ಯಲ್ಲಾಪುರ: ತಾಲೂಕಿನ ಅರಬೈಲ್ ಘಟ್ಟದ ತಿರುವಿನಲ್ಲಿ ಸಾರಿಗೆ ಬಸ್ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬಸ್‍ನಲ್ಲಿದ್ದ 9 ಜನರು ಗಾಯಗೊಂಡ ಘಟನೆ ನಡೆದಿದೆ.
ಚಾಲಕನು ಲಾರಿಯನ್ನು ಹುಬ್ಬಳ್ಳಿ ಕಡೆಯಿಂದ ಅಂಕೋಲಾ ಕಡೆಗೆ ಅತಿವೇಗ ಹಾಗೂ ನಿರ್ಲಕ್ಷ್ಯ ದಿಂದ ಚಲಾಯಿಸಿಕೊಂಡು ಬಂದು ಎದುರಿಗೆ ಹೋಗುತ್ತಿದ್ದ ಇನ್ನೊಂದು ಲಾರಿಯನ್ನು ಓವರ್ ಟೇಕ್ ಮಾಡುವ ಸಂದರ್ಭದಲ್ಲಿ ಎದುರಿನಿಂದ ಬಂದ ಸಾರಿಗೆ ಬಸ್ ಡಿಕ್ಕಿಯಾಗಿದೆ. ಈ ಬಸ್ಸು ಕಾರವಾರದಿಂದ ಹುಬ್ಬಳ್ಳಿಗೆ ಹೋಗುತ್ತಿತ್ತು. ಈ ಘಟನೆಯಲ್ಲಿ ಲಾರಿ ಮತ್ತು ಬಸ್ ಮುಂಭಾಗ ಜಖಂಗೊಂಡಿದೆ