Slide
Slide
Slide
previous arrow
next arrow

ಮತ ಎಣಿಕೆ ಕಾರ್ಯ ಎಚ್ಚರಿಕೆಯಿಂದ ನಿರ್ವಹಿಸಿ: ಗಂಗೂಬಾಯಿ ಮಾನಕರ

300x250 AD

ಕುಮಟಾ: ಲೋಕಸಭಾ ಸಾರ್ವತ್ರಿಕ ಚುನಾವಣೆ-2024ಕ್ಕೆ ಸಂಬಂಧಿಸಿದಂತೆ, ಜೂನ್4 ರಂದು ನಡೆಯುವ ಮತ ಎಣಿಕೆ ಕಾರ್ಯಕ್ಕೆ ನಿಯೋಜಿಸಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳು, ಮತ ಎಣಿಕೆ ಸಂದರ್ಭದಲ್ಲಿ, ಮತಗಳ ಎಣಿಕೆಯಲ್ಲಿ ಯಾವುದೇ ತಪ್ಪುಗಳಾಗದಂತೆ ತಮ್ಮ ಕರ್ತವ್ಯವನ್ನು ಅತ್ಯಂತ ಎಚ್ಚರಿಕೆಯಿಂದ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಹೇಳಿದರು.
ಅವರು ಕುಮಟಾದ ಹಾಲಕ್ಕಿ ಒಕ್ಕಲಿಗರ ಸಮುದಾಯ ಭವನದಲ್ಲಿ, ಮತ ಎಣಿಕೆ ಕಾರ್ಯಕ್ಕೆ ನಿಯೋಜಿಸಿರುವ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಆಯೋಜಿಸಿದ್ದಮತ ಎಣಿಕೆ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಚುನಾವಣೆಯ ಅತ್ಯಂತ ಪ್ರಮುಖ ಮತ್ತು ಅಂತಿಮ ಹಂತವಾದ ಮತ ಎಣಿಕೆ ಕಾರ್ಯವು ಇಡೀ ಚುನಾವಣೆ ಪ್ರಕ್ರಿಯೆಯ ಮಹತ್ವದ ಘಟ್ಟವಾಗಿದ್ದು, ಕ್ಷೇತ್ರದ ಜನಪ್ರತಿಯೊಬ್ಬರನ್ನು ಆಯ್ಕೆ ಮಾಡುವ ಈ ಪ್ರಕ್ರಿಯೆಯಲ್ಲಿ ಮತ ಎಣಿಕೆ ಸಿಬ್ಬಂದಿಗಳು ಯಾವುದೇ ಗೊಂದಲ, ಆತುರ, ಒತ್ತಡಗಳಿಗೆ ಒಳಗಾಗದೇ, ನಿಖರವಾದ ಫಲಿತಾಂಶವನ್ನು ನೀಡಲು ಅನುಕೂಲವಾಗುವಂತೆ ಅತ್ಯಂತ ಜವಾಬ್ದಾರಿಯುತವಾಗಿ ಮತ ಎಣಿಕೆ ಕಾರ್ಯವನ್ನು ನಿರ್ವಹಿಸುವಂತೆ ತಿಳಿಸಿದರು.
