Slide
Slide
Slide
previous arrow
next arrow

ಜಲ ಸಾಹಸ ಕ್ರೀಡೆಗಳ ಆಯ್ಕೆ ಪ್ರಕ್ರಿಯೆ

300x250 AD

ಕಾರವಾರ: ಪ್ರಸಕ್ತ ಸಾಲಿನಲ್ಲಿ ಕಾರವಾರ ಕ್ರೀಡಾ ವಸತಿ ನಿಲಯಕ್ಕೆ 5ನೇ ಮತ್ತು 8ನೇ ತರಗತಿಗೆ ಸೇಲಿಂಗ್, ಕಯಾಕಿಂಗ್ ಮತ್ತು ಕೆನೊಯಿಂಗ್ ಕ್ರೀಡಾ ವಿಭಾಗಗಳಲ್ಲಿನ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಮಾಲಾದೇವಿ ತಾಲ್ಲೂಕು ಕ್ರೀಡಾಂಗಣದಲ್ಲಿ ಮೇ 31 ರಂದು ಬೆಳಗ್ಗೆ 9.30 ಗಂಟೆಗೆ ನಡೆಯಲಿದೆ.
4ನೇ ಮತ್ತು 7ನೇ ತರಗತಿಗಳಲ್ಲಿ ತೇರ್ಗಡೆಯಾದ ಹಾಗೂ ಕ್ರಮವಾಗಿ ಪ್ರಸ್ತುತ ಶೈಕ್ಷಣಿಕ ಸಾಲಿನ 1ನೇ ಜೂನ್‌ಗೆ 11 ಮತ್ತು 14 ವರ್ಷಗಳನ್ನು ಮೀರದ ಬಾಲಕರಿಗೆ ಪ್ರವೇಶಾವಕಾಶ ನೀಡಲಾಗುವುದು. ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳು ಜನನ ಪ್ರಮಾಣ ಪತ್ರ, ವ್ಯಾಸಾಂಗ ಪ್ರಮಾಣ ಪತ್ರ, ಪಾಸ್‌ಪೋರ್ಟ್ ಸೈಜ್ ಫೋಟೋ ಕಡ್ಡಾಯವಾಗಿ ತರಬೇಕು.
ಇಲಾಖೆಯಿಂದ ಮೊದಲನೇ ಬಾರಿ ಜಲಸಾಹಸ ಕ್ರೀಡಾ ವಿಭಾಗದಲ್ಲಿ ವಸತಿ ನಿಲಯಗಳಿಗೆ ಆಯ್ಕೆ ಪ್ರಕ್ರಿಯೆಯನ್ನು ಆಯೋಜಿಸಲಾಗುತ್ತಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡಾಪಟುಗಳು ಇದರ ಪ್ರಯೋಜನ ಪಡೆಯುವಂತೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕಾರವಾರ ಇವರ ದೂರವಾಣಿ ಸಂಖ್ಯೆ: Tel:+917899104699ಗೆ ಕಚೇರಿ ವೇಳೆಯಲ್ಲಿ ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top