎನ್ಎಸ್ಎಸ್ ಶಿಬಿರಾರ್ಥಿಗಳಲ್ಲಿ ನಾಯಕತ್ವದ ಗುಣವನ್ನು ಮೈಗೂಡಿಸಿಕೊಳ್ಳಲು ಪ್ರೇರಣಾ ಯಾಗಿ ಈ ಶಿಬಿರ ನಡೆಯಲಿದೆ ಎಂದು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯರಾದ ಡಾ.ಎಂ.ಡಿ. ಒಕ್ಕುಂದ ಭಾನುವಾರ ನಗರದಲ್ಲಿ ಮಾಧ್ಯಮಕ್ಕೆ ನೀಡಿದ ಮಾಹಿತಿಯಲ್ಲಿ ತಿಳಿಸಿದ್ದಾರೆ.

300x250 AD

,

Share This
300x250 AD
300x250 AD
300x250 AD
Back to top