ಮತ ಎಣಿಕೆ ಕಾರ್ಯಕ್ಕೆ ನಿಯೋಜಿಸಿರುವ ಸಿಬ್ಬಂದಿಗಳು ತಮಗೆ ನಿಗಧಿಪಡಿಸಿದ ಅವಧಿಗೆ ಸರಿಯಾಗಿ ಮತ ಎಣಿಕೆ ಕೇಂದ್ರಕ್ಕೆ ಹಾಜರಾಗಿ, ತಮ್ಮ ಟೇಬಲ್ ಬಳಿ ಕರ್ತವ್ಯ ನಿರ್ವಹಿಸುವಂತೆ ಹಾಗೂ ಪ್ರತೀ ಹಂತದ ಮತ ಎಣಿಕೆಯ ವಿವರಗಳನ್ನು ಕೇಂದ್ರದಲ್ಲಿ ಹಾಜರಿರುವ ಅಭ್ಯರ್ಥಿಗಳು ಮತ್ತು ಅವರ ಏಜೆಂಟರ್‌ಗಳಿಗೆ ಯಾವುದೇ ಗೊಂದಲಕ್ಕೆ ಒಳಗಾಗದಂತೆ ತಿಳಿಸುವುದರ ಮೂಲಕ ಸಕಾಲದಲ್ಲಿ ನಿಖರ ಫಲಿತಾಂಶ ನೀಡಲು ಅನುಕೂಲವಾಗುವಂತೆ ಕಾರ್ಯ ನಿರ್ವಹಿಸಬೇಕು ಎಂದರು.
ಹಿಂದೆ ಎಷ್ಟೇ ಬಾರಿ ಮತ ಎಣಿಕೆಯ ಕರ್ತವ್ಯ ನಿರ್ವಹಿಸಿದ್ದರೂ ಕೂಡಾ , ಪ್ರತಿಯೊಂದು ಚುನಾವಣೆ ಮತ್ತು ಮತ ಎಣಿಕೆ ಕಾರ್ಯವು ಒಂದಕ್ಕಿಂತ ವಿಭಿನ್ನವಾಗಿದ್ದು ಸಿಬಬದಿಗಳು ಮತ ಎಣಿಕೆ ಕಾರ್ಯವನ್ನು ಅತ್ಯಂತ ಎಚ್ಚರಿಕೆಯಿಂದ ನಿರ್ವಹಿಸಬೇಕು. ಎಣಿಕೆಯ ಸಂದರ್ಭದಲ್ಲಿ ಯಾವುದೇ ಗೊಂದಲಗಳಿಗೆ ಆಸ್ಪದ ನೀಡದೇ, ಮತಗಳನ್ನು ಸ್ಪಷ್ಟವಾಗಿ ಕ್ರೋಡಿಕರಿಸಿ, ಅಭ್ಯಥಿಗಳು ಮತ್ತು ಅವರ ಏಜೆಂಟರುಗಳಿಂದ ಯಾವುದೇ ಆಕ್ಷೇಪಣೆಗಳು ಬಾರದಂತೆ ಎಚ್ಚರವಹಿಸುವಂತೆ ಹಾಗೂ ಯಾವುದೇ ರೀತಿಯ ಗೊಂದಲಗಳು ಕಂಡು ಬಂದಲ್ಲಿ ತಕ್ಷಣ ಆಯಾ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿಗಳ ಗಮನಕ್ಕೆ ತರುವಂತೆ ತಿಳಿಸಿದರು.
ಮತ ಎಣಿಕೆ ಕಾರ್ಯದ ಕುರಿತಂತೆ ಚುನಾವಣಾ ಆಯೋಗ ನೀಡಿರುವ ನಿರ್ದೇಶನಗಳ್ನು ಎಲ್ಲಾ ಸಿಬ್ಬಂದಿಗಳು ಚಾಚೂ ತಪ್ಪದೇ ಪಾಲಿಸುವಂತೆ ತಿಳಿಸಿದ ಅವರು, ಇ.ವಿ.ಎಂ ಗಳಲ್ಲಿನ ಮತ ಎಣಿಕೆ ಮತ್ತು ಪೋಸ್ಟಲ್ ಬ್ಯಾಲೆಟ್ ಗಳ ಎಣಿಕೆಯ ಕುರಿತಂತೆ ಯಾವುದೇ ಗೊಂದಲಗಳಿದ್ದಲ್ಲಿ ತರಬೇತಿ ಸಮಯದಲ್ಲಿ ಬಗೆಹರಿಸಿಕೊಳ್ಳುವಂತೆ ತಿಳಿಸಿದರು.
ತರಬೇತಿ ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಜಪೂತ್ ಉಪಸ್ಥಿತರಿದ್ದರು.

300x250 AD
Share This
300x250 AD
300x250 AD
300x250 AD
Back to top